CoolCoder44 commited on
Commit
c579157
·
verified ·
1 Parent(s): c777d49

e42b8a45e239df5b32bfa3cf7b02ce5cd275c8ae923a177a014f53cdc93b45ba

Browse files
Files changed (50) hide show
  1. eesanje/url_46_58_11.txt +10 -0
  2. eesanje/url_46_58_12.txt +15 -0
  3. eesanje/url_46_58_2.txt +9 -0
  4. eesanje/url_46_58_3.txt +7 -0
  5. eesanje/url_46_58_4.txt +5 -0
  6. eesanje/url_46_58_5.txt +7 -0
  7. eesanje/url_46_58_6.txt +6 -0
  8. eesanje/url_46_58_7.txt +6 -0
  9. eesanje/url_46_58_8.txt +5 -0
  10. eesanje/url_46_58_9.txt +5 -0
  11. eesanje/url_46_59_1.txt +14 -0
  12. eesanje/url_46_59_10.txt +7 -0
  13. eesanje/url_46_59_11.txt +15 -0
  14. eesanje/url_46_59_12.txt +5 -0
  15. eesanje/url_46_59_2.txt +6 -0
  16. eesanje/url_46_59_3.txt +10 -0
  17. eesanje/url_46_59_4.txt +12 -0
  18. eesanje/url_46_59_5.txt +7 -0
  19. eesanje/url_46_59_6.txt +5 -0
  20. eesanje/url_46_59_7.txt +5 -0
  21. eesanje/url_46_59_8.txt +7 -0
  22. eesanje/url_46_59_9.txt +6 -0
  23. eesanje/url_46_5_1.txt +12 -0
  24. eesanje/url_46_5_10.txt +7 -0
  25. eesanje/url_46_5_11.txt +11 -0
  26. eesanje/url_46_5_12.txt +12 -0
  27. eesanje/url_46_5_2.txt +17 -0
  28. eesanje/url_46_5_3.txt +11 -0
  29. eesanje/url_46_5_4.txt +6 -0
  30. eesanje/url_46_5_5.txt +5 -0
  31. eesanje/url_46_5_6.txt +8 -0
  32. eesanje/url_46_5_7.txt +7 -0
  33. eesanje/url_46_5_8.txt +9 -0
  34. eesanje/url_46_5_9.txt +13 -0
  35. eesanje/url_46_60_1.txt +5 -0
  36. eesanje/url_46_60_10.txt +5 -0
  37. eesanje/url_46_60_11.txt +5 -0
  38. eesanje/url_46_60_12.txt +11 -0
  39. eesanje/url_46_60_2.txt +10 -0
  40. eesanje/url_46_60_3.txt +9 -0
  41. eesanje/url_46_60_4.txt +8 -0
  42. eesanje/url_46_60_5.txt +9 -0
  43. eesanje/url_46_60_6.txt +8 -0
  44. eesanje/url_46_60_7.txt +11 -0
  45. eesanje/url_46_60_8.txt +8 -0
  46. eesanje/url_46_60_9.txt +13 -0
  47. eesanje/url_46_61_1.txt +6 -0
  48. eesanje/url_46_61_10.txt +7 -0
  49. eesanje/url_46_61_11.txt +9 -0
  50. eesanje/url_46_61_12.txt +7 -0
eesanje/url_46_58_11.txt ADDED
@@ -0,0 +1,10 @@
 
 
 
 
 
 
 
 
 
 
 
1
+ ದೋಸ್ತಿಗಳ ವಿರುದ್ಧವೇ ರೊಚ್ಚಿಗೆದ್ದ ಕೇಂದ್ರ ಸಚಿವ ಕುಮಾರಸ್ವಾಮಿ
2
+ ನವದೆಹಲಿ,ಜು.31-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಿಂದ ಮೈಸೂರಿನವರೆಗೆ ಬಿಜೆಪಿ ನಡೆಸಲಿರುವ ಪಾದಯಾತ್ರೆ ವಿಚಾರದಲ್ಲಿ ಸರಿಯಾದ ರೀತಿ ನಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ಮೇಲೆ ನಾವು ಏಕೆ ಬೆಂಬಲ ಕೊಡಬೇಕೆಂದು ಜೆಡಿಎಸ್‌‍ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾದಯಾತ್ರೆ ಕಾರ್ಯಕ್ರಮದ ಮುಖ್ಯಸ್ಥರಾಗಿ ಮಾಜಿ ಶಾಸಕ ಪ್ರೀತಂ ಗೌಡರನ್ನು ಬಿಂಬಿಸಲಾಗುತ್ತಿದೆ. ಆ ಪ್ರೀತಂಗೌಡ ಯಾರು? ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಕುಟುಂಬ ಸರ್ವನಾಶ ಮಾಡಲು ಹೊರಟವರನ್ನು ಸಭೆಗೆ ಕರೆದು ಕೂರಿಸುತ್ತಾರೆ. ನನ್ನನ್ನು ಆಹ್ವಾನಿಸುತ್ತಾರೆ. ನನಗೂ ಸಹಿಸಿಕೊಳ್ಳಲು ಇತಿಮಿತಿ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
4
+ ಹಾಸನದ ಬೀದಿಯಲ್ಲಿ ಪೆನ್‌ಡ್ರೈವ್‌ ಹಂಚಲು ಯಾರು ಕಾರಣ. ಅಂಥವರನ್ನು ಜೊತೆಯಲ್ಲಿ ಕೂರಿಸಿಕೊಂಡು ನಮನ್ನು ಸಭೆಗೆ ಕರೆಯುತ್ತಾರೆ. ನಮ ಕುಟುಂಬಕ್ಕೆ ವಿಷ ಹಾಕಿದವರನ್ನು ಸಭೆಗೆ ಕೂರಿಸಿಕೊಳ್ಳುತ್ತಾರೆ ಎಂದು ರಾಜ್ಯ ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
5
+ ಬೆಂಗಳೂರಿನಿಂದ ಮೈಸೂರಿನವರೆಗೆ ನಮ ಶಕ್ತಿ ಪ್ರಬಲವಾಗಿದೆ. ರಾಜಕಾರಣವೇ ಬೇರೆ, ಚುನಾವಣೆ ಬಂದಾಗ ಒಟ್ಟಿಗೆ ಹೋಗುವುದು ಬೇರೆ. ಆದರೆ ಇಂತಹ ಹೋರಾಟದ ವಿಚಾರದಲ್ಲಿ ವಿಶ್ವಾಸಕ್ಕೆ ಪಡೆಯದಿರುವುದು ಮನಸ್ಸಿಗೆ ತುಂಬ ನೋವಾಗಿದೆ ಎಂದಿದ್ದಾರೆ.
6
+ ಬಿಜೆಪಿಯವರು ಪಾದಯಾತ್ರೆ ಮಾಡಬೇಕೆಂಬ ನಿರ್ಧಾರ ಮಾಡಿದ್ದಾರೆ. ನಮಗೆ ಮಾಹಿತಿಗಾಗಿ ಹೇಳಿದ್ದಾರೆ ಅಷ್ಟೇ. ಬಿಜೆಪಿ ನಿಲುವಿನಲ್ಲಿ ತೀರ್ಮಾನ ತೆಗೆದುಕೊಂಡು ಹೋರಾಟ ಮಾಡುತ್ತಿದ್ದಾರೆ. ಆದರೆ ನಾವು ಪಾದಯಾತ್ರೆಗೆ ಸೂಕ್ತ ಸಂದರ್ಭವಲ್ಲ ಎಂದು ಹಿಂದೆ ಸರಿದಿದ್ದೇವೆ. ನಮಗೆ ಜನರ ಸಮಸ್ಯೆ ಬಗೆಹರಿಸುವುದು ಮುಖ್ಯ ಎಂದು ಹೇಳಿದ್ದಾರೆ.
7
+ ರಾಜ್ಯದಲ್ಲಿ ಅತಿವೃಷ್ಟಿ, ಪ್ರವಾಹದಿಂದ ಜನರು ತತ್ತರಿಸಿ ಹೋಗಿದ್ದಾರೆ. ಒಂದು ಕುಟುಂಬವನ್ನು ಮುಂದಿಟ್ಟುಕೊಂಡು ಪಾದಯಾತ್ರೆ ಮಾಡುವುದು ಬೇಡ. ಈ ಸಂದರ್ಭದಲ್ಲಿ ಜನರ ನೋವಿಗೆ ಅವರ ಭಾವನೆಗಳಿಗೆ ಸ್ಪಂದಿಸುವ ಕೆಲಸವಾಗಬೇಕು. ಕೇವಲ ರಾಜಕೀಯವೇ ಮುಖ್ಯವಲ್ಲ.
8
+ ಉತ್ತರ ಕರ್ನಾಟಕದ ನೂರಾರು ಗ್ರಾಮಗಳು ಜಲಾವೃತ್ತವಾಗಿದೆ. ಹಲವು ಕುಟುಂಬಗಳು ಬೀದಿಗೆ ಬಂದಿವೆ. ಇಂತಹ ಸಮಯದಲ್ಲಿ ಪಾದಯಾತ್ರೆ ಸೂಕ್ತವಲ್ಲ. ಹೀಗಾಗಿ ನಿನ್ನೆ ಕೋರ್‌ ಕಮಿಟಿ ಸಭೆಯಲ್ಲಿ ಪಾದಯಾತ್ರೆಯಲ್ಲಿ ಭಾಗಿಯಾಗದಿರಲು ನಿರ್ಧಾರ ತೆಗೆದುಕೊಂಡಿದ್ದಾರೆ. ಕೋರ್‌ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ನೇತೃತ್ವದಲ್ಲಿ ಸಭೆ ನಡೆಸಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದರು.
9
+ ಕೇರಳದಲ್ಲಿ ನೂರಾರು ಜನರು ಸಾವನ್ನಪ್ಪಿದ್ದಾರೆ. ಗುಡ್ಡ ಕುಸಿತದಲ್ಲಿ ಕರ್ನಾಟಕದಿಂದ ಹೋದವರು ಕಣರೆಯಾಗಿದ��ದಾರೆ. ವಾಪಸ್‌‍ ಬರಲು ಸಮಸ್ಯೆ ಎದುರಿಸುತ್ತಿದ್ದಾರೆ. ರಾಜ್ಯದಲ್ಲೂ ಹಲವೆಡೆ ರೆಡ್‌, ಎಲ್ಲೋ ಅಲರ್ಟ್‌ ಘೋಷಣೆಯಾಗಿದೆ. ಹಲವು ಜಿಲ್ಲೆಗಳು ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
10
+ ಮಂಡ್ಯ ಭಾಗದಲ್ಲಿ ಭತ್ತದ ಸಸಿ ನಾಟಿ ಮಾಡುವ ಕೆಲಸ ಶುರುವಾಗಲಿದೆ. ಈ ಹಿನ್ನಲೆಯಲ್ಲಿ ಪಾದಯಾತ್ರೆ ಮುಂದೂಡುವ ನಿರ್ಧಾರಕ್ಕೆ ಬಂದಿದ್ದಾರೆ.
eesanje/url_46_58_12.txt ADDED
@@ -0,0 +1,15 @@
 
 
 
 
 
 
 
 
 
 
 
 
 
 
 
 
1
+ ವಯನಾಡು ಭೂಕುಸಿತದಲ್ಲಿ ಕರ್ನಾಟಕದ ನಾಲ್ವರ ಸಾವು, ದಂಪತಿ ಸೇರಿ ಹಲವರು ನಾಪತ್ತೆ
2
+ ವಯನಾಡು,ಜು.31– ಕೇರಳದ ವಯನಾಡಿನಲ್ಲಿ ನಡೆದ ಭೀಕರ ಭೂಕುಸಿತ ಪ್ರಕರಣದಲ್ಲಿ ಕರ್ನಾಟಕದ ಚಾಮರಾಜನಗರ ಮೂಲದ ನಾಲ್ವರು ಸಾವನ್ನಪ್ಪಿದ್ದು, ಇಬ್ಬರು ದಂಪತಿ ಸೇರಿದಂತೆ ಹಲವರು ನಾಪತ್ತೆಯಾಗಿದ್ದಾರೆ.
3
+ ಪುಟ್ಟಸಿದ್ದಶೆಟ್ಟಿ (62), ರಾಣಿ ಮದರ್‌ (50), ರಾಜನ್‌, ರಜಿನಿ ಎಂಬುವರು ಮೃತಪಟ್ಟಿದ್ದು, ರಾಜನ್‌ ಮತ್ತು ರಜನಿ ದಂಪತಿ ನಾಪತ್ತೆಯಾಗಿದ್ದಾರೆ. ಅಲ್ಲದೇ ಮಂಡ್ಯ ಕೆ.ಆರ್‌ ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮ ಲೀಲಾವತಿ, ನಿಹಾಲ್‌ ಎಂಬವರೂ ನಾಪತ್ತೆಯಾಗಿದ್ದಾರೆ. ಮೂವರು (ಅನಿಲ್‌, ಪತ್ನಿ ಝಾನ್ಸಿ, ತಂದೆ ದೇವರಾಜು) ಗಾಯಗೊಂಡಿದ್ದಾರೆ. ಘಟನೆಯಲ್ಲಿ ಹತ್ತಾರು ಮಂದಿ ಕಣರೆ ಆಗಿದ್ದಾರೆ. ಒಟ್ಟು 13 ಮಂದಿ ನಾಪತ್ತೆಯಾಗಿದ್ದಾರೆ.
4
+ ಇನ್ನುಳಿದವರಿಗಾಗಿ ತೀವ್ರ ಶೋಧ ನಡೆಯುತ್ತಿದೆ. ಈವರೆಗೆ ರಾಜೇಂದ್ರ (50), ರತ್ನಮ(45), ಪುಟ್ಟಸಿದ್ದಶೆಟ್ಟಿ (62), ರಾಣಿ (50) ಎಂಬವರ ಶವಗಳನ್ನು ರಕ್ಷಣಾ ಪಡೆಗಳು ಹೊರತೆಗೆದಿವೆ. ಗುರುಮಲ್ಲನ್‌(10), ಸಾವಿತ್ರಿ (54), ಸಬಿತಾ (43),ಶಿವಣ್ಣನ್‌ (50), ಅಪ್ಪಣ್ಣನ್‌(39), ಅಶ್ವಿನ್‌ (13), ಜೀತು (11), ದಿವ್ಯಾ (35),ರತ್ನಾ(48) ಎಂಬುವವರು ಕರ್ನಾಟಕದವರೇ ಆಗಿದ್ದು, ನಾಪತ್ತೆಯಾಗಿದ್ದಾರೆ.
5
+ ವೈನಾಡಿನಲ್ಲಿ ಕರ್ನಾಟಕ ಮೂಲದ ನಾಪತ್ತೆಯಾದವರಿಗಾಗಿ ಅಧಿಕಾರಿಗಳು ಸ್ಥಳದಲ್ಲೇ ಇದ್ದು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಗುಂಡ್ಲುಪೇಟೆ ತಹಸೀಲ್ದಾರ್‌ ರಮೇಶ್‌ ಬಾಬು ನೇತೃತ್ವದಲ್ಲಿ ನಾಪತ್ತೆಯಾದವರ ಪತ್ತೆಗಾಗಿ ಶೋಧ ನಡೆದಿದೆ.
6
+ ಮೆಪ್ಪಾಡಿಯಲ್ಲಿ ವಾಸವಿದ್ದ ಚಾಮರಾಜನಗರದ ಪುಟ್ಟ ಸಿದ್ದಿ(62) ಹಾಗು ರಾಣಿ ಎಂಬವರ ತಾಯಿ ಸಾವಿಗೀಡಾಗಿದ್ದಾರೆ. ಚಾಮರಾಜನಗರ ತಾಲೋಕು ಇರಸವಾಡಿ ಮೂಲದ ರಾಜನ್‌ ಹಾಗು ರಜನಿ ನಾಪತ್ತೆಯಾಗಿದ್ದಾರೆ. ಕಳೆದ ಮೂವತ್ತು ವರ್ಷಗಳಿಂದ ಕೇರಳದ ಚೂರಲ್ಲಾದಲ್ಲಿ ವಾಸವಿದ್ದ ರಾಜನ್‌ ಹಾಗು ರಜನಿ(55) ವಾಸವಿದ್ದರು. ರಾಜನ್‌, ರಜನಿಗಾಗಿ ಶೋಧಕಾರ್ಯ ನಡೆದಿದೆ.
7
+ ತ್ರಯಂಬಕಪುರದ ಸ್ವಾಮಿಶೆಟ್ಟಿ ಎಂಬವರಿಗೆ ಗಾಯಗಳಾಗಿವೆ. ರಾಜೇಂದ್ರ, ರತ್ನಮ ಚಾಮರಾಜನಗರ ತಾಲೂಕಿನ ಇರಸವಾಡಿ ಗ್ರಾಮದವರು. ಇಬ್ಬರ ಶವ ಇನ್ನೂ ಪತ್ತೆಯಾಗಿಲ್ಲ. ವೈನಾಡು ಜಿಲ್ಲೆಯ ಮೆಪ್ಪಾಡಿಯ ವೈತ್ರಿ ತಾಲೂಕು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದಿದೆ.
8
+ ಗುಂಡ್ಲುಪೇಟೆ ತಹಸೀಲ್ದಾರ್‌ ರಮೇಶ್‌ ಬಾಬು ನೇತೃತ್ವದಲ್ಲಿ ರಕ್ಷಣಾ ಕಾರ್ಯ ನಡೆದಿದ್ದು, ತಹಸೀಲ್ದಾರ್‌ ನೇತೃತ್ವದ ತಂಡ ಮೃತರ ಕುಟುಂಬಸ್ಥರೊಂದಿಗೆ ಸಂಪರ್ಕದಲ್ಲಿದೆ.
9
+ ಮಂಡ್ಯ ಜಿಲ್ಲೆ ಕೆ.ಆರ್‌.ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ಝಾನ್ಸಿ, ಝಾನ್ಸಿ ಪುತ್ರ ನಿಹಾಲ್‌, ಅತ್ತೆ ಲೀಲಾವತಿ ನಾಪತ್ತೆಯಾಗಿದ್ದಾರೆ. ಮೈಸೂರಿನ ಸರಗೂರಿನ ಅನಿಲ್‌ ಕುಮಾರ್‌ ಎಂಬುವವರಿಗೆ ಝಾನ್ಸಿರಾಣಿಯನ್ನು ಕುಟುಂಬ ಮದುವೆ ಮಾಡಿಕೊಟ್ಟಿತ್ತು.
10
+ ಕೇರಳದ ಮುಂಡಕೈಯಲ್ಲಿ ಅನಿಲ್‌, ಪತ್ನಿ ಝಾ��್ಸಿ, ಪುತ್ರ ನಿಹಾಲ್‌ ಹಾಗೂ ತಂದೆ-ತಾಯಿ ನೆಲೆಸಿದ್ದರು. ಮುಂಡಕೈ ಗುಡ್ಡ ಕುಸಿತದಲ್ಲಿ ಅನಿಲ್‌ ತಾಯಿ ಲೀಲಾವತಿ(55), ಪುತ್ರ ನಿಹಾಲ್‌(2.5). ನಾಪತ್ತೆಯಾಗಿದ್ದು, ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಅನಿಲ್‌ ಹಾಗೂ ಅವರ ಪತ್ನಿ ಝಾನ್ಸಿ, ತಂದೆ ದೇವರಾಜು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೂವರೂ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಮೂವರಿಗೆ ಕೇರಳದ ಮಿಮ್ಸೌ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಕುಟುಂಬಸ್ಥರನ್ನು ಕಾಣಲು ಝಾನ್ಸಿರಾಣಿ ಕುಟುಂಬಸ್ಥರು ಕೇರಳಕ್ಕೆ ತೆರಳಿದ್ದಾರೆ.
11
+ ಬೆಂಗಳೂರಿನಿಂದ ಹನಿಮೂನ್‌ಗೆ ಬಂದಿದ್ದ 4 ಪೈಕಿ ಇಬ್ಬರು ನಾಪತ್ತೆಯಾಗಿದ್ದಾರೆ. ಒರಿಸ್ಸಾ ಮೂಲದ ಎರಡು ನವ ಜೋಡಿಗಳು ಬಂದು ತಂಗಿದ್ದ ರೆಸಾರ್ಟ್‌ ಇವರು ಮಲಗಿದ್ದಲ್ಲೇ ಕೊಚ್ಚಿ ಹೋಗಿದೆ. ರೆಸಾರ್ಟ್ನಿಂದ 300 ಮೀಟರ್‌ ದೂರದಲ್ಲಿ ಕಾರಿನಲ್ಲಿ ಮಲಗಿದ್ದ ಹಾವೇರಿ ಮೂಲದ ಡ್ರೈವರ್‌ ಮಂಜುನಾಥ್‌ ಪಾರಾಗಿದ್ದಾರೆ. ಇವರು ದುರಂತದಲ್ಲಿ ಬದುಕುಳಿದಿದ್ದೇ ಅಚ್ಚರಿ. ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಮಂಜುನಾಥ್‌ ಮಾಹಿತಿ ನೀಡಿದ್ದಾರೆ.
12
+ ಕಾರಿನಲ್ಲಿ ಮಲಗಿದ್ದಕ್ಕೆ ಪ್ರಾಣ ಉಳಿಯಿತು. ರೆಸಾರ್ಟ್ನಲ್ಲಿ ಮಲಗಿದ್ರೆ ನಾನು ಬದುಕುತ್ತಿರಲಿಲ್ಲ. ಎತ್ತರದ ಪ್ರದೇಶದಲ್ಲಿ ಕಾರ್‌ ನಿಲ್ಲಿಸಿದ್ದರಿಂದ ಬಚಾವ್‌ ಆಗಿದ್ದೇನೆ. ನನ್ನ ಕಾರು ಕೂಡ ಅಲ್ಲೇ ಇದೆ ಎಂದು ಕೇರಳದ ವಯನಾಡಿನಲ್ಲಿ ಕ್ಯಾಬ್‌ ಡ್ರೈವರ್‌ ಮಂಜುನಾಥ್‌ ಹೇಳಿಕೆ ನೀಡಿದ್ದಾರೆ.
13
+ ಜಲಸ್ಫೋಟದ ಭೀಕರತೆ ಬಿಚ್ಚಿಟ್ಟ ಪ್ರತ್ಯಕ್ಷದರ್ಶಿ:ದುರಂತದಲ್ಲಿ ಬದುಕುಳಿದ ದೇವರಾಜು ಎಂಬವರು ಭೂಕುಸಿತ ಸಂಭವಿಸಿದ ಭೀಕರತೆಯನ್ನ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಅಬ್ಬಬ್ಬಾ, ಮಣ್ಣು, ನೀರು ಒಟ್ಟಿಗೇ ರಭಸವಾಗಿ ಬರುತ್ತಿತ್ತು. ಬಂಡೆಗಳು ಉರುಳಿಬಂದು ಅಪ್ಪಳಿಸಿತ್ತಿದ್ದವು, ಉಸಿರು ಹಿಡಿದು ಕುಳಿತುಕೊಂಡಿದ್ದೆ. 500ಕ್ಕೂ ಹೆಚ್ಚು ಜನ ನಾಪತ್ತೆಯಾಗಿರಬಹುದು ಎಂದು ಕಣ್ಣೀರಿಟ್ಟಿದ್ದಾರೆ.
14
+ ಕೇರಳ ದುರಂತದಲ್ಲಿ ರಕ್ಷಣಾ ಕಾರ್ಯಕ್ಕೆ ಕನ್ನಡಿಗರ ಯುವಕರ ತಂಡ ಹೋಗಿದೆ. ಮಡಿಕೇರಿ ಮೂಲದ ಸ್ವಯಂ ಸೇವಾ ಸಂಘಟನೆಯ 15 ಯುವಕರು ಅಂಬುಲೆನ್ಸ್ ಸಮೇತ ರಕ್ಷಣಾ ಸ್ಥಳಕ್ಕೆ ದೌಡಾಯಿಸಿದ್ದು, ಸೇವೆ ಸಲ್ಲಿಸುತ್ತಿದ್ದಾರೆ.
15
+ ಜಿಲ್ಲಾಡಳಿತ ಸಹಾಯವಾಣಿಸಂತ್ರಸ್ತರಿಗಾಗಿ ಮೈಸೂರು ಜಿಲ್ಲಾಡಳಿತ ಸಹಾಯವಾಣಿ ತೆರೆದಿದೆ. ಜಿಲ್ಲಾ ವಿಪತ್ತು ನಿರ್ವಹಣಾ ಕೊಠಡಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ. 0821-2423800 ಅಥವಾ 1077 ದೂರವಾಣಿಗೆ ಕರೆ ಮಾಡುವಂತೆ ಜಿಲ್ಲಾಧಿಕಾರಿ ಲಕ್ಷಿ?ಮಕಾಂತ ರೆಡ್ಡಿ ಮಾಹಿತಿ ನೀಡಿದ್ದಾರೆ.
eesanje/url_46_58_2.txt ADDED
@@ -0,0 +1,9 @@
 
 
 
 
 
 
 
 
 
 
1
+ ಲೋಕಾಯುಕ್ತಕ್ಕೆ ಮೂಡಾ ಹಗರಣದ ಮತ್ತಷ್ಟು ದಾಖಲೆ ಒದಗಿಸಿದ ಎನ್‌.ಆರ್‌.ರಮೇಶ್‌
2
+ ಬೆಂಗಳೂರು,ಜು.31– ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರಿಗೆ ಬಿಜೆಪಿ ಮುಖಂಡ ಎನ್‌.ಆರ್‌.ರಮೇಶ್‌ ಅವರು ಮತ್ತಷ್ಟು ಮಹತ್ವಪೂರ್ಣ ದಾಖಲೆ ಒದಗಿಸಿಕೊಟ್ಟಿದ್ದಾರೆ.
3
+ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬ ವರ್ಗದವರು ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿರುವ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ರಮೇಶ್‌ ಅವರು ಈ ಹಿಂದೆ ಲೋಕಾಯುಕ್ತಕ್ಕೆ 400 ಪುಟಗಳ ದಾಖಲೆ ನೀಡಿ ಹಗರಣದ ತನಿಖೆ ನಡೆಸುವಂತೆ ದೂರು ನೀಡಿದ್ದರು.
4
+ ಇದೀಗ ಅದೇ ಪ್ರಕರಣಕ್ಕೆ ಸಂಬಂಧಿಸಿದ 25 ಪುಟಗಳ ಮತ್ತಷ್ಟು ಮಹತ್ವಪೂರ್ಣ ದಾಖಲೆಗಳನ್ನು ಲೋಕಾಯುಕ್ತ ಪೊಲೀಸರಿಗೆ ನೀಡಿರುವುದಾಗಿ ಎನ್‌.ಆರ್‌.ರಮೇಶ್‌ ತಿಳಿಸಿದ್ದಾರೆ.
5
+ 1997-98 ರ ಅವಧಿಯಲ್ಲಿ ಅಭಿವದ್ಧಿ ಪಡಿಸಿ – ಡಾಂಬರೀಕರಣಗೊಂಡ ರಸ್ತೆಗಳು, ಪಾದಚಾರಿ ಮಾರ್ಗಗಳು, ಚರಂಡಿಗಳು, ಕುಡಿಯುವ ನೀರಿನ ಕೊಳವೆಗಳು, ಒಳಚರಂಡಿ ಕೊಳವೆಗಳು ಮತ್ತು ಬೀದಿ ದೀಪಗಳನ್ನು ಒಳಗೊಂಡ ದೇವನೂರು 3ನೇ ಹಂತದ ಬಡಾವಣೆಯಲ್ಲಿನ ನಿವೇಶನಗಳನ್ನು ಅರ್ಜಿದಾರರಿಗೆ ಹಂಚಿಕೆ ಮಾಡಲಾಗಿತ್ತು ಹಾಗೂ ಮೂರ್ನಾಲ್ಕು ವರ್ಷಗಳಲ್ಲಿಯೇ ಸದರಿ ಬಡಾವಣೆಯಲ್ಲಿ ಹತ್ತಾರು ಕಟ್ಟಡಗಳು ತಲೆ ಎತ್ತಿದ್ದವು.
6
+ ಆದರೆ, ಅದಾಗಲೇ ಅಭಿವದ್ಧಿಗೊಂಡಿದ್ದ ಸದರಿ ಬಡಾವಣೆಯಲ್ಲಿ 3.16 ಎಕರೆ ವಿಸ್ತೀರ್ಣದ ಪ್ರದೇಶವನ್ನು ಭೂ ಪರಿವರ್ತನೆ ಮಾಡಿ ಕೊಡುವಂತೆ 2004 ರಂದು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ, ಅಂದಿನ ಜಿಲ್ಲಾಧಿಕಾರಿಗಳು ತಾಲ್ಲೂಕು ತಹಶೀಲ್ದಾರರ ವರದಿಯನ್ನಾಧರಿಸಿ 2005 ರಂದು ಖುದ್ದು ಸ್ಥಳ ಪರಿಶೀಲನೆ ಮಾಡಿ ಮೈಸೂರು ತಾಲ್ಲೂಕು, ಕಸಬಾ ಹೋಬಳಿ, ಕೆಸರೆ ಗ್ರಾಮದ ಸರ್ವೆ ನಂ: 464 ರ 3.16 ಎಕರೆ ವಿಸ್ತೀರ್ಣದ ವ್ಯವಸಾಯದ ಜಮೀನನ್ನು ವಸತಿ ಉದ್ದೇಶಕ್ಕೆ ಬಳಸಲು ಭೂ ಪರಿವರ್ತನೆ ಮಾಡಲು ಅನುಮತಿ ನೀಡಲಾಗಿದೆ ಎಂದು ಸ್ಥಳ ತನಿಖಾ ಟಿಪ್ಪಣಿಯಲ್ಲಿ ಬರೆಯಲಾಗಿದೆ.
7
+ 2005 ಕ್ಕೂ ಏಳೆಂಟು ವರ್ಷಗಳ ಹಿಂದೆಯೇ ಸಂಪೂರ್ಣ ಅಭಿವದ್ಧಿ ಪಡಿಸಲಾಗಿದ್ದ ದೇವನೂರು 03ನೇ ಹಂತದ ಬಡಾವಣೆಯಲ್ಲಿ ವ್ಯವಸಾಯದ ಜಮೀನು ಇರಲು ಹೇಗೆ ಸಾಧ್ಯ. 2004-2006 ರ ಅವಧಿಯಲ್ಲಿ ಧರ್ಮಸಿಂಗ್‌ ಅವರ ಸಚಿವ ಸಂಪುಟದಲ್ಲಿ ಉಪ ಮುಖ್ಯಮಂತ್ರಿ ಆಗಿದ್ದ ಸಿದ್ಧರಾಮಯ್ಯನವರ ರಾಜಕೀಯ ಪ್ರಭಾವಕ್ಕೆ ಮತ್ತು ಒತ್ತಡಗಳಿಗೆ ಒಳಗಾಗಿದ್ದ ಆಗಿನ ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರ್‌ ಗಳು ಈ ರೀತಿಯ ಹಾಸ್ಯಾಸ್ಪದ ಮತ್ತು ಕಾನೂನು ಬಾಹಿರವಾದ ಭೂ ಪರಿವರ್ತನೆ ಕಾರ್ಯಕ್ಕೆ ಅನುಮೋದನೆ ನೀಡಿರುವುದು ಅತ್ಯಂತ ಸ್ಪಷ್ಟವಾಗಿರುತ್ತದೆ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
8
+ ಇದೇ ಜಮೀನಿಗೆ ಸಂಬಂಧಿಸಿ ದಂತೆ, ದೇವನೂರು 03ನೇ ಹಂತದ ಬಡಾವಣೆ ನಿರ್ಮಾಣಕ್ಕೆಂದು ಭೂಸ್ವಾಧೀನಪಡಿಸಿಕೊಂಡಿದ್ದ ಅಷ್ಟೂ ಜಮೀನುಗಳ ಮಾಲೀಕರುಗಳಿಗೆ ಮೂಡಾದ ಆಯುಕ್ತರು, ಭೂಸ್ವಾಧೀನ ಅಧಿಕಾರ��� ಮತ್ತು ಮುಖ್ಯ ಲೆಕ್ಕಾಧಿಕಾರಿಗಳು ಮೈಸೂರಿನ ಪ್ರಧಾನ ಸಿವಿಲ್‌ ನ್ಯಾಯಾಲಯ ದಲ್ಲಿ ಒಟ್ಟು . 1,50,59,642.70 ಗಳಷ್ಟು ಸಂಪೂರ್ಣ ಪರಿಹಾರ ಧನವನ್ನು ಠೇವಣಿ ಇಟ್ಟಿರುತ್ತಾರೆ.
9
+ ಪ್ರಸ್ತುತ ತನಿಖಾ ಹಂತದಲ್ಲಿರುವ ಮೂಡಾದ ಈ ಬದಲಿ ನಿವೇಶನಗಳ ಹಗರಣದ ತನಿಖೆಗೆ, ಈ ಪತ್ರದೊಂದಿಗೆ ಲಗತ್ತಿಸಿರುವ 25 ಪುಟಗಳ ಎರಡು ದಾಖಲೆಗಳು ಅತ್ಯಂತ ಪ್ರಮುಖ ದಾಖಲೆಗಳಾಗುತ್ತವೆ ಎಂಬುದನ್ನು ಮಾನ್ಯ ಲೋಕಾಯುಕ್ತರ ಗಮನಕ್ಕೆ ತರಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
eesanje/url_46_58_3.txt ADDED
@@ -0,0 +1,7 @@
 
 
 
 
 
 
 
 
1
+ “ಸಿದ್ದರಾಮಯ್ಯ ಕುರ್ಚಿಗೆ ಕಂಟಕ ಬಂದರೆ ರಾಜ್ಯದಲ್ಲಿ ರಕ್ತಕ್ರಾಂತಿಯಾಗುತ್ತೆ”
2
+ ಬೆಂಗಳೂರು, ಜು.31-ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಕುರ್ಚಿಗೆ ಕೈ ಹಾಕಿದರೆ ರಾಜ್ಯಾದ್ಯಂತ ಪ್ರತೀ ಜಿಲ್ಲೆ , ತಾಲ್ಲೂಕು, ಗ್ರಾಮಮಟ್ಟದಲ್ಲಿ ಉಗ್ರ ಹೋರಾಟ ಮಾಡಲಾಗುತ್ತದೆ. ಅವರಿಗೆ ಕಪ್ಪು ಚುಕ್ಕೆ ತರಲು ಪ್ರಯತ್ನಿಸಿದರೆ ರಕ್ತಕ್ರಾಂತಿ ಯಾಗುತ್ತದೆ ಎಂದು ಕರ್ನಾಟಕ ರಾಜ್ಯ ಕುರುಬರ ಸಂಘ, ಬಿಜೆಪಿ ಮತ್ತು ಜೆಡಿಎಸ್‌‍ ಪಕ್ಷದ ಮುಖಂಡರಿಗೆ ಎಚ್ಚರಿಕೆ ನೀಡಿದೆ.
3
+ ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷ ಎಂ.ಈರಣ್ಣ, ಕಾರ್ಯಧ್ಯಕ್ಷ ಬಸವರಾಜ ಲ. ಬಸಲಿಗುಂದಿ, ಖಜಾಂಚಿ ಕೆ.ಎಂ.ಕೃಷ್ಣಮೂರ್ತಿ, ಪ್ರಧಾನ ಕಾರ್ಯದರ್ಶಿ ಸೋಮ ಶೇಖರ್‌, ರಾಮಚಂದ್ರಪ್ಪ, ವೆಂಕಟೇಶ್‌ ಮೂರ್ತಿ ಬಿ.ಟಿ.ಜಗದೀಶ್‌ ಮಾತನಾಡಿ, ಹಿಂದುಳಿದ ಜನಾಂಗದ ನಾಯಕ ಸಿದ್ದರಾಮಯ್ಯನವರು ಎರಡನೇ ಬಾರಿಗೆ ಮುಖ್ಯಮಂತ್ರಿ ಆಗಿದ್ದರೆ ಅವರ ಜನಪರ ಕಾಳಜಿ ಮತ್ತು ಇತ್ತೀಚಿಗೆ ತಂದ ಬಡವರ ಕಾರ್ಯಕ್ರಮಗಳನ್ನು ಸಹಿಸಲಾಗದೆ, ಬಿಜೆಪಿ ಪಕ್ಷದ ವಿರೋಧ ಪಕ್ಷದ ನಾಯಕ ಅರ್‌. ಅಶೋಕ್‌ ಮತ್ತು ಆ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತೆ ಹಲವು ಮುಖಂಡರು ಅವರನ್ನು ಕುರ್ಚಿಯಿಂದ ಕೆಳಗಿಳಿಸಲು ಪಿತೂರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.
4
+ ಮುಡ ಮತ್ತು ವಾಲೀಕಿ ಹಗರಣಗಳನ್ನು ಮುಂದಿಟ್ಟು, ಭ್ರಷ್ಟಾಚಾರ ನಡೆಯದಿದ್ದರೂ ಸುಳ್ಳು ಆರೋಪಗಳನ್ನ ಮಾಡಿ, ಅವರ ಮೇಲೆ ಕಳಂಕ ಹೊರಿಸುವ ಕೆಲಸ ನಡೆದಿದೆ.
5
+ ಮುಖ್ಯಮಂತ್ರಿ, ಉಪಮುಖ್ಯ ಮಂತ್ರಿ, ವಿರೋಧ ಪಕ್ಷದ ನಾಯಕ, 15 ಬಾರಿ ಬಜೆಟ್‌ ಮಂಡಿಸಿದ ಹಣಕಾಸು ಸಚಿವ ಸೇರಿದಂತೆ 40 ವರ್ಷಗಳ ಸುದೀರ್ಘ ರಾಜಕೀಯದಲ್ಲಿ ಹಲವು ಮಹತ್ವದ ಅಕಾರದ ಹ್ದುೆಯಲ್ಲಿ ಇದ್ದರೂ ಒಂದೇ ಒಂದು ಕಪ್ಪುಚುಕ್ಕೆ ಇಲ್ಲದ ನಾಯಕ ಸಿದ್ದರಾಮಯ್ಯರವರ ವರ್ಚಸ್ಸಿಗೆ ಮಸಿ ಬಳಿದು ಅವರನ್ನು ರಾಜಕೀಯವಾಗಿ ಮುಗಿಸಿಯೇ ಬಿಡುವ ಹುನ್ನಾರ ಮಾಡುತ್ತಿದ್ದಾರೆ.
6
+ ಬಿಜೆಪಿ ಮತ್ತು ಜೆಡಿಎಸ್‌‍ ರಾಜ್ಯ ನಾಯಕರ ಕುತಂತ್ರಕ್ಕೆ ಬಿಜೆಪಿಯ ರಾಷ್ಟ್ರೀಯ ನಾಯಕರೂ ಕುಮಕ್ಕು ನೀಡುತ್ತಿದ್ದಾರೆ ಎಂದರು.ಹಿಂದುಳಿದ ವರ್ಗದ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಷಡ್ಯಂತ್ರ ರೂಪಿಸುತ್ತಿರುವ ಬಿಜೆಪಿ-ಜೆಡಿಎಸ್‌‍ ನಾಯಕರಿಗೆ ಇದು ಸ್ಪಷ್ಟವಾದ ಎಚ್ಚರಿಕೆ. ರಾಜ್ಯ ಸರ್ಕಾರವನ್ನು ಅಸ್ಥಿರ ಗೊಳಿಸುವುದು.
7
+ ಸಿದ್ದರಾಮಯ್ಯರವರನ್ನು ದುರ್ಬಲ ಗೊಳಿಸುವ ಕುತಂತ್ರವನ್ನು ಕೂಡಲೇ ನಿಲ್ಲಿಸದಿದ್ದರೆ ರಾಜ್ಯದ ಕುರಬ ಸಮಾಜದವರು ಹಾಗೂ ಹಿಂದುಳಿದ ವರ್ಗಗಳ ಸಮುದಾಯದವರು ತಮ ವಿರುದ್ಧ ಸಿಡಿದೇಳಬೇಕಾಗುತ್ತದೆ. ನೀವು ಪಾದಯಾತ್ರೆಯ ಬೆದರಿಕೆ ಹಾಕಿದರೆ ಪರ್ಯಾಯವಾಗಿ ಕರ್ನಾಟಕ ಪ್ರದೇಶ ಕುರುಬರ ಸಂಘ ಹಾಗೂ ಹಿಂದುಳಿದ ವರ್ಗಗಳ ಸಮುದಾಯಗಳು ಇಡೀ ರಾಜ್ಯಾದ್ಯಂತ ಪ್ರತಿಭಟನಾ ಕಾರ್ಯಕ್ರಮಗಳು ಹಾಗೂ ಹಿಂದುಳಿದ ವರ್ಗಗಳ ಎಚ್ಚರಿಕೆ ಸಮಾವೇಶ ಮಾಡಬೇಕಾಗುತ್ತದೆ ಎಂದರು.
eesanje/url_46_58_4.txt ADDED
@@ -0,0 +1,5 @@
 
 
 
 
 
 
1
+ ಕೇರಳಕ್ಕೆ ಎಲ್ಲಾ ಅಗತ್ಯ ನೆರವಿನ ಭರವಸೆ ನೀಡಿದ ಸಿಎಂ ಸಿದ್ದರಾಮಯ್ಯ
2
+ ನವದೆಹಲಿ,ಜು.31– ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಕರ್ನಾಟಕದ ಇಬ್ಬರು ಮೃತಪಟ್ಟಿದ್ದು, ಮತ್ತಿಬ್ಬರು ನಾಪತ್ತೆಯಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆಗೆ ಅಗತ್ಯವಿರುವ ಎಲ್ಲಾ ಬೆಂಬಲ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
3
+ ದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ದುರ್ಘಟನೆಯಲ್ಲಿ ಮೃತರ ಆತಕ್ಕೆ ಶಾಂತಿ ಕೋರಿದ್ದಾರೆ. ಈವರೆಗಿನ ಮಾಹಿತಿ ಪ್ರಕಾರ, ಕರ್ನಾಟಕದ ಇಬ್ಬರ ಜೀವಹಾನಿಯಾಗಿದೆ. ಇಂದು ಬೆಳಿಗ್ಗೆ ತಾವು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರೊಂದಿಗೆ ದೂರವಾಣಿಯಲ್ಲಿ ಚರ್ಚೆ ನಡೆಸಿದ್ದು, ಕರ್ನಾಟಕ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಭರವಸೆ ನೀಡಿದ್ದೇವೆ ಎಂದರು.
4
+ ರಾಜ್ಯದ ಇಬ್ಬರು ಐಎಎಸ್‌‍ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರನ್ನು ನಿಯೋಜಿಸಲಾಗಿದ್ದು, ಕರ್ನಾಟಕದವರ ರಕ್ಷಣೆ ಹಾಗೂ ಪುನರ್‌ವಸತಿಗೆ ಸೂಚಿಸಲಾಗಿದೆ.
5
+ ಭೂಕುಸಿತ ದೊಡ್ಡ ಆಘಾತವನ್ನು ಉಂಟುಮಾಡಿದೆ ಎಂದು ಹೇಳಿದರು.ರಕ್ಷಣಾ ಕಾರ್ಯಾಚರಣೆಗೆ ಕರ್ನಾಟಕ ಎಲ್ಲಾ ರೀತಿಯ ಸಹಾಯ ನೀಡಲಿದ್ದು, ಯಾವುದೇ ಸಹಾಯ ಕೇಳಿದರೂ ನಾವು ತಯಾರಿದ್ದೇವೆ ಎಂದರು.
eesanje/url_46_58_5.txt ADDED
@@ -0,0 +1,7 @@
 
 
 
 
 
 
 
 
1
+ ವಯನಾಡಿಗೆ ಸಚಿವ ಸಂತೋಷ್‌ ಲಾಡ್‌ ಭೇಟಿ
2
+ ನವದೆಹಲಿ,ಜು.31-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಸಂತೋಷ್‌ ಲಾಡ್‌ ಅವರು ಪ್ರವಾಹ ಪೀಡಿತ ವಯನಾಡಿಗೆ ತೆರಳಿದ್ದಾರೆ.
3
+ ಪ್ರವಾಹ ಪೀಡಿತ ಪ್ರದೇಶದಲ್ಲಿ ಪರಿಹಾರ ಕಾರ್ಯಗಳು, ಸಂತ್ರಸ್ಥರ ರಕ್ಷಣೆ ಸೇರಿದಂತೆ ಅಗತ್ಯ ಎಲ್ಲಾ ರೀತಿಯ ನೆರವುಗಳಿಗೆ ಕೇರಳ ಸರ್ಕಾರದ ಜೊತೆ ಕೈ ಜೋಡಿಸಿ ಜನರ ಜೀವ, ಆರೋಗ್ಯ ರಕ್ಷಣೆಗೆ ನೆರವಾಗುವಂತೆ ಮುಖ್ಯಮಂತ್ರಿಗಳು ದೂರವಾಣಿ ಮೂಲಕ ಸೂಚನೆ ನೀಡಿದ್ದಾರೆ.
4
+ ದೂರವಾಣಿ ಕರೆ ಸ್ವೀಕರಿಸುತ್ತಿದ್ದಂತೆ ವಯನಾಡಿಗೆ ಹೊರಟ ಸಚಿವ ಸಂತೋಷ್‌ ಲಾಡ್‌ ಸದ್ಯ ಕೇರಳ ರಾಜ್ಯದ ಮುಖ್ಯಮಂತ್ರಿ ಕಚೇರಿ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ.
5
+ ದುರಂತದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ತುರ್ತು ಮತ್ತು ಕ್ಷಿಪ್ರ ಕ್ರಮಗಳನ್ನು ಕೈಗೊಳ್ಳಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವ ಲಾಡ್‌ ತಿಳಿಸಿದ್ದಾರೆ.
6
+ ಭೂ ಕುಸಿತದಿಂತ ತತ್ತರಿಸಿರುವ ಕೇರಳಕ್ಕೆ ಅಗತ್ಯ ನೆರವು ಒದಗಿಸುವುದಾಗಿ ಆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ದೂರವಾಣಿ ಮೂಲಕ ಪಿಣರಾಯಿ ವಿಜಯನ್‌ ಅವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು ದುರಂತದ ಬಗ್ಗೆ ಆಘಾತ ವ್ಯಕ್ತಪಡಿಸಿದರು.
7
+ ಪರಿಹಾರ ಕಾರ್ಯದಲ್ಲಿ ನಮ ಸರ್ಕಾರ ನಿಮೊಂದಿಗೆ ಕೈ ಜೋಡಿಸಲಿದೆ. ಅಗತ್ಯ ನೆರವು ಒದಗಿಸಲು ಸಿದ್ಧವಾಗಿದೆ. ರಕ್ಷಣಾ ತಂಡಗಳು ಮತ್ತು ಸಾಮಗ್ರಿಗಳನ್ನು ಕಳುಹಿಸಲಾಗುತ್ತಿದೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದರು.
eesanje/url_46_58_6.txt ADDED
@@ -0,0 +1,6 @@
 
 
 
 
 
 
 
1
+ ಮಳೆ ಅನಾಹುತ : ರಾಜ್ಯದಲ್ಲಿ ಮುನ್ನೆಚ್ಚರಿಕೆ ವಹಿಸಲು ಹಿರಿಯ ಅಧಿಕಾರಿಗಳ ಸಭೆ
2
+ ಬೆಂಗಳೂರು,ಜು.31-ಉತ್ತರ ಕನ್ನಡ ಜಿಲ್ಲೆಯ ಶಿರೂರು ಹಾಗೂ ಕೇರಳದಲ್ಲಿ ಆಗಿರುವ ಬೆಟ್ಟ ಕುಸಿತ ಹಾಗೂ ಇತರ ಮಳೆ ಅನಾಹುತಗಳ ಬೆನ್ನಲ್ಲೇ ರಾಜ್ಯಸರ್ಕಾರ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಮುಂದಾಗಿದೆ.
3
+ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇಂದು ಸಂಜೆ ಗೃಹಕಚೇರಿ ಕೃಷ್ಣಾದಿಂದ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌‍ ಮುಖ್ಯಾಧಿಕಾರಿಗಳ ಜೊತೆಗೆ ಪ್ರಾದೇಶಿಕ ಆಯುಕ್ತರು ,ಲೋಕೋಪಯೋಗಿ, ಗೃಹ, ಇಂಧನ, ಆರ್ಥಿಕ ಇಲಾಖೆ, ಕೃಷಿ, ಕಂದಾಯ, ರೇಷೆ, ಅರಣ್ಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಚಿವರೊಂದಿಗೆ ವಿಡಿಯೋ ಸಂವಾದ ನಡೆಸಲಿದ್ದಾರೆ.
4
+ ಪ್ರತಿಯೊಂದು ಜಿಲ್ಲೆಯಲ್ಲೂ ಮಳೆ ಅನಾಹುತಗಳ ಕುರಿತು ಮುನ್ನೆಚ್ಚರಿಕೆ ವಹಿಸಬೇಕು. ಅದರಲ್ಲೂ ನೀರು ಹರಿಯುವ ಕಾಲುವೆಗಳು ಹಾಗೂ ಇತರ ಇಳಿಜಾರಿನ ಪ್ರದೇಶಗಳು, ಬೆಟ್ಟಗಳ ಸಾಲಿನ ವಿಚಾರವಾಗಿ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಲು ತಯಾರಿ ನಡೆಸಿಕೊಂಡಿದ್ದಾರೆ.
5
+ ಹೈಕಮಾಂಡ್‌ನ ಬುಲಾವ್‌ ಮೇರೆಗೆ ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿಯವರು ಇಂದು ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಾರೆ. ಕೇರಳದ ಬೆಟ್ಟ ಕುಸಿತದಲ್ಲಿ ಸುಮಾರು 100 ಕ್ಕೂ ಹೆಚ್ಚು ಜೀವಹಾನಿಯಾಗಿರುವುದು ತೀವ್ರ ಆತಂಕ ಮೂಡಿಸಿದೆ. ಕೆಲ ದಿನಗಳ ಹಿಂದೆ ರಾಜ್ಯದ ಉತ್ತರ ಕನ್ನಡ ಜಿಲ್ಲೆಯ ಶಿರೂರಿನಲ್ಲೂ ಬೆಟ್ಟ ಕುಸಿತವಾಗಿ ಸಾಕಷ್ಟು ಜೀವಹಾನಿಯಾಗಿತ್ತು.
6
+ ಈ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳು ಹಾಗೂ ಜಿಲ್ಲಾಡಳಿತದೊಂದಿಗೆ ಸಭೆ ನಡೆಸಲಿರುವ ಮುಖ್ಯಮಂತ್ರಿಗಳು ಅಪಾಯಕಾರಿ ಸ್ಥಿತಿಯಲ್ಲಿರುವ ಬೆಟ್ಟ-ಗುಡ್ಡಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು. ತಗ್ಗು ಪ್ರದೇಶದಲ್ಲಿರುವ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಬೇಕು ಎಂದು ಸೂಚನೆ ನೀಡಿದ್ದಾರೆ.
eesanje/url_46_58_7.txt ADDED
@@ -0,0 +1,6 @@
 
 
 
 
 
 
 
1
+ ವಯನಾಡು ದುರಂತದಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬದವರಿಗೆ ತಲಾ 5 ಲಕ್ಷ ರೂ ಘೋಷಿಸಿದ ಸಿಎಂ ಸಿದ್ದು
2
+ ಬೆಂಗಳೂರು,ಜು.31-ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿಗೀಡಾದ ಕುಟುಂಬದ ಸದಸ್ಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
3
+ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿರುವ ಮುಖ್ಯಮಂತ್ರಿಯವರು ದುರಂತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಇದೊಂದು ಅತ್ಯಂತ ಘೋರ ದುರಂತ, ಈ ದುರಂತದಲ್ಲಿ ಕನ್ನಡಿಗರು ಪ್ರಾಣ ಕಳೆದುಕೊಂಡದ್ದು ಮತ್ತಷ್ಟು ನೋವುಂಟು ಮಾಡಿದೆ ಎಂದಿದ್ದಾರೆ.
4
+ ಮೃತಪಟ್ಟ ಕನ್ನಡಿಗರಿಗೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಇದೇ ವೇಳೆ ಮೃತರ ಆತಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಈಗಾಗಲೇ ರಾಜ್ಯದ ಇಬ್ಬರು ಹಿರಿಯ ಐಎಎಸ್‌‍ ಅಽ ಕಾರಿಗಳು, ಎನ್‌‍.ಡಿ.ರ್ಆ.ಎ್‌‍ ತಂಡ ಮತ್ತು ಸೇನಾ ಪಡೆಯ ತಂಡಗಳು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಇಂದು ರಕ್ಷಣಾ ಕಾರ್ಯದ ಉಸ್ತುವಾರಿಗಾಗಿ ಸಚಿವರಾದ ಸಂತೋಷ್‌ ಲಾಡ್‌ ಅವರನ್ನು ವಯನಾಡಿಗೆ ಕಳುಹಿಸಿಕೊಡಲಾಗುತ್ತಿದೆ.
5
+ ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಇದೊಂದು ಅತ್ಯಂತ ಘೋರ ದುರಂತ, ಈ ದುರಂತದಲ್ಲಿ ಕನ್ನಡಿಗರು ಪ್ರಾಣ ಕಳೆದುಕೊಂಡದ್ದು ಮತ್ತಷ್ಟು ನೋವುಂಟು ಮಾಡಿದೆ.ಮೃತಪಟ್ಟ ಕನ್ನಡಿಗರಿಗೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಇದೇ ವೇಳೆ ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು…
6
+ ಸಂತ್ರಸ್ತರ ಪ್ರಾಣ ರಕ್ಷಣೆ ನಮ ಮೊದಲ ಆದ್ಯತೆಯಾಗಿದ್ದು, ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ನಮ ಸರ್ಕಾರ ಶಕ್ತಿಮೀರಿ ಶ್ರಮಿಸುತ್ತಿದೆ.
eesanje/url_46_58_8.txt ADDED
@@ -0,0 +1,5 @@
 
 
 
 
 
 
1
+ ಯತ್ನಾಳ್‌ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಸಚಿವ ಗುಂಡೂರಾವ್‌ ಪತ್ನಿ
2
+ ಬೆಂಗಳೂರು,ಜು.31-ತಮ್ಮ ಹಾಗೂ ಕುಟುಂಬದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ಸಚಿವ ದಿನೇಶ್‌ ಗುಂಡೂರಾವ್‌ ಅವರ ಪತ್ನಿ ತಬು ಗುಂಡೂರಾವ್‌ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದು, ಇಂದು ನ್ಯಾಯಾಲಯದಲ್ಲಿ ಪ್ರಮಾಣೀಕೃತ ಹೇಳಿಕೆ ದಾಖಲಿಸಿದ್ದಾರೆ.
3
+ ಬೆಂಗಳೂರಿನ 42 ಎಸಿಎಂಎಂ ಕೋರ್ಟ್‌ನಲ್ಲಿ ಮೊಕದ್ದಮೆ ದಾಖಲಾಗಿದ್ದು ತಬು ಅವರ ಪರವಾಗಿ ಸೂರ್ಯ ಮುಕುಂದ್‌ ರಾಜ್‌ ನ್ಯಾಯಾಲಯದ ಮುಂದೆ ಹಾಜರಾಗಿ ವಾದ ಮಂಡಿಸಿದ್ದಾರೆ.
4
+ ಒಬ್ಬ ಜನಪ್ರತಿನಿಧಿಯಾಗಿದ್ದುಕೊಂಡು ಯತ್ನಾಳ್‌ ನೀಡಿರುವ ಹೇಳಿಕೆ ಅವಹೇಳನಕಾರಿ ಮಾತ್ರವಲ್ಲ, ತಮ ರಾಷ್ಟ್ರೀಯತೆ ಹಾಗೂ ದೇಶಪ್ರೀಮದ ಬದ್ಧತೆಯನ್ನು ಪ್ರಶ್ನಿಸುವಂತಿದ್ದು, ಇದು ಕ್ರಿಮಿನಲ್‌ ಸ್ವರೂಪದ ಅಪರಾಧವಾಗಿದೆ ಎಂದು ತಬು ರಾವ್‌ ಅವರು ಹೇಳಿಕೆ ದಾಖಲಿಸಿದ್ದಾರೆ.
5
+ ಪ್ರಮಾಣೀಕೃತ ಹೇಳಿಕೆ ದಾಖಲಿಸಿಕೊಂಡಿರುವ ನ್ಯಾಯಾಲಯ ಆಗಸ್ಟ್‌ 7, 8 ರಂದು ಪ್ರಕರಣವನ್ನು ಅವಗಾಹನೆಗೆ ತೆಗೆದುಕೊಳ್ಳುವುದನ್ನು ನಿರ್ಧರಿಸಲಿದ್ದು ವಿಚಾರಣೆ ಮುಂದೂಡಲಾಗಿದೆ.
eesanje/url_46_58_9.txt ADDED
@@ -0,0 +1,5 @@
 
 
 
 
 
 
1
+ ಪುನಿತ್‌ ಕೆರೆಹಳ್ಳಿಗೆ ಪೊಲೀಸರ ಹಲ್ಲೆ : ಠಾಣೆ ಎದುರು ಪ್ರತಾಪ್‌ ಸಿಂಹ ಪ್ರತಿಭಟನೆ
2
+ ಬೆಂಗಳೂರು,ಜು.31-ಮಾಜಿ ಸಂಸದ ಪ್ರತಾಪ್‌ ಸಿಂಹ ಸೇರಿದಂತೆ ನೂರಕ್ಕೂ ಹೆಚ್ಚು ಮಂದಿ ಇಂದು ಬೆಳಗ್ಗೆ ಬಸವೇಶ್ವರ ನಗರ ಠಾಣೆ ಮುಂದೆ ಜಮಾಯಿಯಿಸಿ ಪ್ರತಿಭಟನೆ ನಡೆಸಿದರು.
3
+ ಹಿಂದೂ ಕಾರ್ಯಕರ್ತ ಪುನಿತ್‌ ಕೆರೆಹಳ್ಳಿ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ. ಹಲ್ಲೆ ಮಾಡಿರುವ ಪೊಲೀಸರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿ ನಂತರ ಹಿರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು.
4
+ ಕಳೆದ ವಾರ ರಾಜಸ್ಥಾನದಿಂದ ನಗರದ ರೈಲ್ವೆ ನಿಲ್ದಾಣಕ್ಕೆ ಬಂದ ಮಾಂಸ ಕಳಪೆಯಾಗಿದೆ. ಅದು ಕುರಿಯದ್ದಲ್ಲ, ನಾಯಿಯ ಮಾಂಸವೆಂದು ಗಲಾಟೆ ಮಾಡಿದ್ದರು.
5
+ ಆ ಸಂದರ್ಭದಲ್ಲಿ ಸ್ಥಳಕ್ಕೆ ಕಾಟನ್‌ಪೇಟೆ ಪೊಲೀಸರು ಆಗಮಿಸಿದ್ದಾಗ ಪುನಿತ್‌ ಕೆರೆಹಳ್ಳಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಗಲಾಟೆ ಮಾಡಿದ್ದರಿಂದ ಅವರನ್ನು ಬಂಧಿಸಿ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿತ್ತು. ಇದೀಗ ಪುನೀತ್‌ ಕೆರೆಹಳ್ಳ ಜಾಮೀನು ಪಡೆದು ಹೊರಬಂದಿದ್ದಾರೆ.
eesanje/url_46_59_1.txt ADDED
@@ -0,0 +1,14 @@
 
 
 
 
 
 
 
 
 
 
 
 
 
 
 
1
+ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಕತ್ತಿ ಮಸೆಯುತ್ತಿರುವ ಜಾರಕಿಹೊಳಿ-ಯತ್ನಾಳ್‌
2
+ ಬೆಂಗಳೂರು,ಜು.31-ಅಪ್ಪ-ಮಕ್ಕಳ ಬ್ಲಾಕ್‌ ಮೇಲ್‌ನಿಂದ ಪಕ್ಷವನ್ನು ಹೊರತರಬೇಕು, ಇದರ ಬಗ್ಗೆ ಹೈಕಮಾಂಡ್‌ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ಸ್ವಪಕ್ಷದ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ. ಈ ಹೇಳಿಕೆಯು ಬಿಜೆಪಿ ಪಾಳೆಯದಲ್ಲಿ ಮತ್ತೊಮೆ ಬಿರುಗಾಳಿ ಎಬ್ಬಿಸಿದೆ. ಇಷ್ಟು ದಿನ ಯಡಿಯೂರಪ್ಪ ಫ್ಯಾಮಿಲಿ ಜೊತೆ ಚೆನ್ನಾಗಿದ್ದ ರಮೇಶ್‌ ಜಾರಕಿಹೊಳಿ ಇದ್ದಕ್ಕಿದಂತೆ ಸಿಡಿದೆದ್ದಿದ್ದಾರೆ.
3
+ ವಿಜಯೇಂದ್ರ ರಾಜ್ಯಾಧ್ಯಕ್ಷನಾಗಿರಬಹುದು. ಆದರೆ ನನಗಲ್ಲ, ನಾನು ಒಪ್ಪುವುದಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ನೇರವಾಗಿ ಸಮರ ಸಾರಿದ್ದಾರೆ. ಇದರಿಂದ ಬಿಜೆಪಿ ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲ ಅನ್ನೋದು ಮತ್ತೆ ಸಾಬೀತಾಗಿದೆ.
4
+ ಇತ್ತ ಬಸನಗೌಡ ಪಾಟೀಲ್‌ ಯತ್ನಾಳ್‌ ಮಾತು ಎತ್ತಿದರೆ ಸಾಕು ಯಡಿಯೂರಪ್ಪ ಕುಟುಂಬದ ವಿರುದ್ಧ ಮುಗಿಬೀಳುತ್ತಾರೆ. ಯತ್ನಾಳ್‌ ಮತ್ತು ರಮೇಶ್‌ ಜಾರಕಿಹೊಳಿ ಕೈ ಜೋಡಿಸಿ ವಿಜಯೇಂದ್ರ ವಿರುದ್ಧ ಯುದ್ಧ ಸಾರಿದ್ದಾರೆ. 2019ರಲ್ಲಿ ಕಾಂಗ್ರೆಸ್‌‍ ಮತ್ತು ಜೆಡಿಎಸ್‌‍ ಮೈತ್ರಿ ಸರ್ಕಾರವನ್ನು ಕೆಡವಿ ಬಿಜೆಪಿ ಸರ್ಕಾರ ರಚನೆ ಮಾಡುವಲ್ಲಿ ರಮೇಶ್‌ ಜಾರಕಿಹೊಳಿ ಪಾತ್ರ ಬಹಳ ದೊಡ್ಡದು. ಆ ಸಮಯದಲ್ಲಿ ಕಾಂಗ್ರೆಸ್‌‍ನ 17 ಶಾಸಕರನ್ನು ಬಿಜೆಪಿಗೆ ಕರೆತಂದಿದ್ದು ಇದೇ ರಮೇಶ್‌ ಜಾರಕಿಹೊಳಿ.
5
+ ಬಿಜೆಪಿಗೆ ಬರುವ ಎಲ್ಲರಿಗೂ ಸಚಿವ ಸ್ಥಾನ ಕೊಡುತ್ತೇನೆ. ಅದು ನನ್ನ ಜವಾಬ್ದಾರಿ ಎಂದು ಯಡಿಯೂರಪ್ಪ ಅವರು ರಮೇಶ್‌ ಜಾರಕಿಹೊಳಿಗೆ ಭರವಸೆ ಕೊಟ್ಟಿರುತ್ತಾರೆ. ಅದರಂತೆ ರಮೇಶ್‌ ಜಾರಕಿಹೊಳಿ ಜಲ ಸಂಪನೂಲ ಸಚಿವರೂ ಆಗುತ್ತಾರೆ. ಅಲ್ಲಿಂದ ಯಡಿಯೂರಪ್ಪ ಅಂದರೆ ರಮೇಶ್‌ ಜಾರಕಿಹೊಳಿ ಪಾಲಿಗೆ ದೇವರ ಸಮನಾಗುತ್ತಾರೆ. ಕೊಟ್ಟ ಮಾತು ತಪ್ಪದ ಯಡಿಯೂರಪ್ಪ ಬೆನ್ನಿಗೆ ನಿಂತುಕೊಳ್ಳುತ್ತಾರೆ.
6
+ 2021ರ ಮಾರ್ಚ್‌ನಲ್ಲಿ ರಮೇಶ್‌ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಸಿಲುಕಿಕೊಳ್ಳುತ್ತಾರೆ. ಆಗ ಸಿಎಂ ಆಗಿದ್ದ ಯಡಿಯೂರಪ್ಪ , ಜಾರಕಿಹೊಳಿ ವಿರುದ್ಧ ಆರೋಪ ಬರುತ್ತಿದ್ದಂತೆ ರಾಜೀನಾಮೆ ಪಡೆಯುತ್ತಾರೆ. ಈ ಸಮಯದಲ್ಲಿ ನೀವು ಆರೋಪದಿಂದ ಮುಕ್ತನಾದರೆ ಮತ್ತೆ ಸಚಿವ ಸ್ಥಾನ ನೀಡುತ್ತೇವೆ ಎಂದು ಭರವಸೆ ಕೊಡುತ್ತಾರೆ. ಅದಾದ ಮೇಲೆ ಅವರ ಮೇಲಿನ ಆರೋಪ ತಣ್ಣಗಾದರೂ ಜಾರಕಿಹೊಳಿಗೆ ಸಚಿವ ಸ್ಥಾನ ಸಿಗಲಿಲ್ಲ. ಬಿಜೆಪಿ ಸರ್ಕಾರದಲ್ಲಿ ಜಾರಕಿಹೊಳಿ ಜಲಸಂಪನೂಲ ಸಚಿವರಾಗಿದ್ದರೂ ಸಚಿವ ಸಂಪುಟ ಸಭೆಯಲ್ಲಿ ಅವರ ಅನುಪಸ್ಥಿತಿಯ ಬಗ್ಗೆ ಉಲ್ಲೇಖಿಸದೇ ಯಡಿಯೂರಪ್ಪ ಸಭೆ ನಡೆಸುತ್ತಾರೆ.
7
+ ವಿಶ್ವೇಶ್ವರಯ್ಯ ಜಲ ನಿಗಮದ ಕೋಟ್ಯಂತರ ರೂಪಾಯಿ ಕಾಮಗಾರಿ ಸೇರಿದಂತೆ ಹಲವು ನೀರಾವರಿ ಯೋಜನೆಗಳಿಗೆ ಸಭೆಯಲ್ಲಿ ಅನುಮೋದನೆ ನೀಡುತ್ತಾರೆ. ಇದು ರಮೇಶ್‌ ಜಾರಕಿ���ೊಳಿ ಮತ್ತಷ್ಟು ಕೆರಳಲು ನಾಂದಿ ಹಾಡಿತು.
8
+ ವಿಜಯೇಂದ್ರ ಮೇಲೆ ಕತ್ತಿ ಮಸೆಯುತ್ತಿರುವುದ್ಯಾಕೆ?ಬಿ.ವೈ.ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ ಕಟ್ಟಿದಾಗ ಬಿಜೆಪಿಯಲ್ಲಿ ಆಂತರಿಕ ಕಲಹ ಹೆಚ್ಚಾಗಿತ್ತು. ಘಟಾನುಘಟಿ ನಾಯಕರಾದ ಜಗದೀಶ್‌ ಶೆಟ್ಟರ್‌, ಲಕ್ಷ್ಮಣ್‌ ಸವದಿ ಆಗ ಬಿಜೆಪಿ ತೊರೆದಿದ್ದರು. ಬಿಜೆಪಿಯಲ್ಲಿ ಒಬ್ಬರನ್ನು ಕಂಡರೆ ಒಬ್ಬರಿಗೆ ಆಗುತ್ತಿರಲಿಲ್ಲ ಎಂಬ ಸನ್ನಿವೇಶ ಎದುರಾಗಿತ್ತು.
9
+ ಅವರೆಲ್ಲರನ್ನೂ ಒಗ್ಗೂಡಿಸಿ,, ಪಕ್ಷವನ್ನು ಹದ್ದುಬಸ್ತಿಗೆ ತರುವ ಕೆಲಸ ರಾಜ್ಯಾಧ್ಯಕ್ಷರ ಮೇಲಿತ್ತು. ಆದರೆ, ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ ಕಟ್ಟಿದ್ದು ಕೆಲವು ಬಿಜೆಪಿ ನಾಯಕರಿಗೆ ಸುತಾರಾಂ ಇಷ್ಟ ಇರಲಿಲ್ಲ. ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಸಾರಥ್ಯ ವಹಿಸಿದ್ದು ರಮೇಶ್‌ ಜಾರಕಿಹೊಳಿಗೂ ಇಷ್ಟ ಇರಲಿಲ್ಲ ಎಂಬ ವಿಷಯ ಈಗ ಬಹಿರಂಗವಾಗಿದೆ.
10
+ ರಾಜ್ಯಾಧ್ಯಕ್ಷ ಸ್ಥಾನ ಸಿಕ್ಕ ಮೇಲೆ ವಿಜಯೇಂದ್ರ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡರು. ಆದರೆ, ನನ್ನನ್ನು ತೆಗೆದುಕೊಳ್ಳಲಿಲ್ಲ ಅನ್ನೋದು ರಮೇಶ್‌ ಜಾರಕಿಹೊಳಿ ವಾದ. ಯತ್ನಾಳ್‌ ಆರೋಪದಂತೆ ಡಿಕೆ ಶಿವಕುಮಾರ್‌ ಹಾಗೂ ವಿಜಯೇಂದ್ರ ಹೊಂದಾಣಿಕೆ ರಾಜಕಾರಣ ಮಾಡುತ್ತಿರುವ ಬಗ್ಗೆ ಜಾರಕಿಹೊಳಿಗೆ ಸಹಿಸಲು ಆಗುತ್ತಿಲ್ಲ. ಡಿಕೆ ಶಿವಕುಮಾರ್‌ ಮತ್ತು ರಮೇಶ್‌ ಜಾರಕಿಹೊಳಿಗೆ ಒಬ್ಬರನ್ನು ಕಂಡರೆ ಒಬ್ಬರಿಗೆ ಹಾವು-ಮುಂಗೂಸಿಯಂಥ ದ್ವೇಷ ಇರುವಂತೆ ಕಾಣುತ್ತದೆ.
11
+ ರಮೇಶ್‌ ಜಾರಕಿಹೊಳಿ ಉತ್ತರ ಕರ್ನಾಟಕ ಭಾಗದ ಪ್ರಭಾವಿ ನಾಯಕ. ಕಾಂಗ್ರೆಸ್‌‍ನಲ್ಲಿ ರಮೇಶ್‌ ಜಾರಕಿಹೊಳಿ ಮಾತುಗಳು ನಡೆಯುತ್ತಿದ್ದವು. ಆದರೆ, ಬಿಜೆಪಿಗೆ ಬಂದ ಮೇಲೆ ಆರಂಭದಲ್ಲಿ ರಮೇಶ್‌ ಜಾರಕಿಹೊಳಿ ಹವಾ ಇತ್ತು. ಸಚಿವ ಸ್ಥಾನಕ್ಕೆ ಯಾವಾಗ ರಾಜೀನಾಮೆ ನೀಡಿದ್ರೋ ಅಲ್ಲಿಂದ ಪ್ರಭಾವ ಕಡಿಮೆಯಾಯ್ತು. ಪಕ್ಷವೂ ಅವರನ್ನು ಕಡೆಗಣಿಸುತ್ತಾ ಬಂತು. ಪಕ್ಷದಲ್ಲಿ ಏನೇ ನಿರ್ಣಯ ತೆಗೆದುಕೊಂಡರು ಕೂಡ ಇವರನ್ನು ಕೇಳುತ್ತಿರಲಿಲ್ಲ. ಇದು ಅವರಿಗೆ ಸಹಿಸಿಕೊಳ್ಳಲು ಆಗಲಿಲ್ಲ. ಇಷ್ಟು ದಿನ ಎಲ್ಲವನ್ನೂ ತಡೆದುಕೊಂಡಿದ್ದ ಸಾಹುಕಾರ್‌ ಈಗ ಸಿಡಿದೆದ್ದಿದ್ದಾರೆ.
12
+ ಯತ್ನಾಳ್‌ ಹಾಗೂ ರಮೇಶ್‌ ಜಾರಕಿಹೊಳಿ ವಿಜಯೇಂದ್ರ ವಿರುದ್ಧ ಸಮರ ಸಾರಿದ್ದಾರೆ. ಇಬ್ಬರದ್ದೂ ಒಂದೇ ಟಾರ್ಗೆಟ್‌ ಅದು ವಿಜಯೇಂದ್ರ. ಇತ್ತ ವಿಜಯೇಂದ್ರ ಮುಡಾ ಹಗರಣ ವಿರೋಧಿಸಿ ಪಾದಯಾತ್ರೆ ಮಾಡಲು ನಿರ್ಧಾರ ಮಾಡಿಕೊಂಡರೆ, ಇತ್ತ ರಮೇಶ್‌ ಜಾರಕಿಹೊಳಿ ಮತ್ತು ಯತ್ನಾಳ್‌ ವಾಲೀಕಿ ನಿಗಮ ಹಗರಣ ಖಂಡಿಸಿ ಪಾದಯಾತ್ರೆ ಮಾಡಲು ರೆಡಿಯಾಗಿದ್ದಾರೆ.
13
+ ಇದು ಕಾಂಗ್ರೆಸ್‌‍ ವಿರುದ್ಧದ ಹೋರಾಟ ಅನ್ನೋದಕ್ಕಿಂತ ವಿಜಯೇಂದ್ರ ಹಾಗೂ ಯತ್ನಾಳ್‌-ಜಾರಕಿಹೊಳಿ ನಡುವಿನ ಹೋರಾಟ ಅಂತ ಬಿಂಬಿತವಾಗುತ್ತಿದೆ. ಇಲ್ಲಿ ಇನ್ನೊಂದು ವಿಷಯವನ್ನು ಸೂಕ್ಷ್ಮವಾಗಿ ಅವಲೋಕಿಸಿದರೆ ತಿಳಿಯುವುದು ಬಿಜೆಪಿಯಲ್ಲಿನ ಒಂದು ಬಣ ಸಿದ್ದರಾಮಯ್ಯರನ್ನು ವಿರೋಧಿಸುತ್ತಿದೆ. ಇನ್ನೊಂದು ಬಣ ಸಿದ್ದರಾಮಯ್ಯ ಪರವಾಗಿರುವಂತೆ ವರ್ತಿಸುತ್ತಿದೆ.
14
+ ರಮೇಶ್‌ ಜಾರಕಿಹೊಳಿ ಮತ್ತು ಯತ್ನಾಳ್‌ ಒಂದಾಗಿ ಭಿನ್ನ ಹಾದಿ ತುಳಿದಿದ್ದು ಬಿಜೆಪಿ ಹೈಕಮಾಂಡ್‌ನಲ್ಲಿ ಒತ್ತಡ ಉಂಟು ಮಾಡಿದೆ. ಬಿಜೆಪಿಯಲ್ಲಿ ಇದೇ ಬಣ ರಾಜಕೀಯ ಮುಂದುವರಿದರೆ, ಪಕ್ಷಕ್ಕೆ ಡ್ಯಾಮೇಜ್‌ ಆಗುವ ಜೊತೆಗೆ ಮುಂದೆ ನಡೆಯುವ ಚುನಾವಣೆಯ ಮೇಲೂ ಪರಿಣಾಮ ಬೀರಬಹುದು. ಹೀಗಾಗಿ ಹೈಕಮಾಂಡ್‌ ಬೆಣ್ಣೆಯಲ್ಲಿ ಕೂದಲು ತೆಗೆಯುವಂತೆ ಪಕ್ಷದ ಆಂತರಿಕ ಕಲಹವನ್ನು ನಿವಾರಿಸುವ ಅನಿವಾರ್ಯತೆ ಇದೆ.
eesanje/url_46_59_10.txt ADDED
@@ -0,0 +1,7 @@
 
 
 
 
 
 
 
 
1
+ ಕೆಆರ್‌ಎಸ್‌‍ಗೆ ಬಾಗಿನ ಅರ್ಪಣೆ, ಕಾವೇರಿ ಮಾತೆಗೆ ಪೂಜೆ
2
+ ಮೈಸೂರು,ಜು.29-ಕಾವೇರಿ ನದಿಪಾತ್ರದಲ್ಲಿ ಸಮೃದ್ಧಿ ಮಳೆಯಿಂದ ತುಂಬಿ ಹರಿಯುತ್ತಿರುವ ಕೆಆರ್‌ಎಸ್‌‍ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇಂದು ಬಾಗಿನ ಅರ್ಪಿಸಿದರು.ಸಚಿವರಾದ ಎಚ್‌.ಸಿ.ಮಹ ದೇವಪ್ಪ, ಚೆಲುವರಾಯಸ್ವಾಮಿ, ವೆಂಕಟೇಶ್‌, ಜಿಲ್ಲೆಯ ಜನಪ್ರತಿನಿಧಿ ಗಳು ಭಾಗವಹಿಸಿದ್ದರು.
3
+ ನಂತರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್‌, ಈ ಹಿಂದೆ ಮಳೆ ಬರದೇ ಇದ್ದಾಗ ವಿಪಕ್ಷಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅಪಪ್ರಚಾರ ಮಾಡಿದರು. ಈಗ ಸಿದ್ದರಾಮಯ್ಯ ಅವರ ಕಾಲ್ಗುಣದಿಂದ ಸಮೃದ್ಧ ಮಳೆಯಾಗುತ್ತಿದೆ. ಎಲ್ಲಾ ಜಲಾಶಯಗಳೂ ತುಂಬಿ ತುಳುಕುತ್ತಿವೆ ಎಂದು ತಿರುಗೇಟು ನೀಡಿದರು.ಕಾವೇರಿ ನದಿಪಾತ್ರದಲ್ಲಿನ ರೈತರ ಹಿತರಕ್ಷಣೆಗೆ ನಮ ಸರ್ಕಾರ ಬದ್ಧವಾಗಿದೆ. ಬೆಳೆಗಳಿಗೆ ನೀರು ಹರಿಸಲಾಗುವುದು ಎಂದು ಹೇಳಿದರು.
4
+ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಇತ್ತೀಚೆಗೆ ಆತುರಾತುರವಾಗಿ ಪ್ರತಿದಿನ 1 ಟಿಎಂಸಿ ನೀರು ಬಿಡಬೇಕು ಎಂದು ತೀರ್ಪು ನೀಡಿದೆ. ಕಾವೇರಿ ಕೃಪಾಶೀರ್ವಾದದಿಂದ ಉತ್ತಮ ಮಳೆಯಾಗುತ್ತಿದೆ. ಈ ತಿಂಗಳ ಅಂತ್ಯಕ್ಕೆ 40 ಟಿಎಂಸಿ ಬಿಡಬೇಕಿತ್ತು. ಈಗಾಗಲೇ 84 ಟಿಎಂಸಿಗೂ ಹೆಚ್ಚು ನೀರು ಹರಿದುಹೋಗಿದೆ. ನೀರು ಹರಿಸಿರುವ ಬಗ್ಗೆಯೂ ಕೆಲವರು ಟೀಕೆ ಮಾಡುತ್ತಿದ್ದಾರೆ. ಈ ಹಿಂದೆ
5
+ ಉತ್ತಮ ಮಳೆಯಾದಾಗ ನಿಗದಿಗಿಂತಲೂ ಹೆಚ್ಚು ನೀರು ಹರಿದಿರುವ ಲೆಕ್ಕವಿದೆ ಎಂದು ವಿವರಣೆ ನೀಡಿದರು.ಇದೇ ರೀತಿ ಮಳೆಯಾದರೆ ತಮಿಳುನಾಡು ಮತ್ತು ಕರ್ನಾಟಕ ಎರಡೂ ರಾಜ್ಯಗಳ ರೈತರಿಗೂ ಅನುಕೂಲವಾಗಲಿದೆ ಎಂದು ತಿಳಿಸಿದರು.ಕೆಆರ್‌ಎಸ್‌‍ ಅಣೆಕಟ್ಟೆಯ ಸಮೀಪವಿರುವ ಬೃಂದಾವನ ಉದ್ಯಾನವನವನ್ನು ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಿ ಉತ್ತಮ ಪ್ರವಾಸೋದ್ಯಮ ತಾಣವನ್ನಾಗಿ ರೂಪಿಸಲಾಗುವುದು. ಕಳೆದ ಸಂಪುಟ ಸಭೆಯಲ್ಲಿ ಇದಕ್ಕೆ ಅನುಮೋದನೆ ನೀಡಲಾಗಿದೆ. ಯೋಜನೆಗಾಗಿ ರೈತರ ಜಮೀನನ್ನು ಸ್ವಾಧೀನಪಡಿಸಿಕೊಳ್ಳುವುದಿಲ್ಲ. ಸರ್ಕಾರದ ಭೂಮಿಯೇ ಸಾಕಾಗಲಿದೆ ಎಂದು ಹೇಳಿದರು.
6
+ ಅಣೆಕಟ್ಟೆಯ ಭದ್ರತೆ ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ತೀರ್ಮಾನ ತೆಗೆದುಕೊಳ್ಳಲಿದೆ. ಗಂಗಾರತಿ ಮಾದರಿಯಲ್ಲೇ ಕಾವೇರಿ ಆರತಿಯನ್ನು ಆಯೋಜಿಸಲು ಚೆಲವರಾಯಸ್ವಾಮಿ ನೇತೃತ್ವದಲ್ಲಿ ಸಮಿತಿ ರಚಿಸಲಾಗುವುದು. ಒಂದು ತಿಂಗಳಲ್ಲೇ ವರದಿ ಪಡೆದು ಮುಂದಿನ ತಿಂಗಳಿನಿಂದ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.
7
+ ಮುಂದಿನ ವರ್ಷದಿಂದ ಕೆಆರ್‌ಎಸ್‌‍ ಅಣೆಕಟ್ಟೆ ತುಂಬಿದ ವೇಳೆಯಲ್ಲಿ ಬಾಗಿನ ಅರ್ಪಿಸುವ ಸಂದರ್ಭದಲ್ಲೇ ಕಾರ್ಯಕ್ರಮ ಆಯೋಜನೆ ಮಾಡಿ 5 ಮಂದಿಗೆ ಪ್ರಶಸ್ತಿ ನೀಡಲಾಗುವುದು. ರೈತರಿಗೆ ಸಮರ್ಪಕವಾದ ನೀರು ಪೂರೈಕೆ ಮಾಡುವ 3 ಜನ ಸವಡಿಯರಿಗೆ ಒಬ್ಬ ಪ್ರಗತಿಪರ ರೈತ ಹಾಗೂ ಮತ್ತೊಬ್ಬ ಕಿರಿಯ ಎಂಜಿನಯರ್‌ಗೆ ಪ್ರಶಸ್ತಿ ನೀಡಲಾಗುವುದು ಎಂದು ತಿಳಿಸಿದರು.
eesanje/url_46_59_11.txt ADDED
@@ -0,0 +1,15 @@
 
 
 
 
 
 
 
 
 
 
 
 
 
 
 
 
1
+ ಭ್ರಷ್ಟ ಸರ್ಕಾರವೆಂದು ಬಿಂಬಿಸಲು ಬಿಜೆಪಿ ವ್ಯರ್ಥ ಪ್ರಯತ್ನ : ಸಿದ್ದು ವಾಗ್ದಾಳಿ
2
+ ಮೈಸೂರು,ಜು.29-ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ನಿರಂತರವಾಗಿ ಅನ್ಯಾಯ ಮುಂದುವರೆದಿದೆ. ಇದರ ನಡುವೆ ಬಿಜೆಪಿಯ ನಾಯಕರು ಕರ್ನಾಟಕವನ್ನು ಅನಗತ್ಯವಾಗಿ ಭ್ರಷ್ಟ ಸರ್ಕಾರ ಎಂದು ಬಿಂಬಿಸುವ ವ್ಯರ್ಥ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
3
+ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜೆಟ್‌ ಪೂರ್ವಭಾವಿ ಸಭೆ ನಡೆಸಿದಾಗ ಭದ್ರಾ ಮೇಲ್ದಂಡೆ ಯೋಜನೆಗೆ ಈ ಮೊದಲು ಘೋಷಿಸಲಾಗಿದ್ದ 5300 ಕೋಟಿ ರೂ. ಗಳನ್ನು ಬಿಡುಗಡೆ ಮಾಡಿಲ್ಲ. 15ನೇ ಹಣಕಾಸು ಆಯೋಗದ ಮಧ್ಯಂತರ ಶಿಫಾರಸಿನಲ್ಲಿ ಪೆರಿಫಿರಲ್‌ ರಿಂಗ್ ರಸ್ತೆಗೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ತಲಾ 3000 ಕೋಟಿ ರೂ. ನೀಡುವುದಾಗಿ ಘೋಷಿಸಲಾಗಿತ್ತು. ಅದರ ಪ್ರಸ್ತಾಪವೇ ಬಜೆಟ್‌ನಲ್ಲಿಲ್ಲ. ಇದು ಅನ್ಯಾಯ ಅಲ್ಲವೇ? ಎಂದರು.
4
+ ನಿರ್ಮಲಾ ಸೀತಾರಾಮನ್‌ ರಾಜ್ಯದಿಂದ ಆಯ್ಕೆಯಾಗಿ ಕೇಂದ್ರದಲ್ಲಿ ಸಚಿವರಾಗಿದ್ದಾರೆ. ಕುಮಾರಸ್ವಾಮಿಯವರು ಕೂಡ ಮಂಡ್ಯದ ಸಂಸದರಾಗಿ ಕೇಂದ್ರಸಚಿವರಾಗಿದ್ದಾರೆ. ಮಂಡ್ಯಕ್ಕಾದರೂ ಯಾವುದಾದರೂ ಯೋಜನೆ ಬಜೆಟ್‌ನಲ್ಲಿ ಪ್ರಕಟಿಸಬೇಕಿತ್ತು. ಕೈಗಾರಿಕಾ ಕಾರಿಡಾರ್‌ ಘೋಷಣೆ ಮಾಡಬಹುದಿತ್ತು. ಮೇಕೆದಾಟು ಯೋಜನೆ, ಏಮ್ಸೌ, ಐಐಟಿ ಸೇರಿದಂತೆ ಹಲವು ವಿಚಾರಗಳಿಗೆ ರಾಜ್ಯಸರ್ಕಾರ ಮನವಿ ಸಲ್ಲಿಸಿತ್ತು. ಯಾವುದೂ ಈಡೇರಿಲ್ಲ. ಇದು ಅನ್ಯಾಯವಲ್ಲವೇ? ಎಂದು ಪ್ರಶ್ನಿಸಿದರು.
5
+ ನಿರ್ಮಲಾ ಸೀತಾರಾಮನ್‌ ಬಂದಾಗಲೆಲ್ಲಾ ಸುಳ್ಳು ಹೇಳಿ ಹೋಗುತ್ತಾರೆ. ಈ ಬಾರಿಯೂ ಅದೇ ರೀತಿ ತಪ್ಪು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸಿದ್ದಾರೆ. 15ನೇ ಹಣಕಾಸು ಆಯೋಗದಲ್ಲಿ ನಮಗೆ ಭಾರಿ ಅನ್ಯಾಯವಾಗಿದೆ ಎಂದು ಸಿದ್ದರಾಮಯ್ಯ ಪುನರುಚ್ಚರಿಸಿದರು.
6
+ ರಾಜ್ಯದಲ್ಲಿ ಕೈಗಾರಿಕೆಗಳು ಬೇರೆ ರಾಜ್ಯಕ್ಕೆ ಹೋಗುತ್ತಿವೆ ಎಂದು ನಿರ್ಮಲಾ ಸೀತಾರಾಮನ್‌ ದೂರಿದ್ದಾರೆ. ಇವರ ಅವಧಿಯಲ್ಲಿ ಭಾರತಕ್ಕೆ ವಿದೇಶಿ ಬಂಡವಾಳ ಹೂಡಿಕೆಯೇ ತಗ್ಗಿದೆ. ಅದಕ್ಕೆ ಮೂಲ ಕಾರಣ ಕೇಂದ್ರ ಹಣಕಾಸು ಸಚಿವರು ರೂಪಿಸಿದ ನೀತಿಗಳು ಎಂದು ಹೇಳಿದರು.
7
+ ರಾಜ್ಯಸರ್ಕಾರ ತನ್ನ ಪಾಲಿನ ಹಣ ನೀಡದೇ ಕೇಂದ್ರದಿಂದ ಅನುದಾನ ಕೇಳುತ್ತಿದೆ ಎಂದು ಕುಮಾರಸ್ವಾಮಿ ಆರೋಪಿಸಿರುವುದನ್ನು ಆಕ್ಷೇಪಿಸಿದ ಸಿದ್ದರಾಮಯ್ಯನವರು, ದೇಶದಲ್ಲೇ ಮಹಾರಾಷ್ಟ್ರದ ನಂತರ ಅತೀ ಹೆಚ್ಚು ತೆರಿಗೆ ಪಾವತಿ ಮಾಡುತ್ತಿರುವುದು ಕರ್ನಾಟಕ ರಾಜ್ಯ. ನಮಗೆ ನ್ಯಾಯಯುತವಾದ ಪಾಲು ನೀಡಬೇಕಿದೆ. ಇವರೇ ಘೋಷಣೆ ಮಾಡಿದ ಭದ್ರಾ ಮೇಲ್ದಂಡೆ ಯೋಜನೆ ಹಣ ಬಾಕಿ ಇರುವಾಗಲೂ ರಾಜ್ಯಕ್ಕೆ ಯಾವುದೇ ಹಣ ಕೊಡಬೇಕಿಲ್ಲ ಎಂದು ನಿರ್ಮಲಾ ಸೀತಾರಾಮನ್‌ ಹೇಳುತ್ತಿದ್ದಾರೆ ಎಂದು ಆಕ್ಷೇಪಿಸಿದರು.
8
+ ನೀತಿ ಆಯೋಗದ ಸಭೆಗೆ ಭಾಗವಹಿಸದೇ ಇರುವ ಬಗ್ಗೆ ಮಾಡಲಾಗುತ್ತಿರುವ ಟೀಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಕೇಂದ್ರದ ಅನ್ಯಾಯವನ್ನು ವಿರೋಧಿಸಿಯೇ ನಾವು ಸಭೆಯನ್ನು ಬಹಿಷ್ಕರಿಸಿದ್ದೇವೆ. ನಮಂತೆಯೇ ತಮಿಳುನಾಡು, ತೆಲಂಗಾಣ ಸೇರಿದಂತೆ ಬಿಜೆಪಿಯೇತರ ಆಡಳಿತವಿರುವ ಎಲ್ಲಾ ರಾಜ್ಯಗಳು ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಿವೆ.
9
+ ಮಮತಾ ಬ್ಯಾನರ್ಜಿ ಸಭೆಯಲ್ಲಿ ಭಾಗವಹಿಸಿದ್ದರು. ಕೊನೆಗೂ ಅವರಿಗೂ ಮಾತನಾಡಲು ಅವಕಾಶ ಸಿಕ್ಕಿಲ್ಲ ಎಂದು ಸಭಾತ್ಯಾಗ ಮಾಡಿದ್ದಾರೆ ಎಂದು ಹೇಳಿದರು.ರಾಜ್ಯದಲ್ಲಿ ಭ್ರಷ್ಟಾಚಾರ ಪೂರ್ತಿ ಹೋಗಿದೆ ಎಂದು ಹೇಳುವುದಿಲ್ಲ. ಆದರೆ ತಗ್ಗಿದೆ. ಆದರೂ ಕರ್ನಾಟಕವನ್ನು ಭ್ರಷ್ಟ ಸರ್ಕಾರ ಎಂದು ಬಿಂಬಿಸಲು ಯತ್ನಿಸುತ್ತಿದ್ದಾರೆ. ನಾವು ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಕರ್ನಾಟಕ ಭ್ರಷ್ಟ ಸರ್ಕಾರವಲ್ಲ ಎಂದು ಸ್ಪಷ್ಟಪಡಿಸಿದರು.
10
+ ಈ ಹಿಂದೆ ಬಿಜೆಪಿಯ ಅವಧಿಯಲ್ಲಿ ನಡೆದಿದ್ದ 21 ಹಗರಣಗಳನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ್ದೇನೆ. ಗುರುರಾಘವೇಂದ್ರ ಬ್ಯಾಂಕಿನ ವಂಚನೆ ಸೇರಿದಂತೆ ಹಲವು ಹಗರಣವನ್ನು ಸಿಬಿಐಗೆ ನೀಡಿದ್ದೇವೆ. ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಒಂದನ್ನೂ ಕೂಡ ಸಿಬಿಐ ತನಿಖೆಗೆ ನೀಡಿಲ್ಲ ಎಂದು ವಾಗ್ದಾಳಿ ನಡೆಸಿದರು.
11
+ ಮುಡಾ ಪ್ರಕರಣದಲ್ಲಿ ನಾವೂ ಕೂಡ ಪಾದಯಾತ್ರೆ ಮಾಡುತ್ತೇವೆ. ಯಾವ ಕಾರಣಕ್ಕಾಗಿ ಬಿಜೆಪಿ ಮತ್ತು ಜೆಡಿಎಸ್‌‍ನವರು ಪಾದಯಾತ್ರೆ ಮಾಡುತ್ತಿದ್ದಾರೆ?, ಬಿಜೆಪಿಯವರು ಹಲವಾರು ಹಗರಣವನ್ನು ನಡೆಸಿದ್ದಾರೆ. ಒಂದನ್ನೂ ಅವರು ತನಿಖೆ ನಡೆಸಲಿಲ್ಲ. ನಮ ಅವಧಿಯಲ್ಲಿ ಜನರಲ್ಲಿ ಅನುಮಾನ ಇರಬಾರದು ಎಂಬ ಕಾರಣಕ್ಕೆ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದೇವೆ ಎಂದು ತಿಳಿಸಿದರು.
12
+ ಬಿಜೆಪಿ-ಜೆಡಿಎಸ್‌‍ನವರಿಗೆ ನಮ ಪೊಲೀಸ್‌‍ ವ್ಯವಸ್ಥೆ ಮೇಲೆ ನಂಬಿಕೆ ಇಲ್ಲವೇ? ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ, ಬ್ಲಾಕ್‌ಮೇಲ್‌ ಮಾಡುವುದರಲ್ಲಿ ನಿಸ್ಸೀಮರು ಎಂದು ವಾಗ್ದಾಳಿ ನಡೆಸಿದರು. ಬಂಡವಾಳ ಹೂಡಿಕೆ ಹಿನ್ನಡೆಯಾಗಿದೆ ಎಂದು ನಿರ್ಮಲಾ ಸೀತಾರಾಮನ್‌ ಟೀಕೆ ಮಾಡಿರುವುದಕ್ಕೆ ಸವಿಸ್ತಾರವಾದಂತಹ ಹೇಳಿಕೆ ನೀಡಲು ಸಚಿವರಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.
13
+ ಕುಮಾರಸ್ವಾಮಿ ಬಹಳಷ್ಟು ಮಾತನಾಡುತ್ತಿದ್ದಾರೆ. 1984 ರಲ್ಲಿ ಮುಡಾದಿಂದ ಕೈಗಾರಿಕಾ ನಿವೇಶನ ಪಡೆದಿದ್ದಾರೆ. ಸ್ವಾಧೀನಪತ್ರ ತೆಗೆದುಕೊಂಡಿದ್ದಾರೆ. ಆದರೆ ಕೈಗಾರಿಕೆಯನ್ನೇ ಮಾಡಿಲ್ಲ. ಈಗ ನಿವೇಶನವನ್ನೇ ಪಡೆದಿಲ್ಲ ಎಂದು ಹೇಳುತ್ತಿದ್ದಾರೆ. ಈ ಹಿಂದೆ ಪುಟ್ಟಯ್ಯ ಅಧ್ಯಕ್ಷರಾಗಿದ್ದಾಗ ದೇವೇಗೌಡರ ಕುಟುಂಬಕ್ಕೆ ಎಷ್ಟು ನಿವೇಶನ ಕೊಡಿಸಲಾಗಿದೆ ಎಂದು ನಾವು ವಿವರ ನೀಡುವ ಮೂಲಕ ರಾಜಕೀಯವಾಗಿಯೇ ಪ್ರತಿಕ್ರಿಯೆ ನೀಡುತ್ತೇವೆ ಎಂದರು.
14
+ ಮಳೆ ಸುರಿಯುತ್ತಿರುವುದರಿಂದ ಕಾವೇರಿ ನೀರು ಬಿಡಲಾಗುತ್ತಿದ್ದು, ಮೆಟ್ಟೂರು ಜಲಾಶಯ ತುಂಬಿಹೋಗುವ ಸಾಧ್ಯತೆಯಿದೆ. ನೀರು ವ್ಯರ್ಥವಾಗುವುದನ್ನು ತಪ್ಪಿಸಲು ತಮಿಳುನಾಡಿನ ಜೊತೆ ಮಾತುಕತೆ ನಡೆಸಲು ಸಿದ್ಧರಿದ್ದೇವೆ. ಆದರೆ ತಮಿಳುನಾಡಿನವರು ಮಾತುಕತೆಗೆ ಸಿದ್ಧರಿಲ್ಲ ಎಂದು ಹೇಳಿದರು.
15
+ ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ಮೇಕೆದಾಟು ಅಣೆಕಟ್ಟು ನಿರ್ಮಿಸಲು ನಾವು ಸಿದ್ಧರಿದ್ದೇವೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.ಬಾಂಗ್ಲಾ ದೇಶದಿಂದ ಅಕ್ರಮ ವಲಸಿಗರು ಆಗಮಿಸುತ್ತಿರುವ ಬಗ್ಗೆ ಮಾಹಿತಿ ಪಡೆದು ಪ್ರತಿಕ್ರಿಯೆ ನೀಡುವುದಾಗಿ ಸಿದ್ದರಾಮಯ್ಯ ಹೇಳಿದರು.
eesanje/url_46_59_12.txt ADDED
@@ -0,0 +1,5 @@
 
 
 
 
 
 
1
+ ನಾಳೆಯಿಂದ ನೆರೆಪೀಡಿತ ಪ್ರದೇಶಗಳಿಗೆ ಬಿಜೆಪಿ ನಾಯಕರ ತಂಡ ಭೇಟಿ
2
+ ಬೆಂಗಳೂರು,ಜು.29-ಭಾರತದಲ್ಲಿ ಉಂಟಾಗಿರುವ ನೆರೆ ಹಾವಳಿಯನ್ನು ಪರಿಶೀಲಿಸಿ ಸ್ಪಂದಿಸುವ ನಿಟ್ಟಿನಲ್ಲಿ ಪ್ರತಿಪಕ್ಷ ಬಿಜೆಪಿ ನಾಯಕರ ತಂಡವನ್ನು ರಚಿಸಿದೆ. ಈಗಾಗಲೇ ಉತ್ತರಕರ್ನಾಟಕ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಿಂದ ಅಪಾರ ಪ್ರಮಾಣದ ಬೆಳೆ ಹಾನಿ ಹಾಗೂ ಆಸ್ತಿಪಾಸ್ತಿ ಹಾನಿಗೊಂಡಿದ್ದು, ಈ ಸಂದರ್ಭದಲ್ಲಿ ಜನತೆಯ ಸಂಕಷ್ಟಕ್ಕೆ ಸ್ಪಂದಿಸುವ ನಿಟ್ಟಿನಲ್ಲಿ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌, ಮಾಜಿ ಸಚಿವರಾದ ಅಶ್ವಥನಾರಾಯಣ,
3
+ ಅರಗ ಜ್ಞಾನೇಂದ್ರ, ಶ್ರೀರಾಮುಲು ಹಾಗೂ ಮಾಜಿ ಸಚಿವೆ ಶಶಿಕಲಾ ಜೊಲ್ಲೆ , ಮೇಲನೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ ಅರವಿಂದ್‌ ಬೆಲ್ಲದ್‌ ನೇತೃತ್ವದಲ್ಲಿ 6 ತಂಡಗಳನ್ನು ರಚಿಸಲಾಗಿದ್ದು, ಇದರಲ್ಲಿ ಶಾಸಕರು, ಜಿಲ್ಲಾಧ್ಯಕ್ಷರು ಹಾಗೂ ರಾಜ್ಯ ಮಟ್ಟದ ಮುಖಂಡರು ಇರಲಿದ್ದು, ನಾಳೆಯಿಂದಲೇ ರಾಜ್ಯಾದ್ಯಂತ ಸಂಚರಿಸಲಿದೆ.
4
+ ವಿಧಾನಪರಿಷತ್‌ ವಿಪಕ್ಷ ನಾಯಕ ನಾರಾಯಣಸ್ವಾಮಿ ನೇತೃತ್ವದ ತಂಡ ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಪರಿಶೀಲನೆ ನಡೆಸಿದರೆ ಅರವಿಂದ್‌ ಬೆಲ್ಲದ್‌ ನೇತೃತ್ವದ ತಂಡ ಬಾಗಲಕೋಟೆ, ಬಿಜಾಪುರ ಜಿಲ್ಲೆಗಳಲ್ಲಿ ಪರಿಶೀಲನೆ ನಡೆಸಲಿದೆ.ಮಾಜಿ ಸಚಿವ ಬಿ.ಶ್ರೀರಾಮುಲು ನೇತೃತ್ವದ ತಂಡ ವಿಜಯನಗರಕ್ಕೆ ಭೇಟಿ ನೀಡಿ ಜನರ ಸಂಕಷ್ಟಗಳನ್ನು ಆಲಿಸಲಿದೆ. ಮಾಜಿ ಶಾಸಕ ಗಾಲಿ ಜನಾರ್ಧನ್‌ ರೆಡ್ಡಿ ಭಾಗಿಯಾಗಲಿದ್ದಾರೆ.
5
+ ಆರ್‌.ಅಶೋಕ್‌ ನೇತೃತ್ವದ ತಂಡ ಮಂಗಳೂರು, ಬೆಳಗಾವಿ ಜಿಲ್ಲೆಗಳಲ್ಲಿ ಅರಗ ಜ್ಞಾನೇಂದ್ರ ಅವರ ತಂಡ ಶಿವಮೊಗ್ಗ ಜಿಲ್ಲೆಗಳಲ್ಲಿ ಸಂಚರಿಸಲಿದೆ.
eesanje/url_46_59_2.txt ADDED
@@ -0,0 +1,6 @@
 
 
 
 
 
 
 
1
+ ಕರಾವಳಿ, ಮಲೆನಾಡು ಭಾಗದಲ್ಲಿ ಎರಡು ದಿನ ಭಾರೀ ಮಳೆ ಮುನ್ನೆಚ್ಚರಿಕೆ
2
+ ಬೆಂಗಳೂರು, ಜು.31-ನಿರಂತರ ಮಳೆಯಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಅತಿವೃಷ್ಟಿ, ಪ್ರವಾಹ ಉಂಟಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಆದರೂ ವರುಣನಿಗೆ ಮಾತ್ರ ತೃಪ್ತಿಯಾದಂತೆ ಕಂಡುಬರುತ್ತಿಲ್ಲ. ಸದ್ಯಕ್ಕಂತೂ ಮಳೆ ನಿಲ್ಲುವ ಮುನ್ಸೂಚನೆಗಳಿಲ್ಲ.
3
+ ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಗಳಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ.
4
+ ದಕ್ಷಿಣ ಗುಜರಾತ್‌ ನಿಂದ ಕೇರಳ ರಾಜ್ಯದ ಕರಾವಳಿಯ ಅರಬ್ಬೀ ಸಮುದ್ರ ಮಟ್ಟದಲ್ಲಿ ಉಂಟಾದ ಮೇಲುಬ್ಬರದ (ಟ್ರಫ್‌) ಪರಿಣಾಮ ರಾಜ್ಯದ ಕರಾವಳಿ ಮತ್ತು ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಇಂದು ಬಿರುಗಾಳಿಯಿಂದ ಕೂಡಿದ ಸಿಡಿಲುಸಹಿತ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕೆಲವೆಡೆ ಅತ್ಯಧಿಕ ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್‌ಅಲರ್ಟ್‌ ನೀಡಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.
5
+ ನಾಳೆ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,ಆರೆಂಜ್‌‍ ಅಲರ್ಟ್‌ ನೀಡಲಾಗಿದೆ. ಅನಂತರದ ಮೂರು ದಿನಗಳಲ್ಲೂ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ, ಇಂದಿನಿಂದ ಆಗಸ್ಟ್‌ 2 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.
6
+ ಅನಂತರದ ದಿನಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.ನಿರಂತರವಾಗಿ ಬೀಳುತ್ತಿರುವ ಮಳೆಗೆ ರಾಜ್ಯ ಪ್ರಮುಖ ಜಲಾಶಯಗಳು ಭರ್ತಿಯಾಗಿದ್ದು, ನದಿಗಳಲ್ಲಿ ಪ್ರವಾಹ ಉಂಟಾಗಿದೆ. ಇದರಿಂದ ಅಪಾರ ಪ್ರಮಾಣದ ಗುಡ್ಡ ಕುಸಿತ, ರಸ್ತೆ, ಸೇತುವೆ, ಬೆಳೆ, ವಿದ್ಯುತ್‌ ಸಂಪರ್ಕ, ಮನೆಗಳಿಗೆ ಹಾನಿ ಸಂಭವಿಸಿದೆ.
eesanje/url_46_59_3.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಬಿಜೆಪಿ- ಜೆಡಿಎಸ್‌‍ ಪಾದಯಾತ್ರೆಗೆ ಕಾಂಗ್ರೆಸ್‌‍ನಿಂದ ಕೌಂಟರ್ ಪ್ಲಾನ್ ರೆಡಿ
2
+ ಬೆಂಗಳೂರು, ಜು.30-ಬಿಜೆಪಿ- ಜೆಡಿಎಸ್‌‍ ನಾಯಕರು ಮುಡಾ ಹಗರಣದ ವಿರುದ್ಧ ಜನಜಾಗೃತಿ ಮೂಡಿಸಲು ನಡೆಸಲಿರುವ ಪಾದ ಯಾತ್ರೆಯುದ್ದಕ್ಕೂ ಕಾಂಗ್ರೆಸ್‌‍ ಕೂಡ ಸಾರ್ವಜನಿಕ ಕಾರ್ಯಕ್ರಮಗಳನ್ನು ಆಯೋಜಿಸಿ ಜನರಿಗೆ ಸತ್ಯಾಂಶ ತಿಳಿಸಲು ಮುಂದಾಗಿದೆ.
3
+ ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ಸಂಪುಟದ ಹಿರಿಯ ಸಚಿವರೊಂದಿಗೆ ತುರ್ತು ಸಭೆ ನಡೆಸಿ ಮಹತ್ವದ ಚರ್ಚೆ ನಡೆಸಿದ್ದಾರೆ.ಬಿಜೆಪಿ-ಜೆಡಿಎಸ್‌‍ ಪಕ್ಷಗಳು ಬೆಂಗಳೂರಿನಿಂದ ಮೈಸೂರುವರೆಗೆ ಪಾದಯಾತ್ರೆ ನಡೆಸಿ ಮುಡಾ ನಿವೇಶನ ಹಂಚಿಕೆ ಹಾಗೂ ಮಹರ್ಷಿ ವಾಲೀಕಿ ಹಗರಣದ ಕುರಿತು ಜನಜಾಗೃತಿ ಮೂಡಿಸಲು ಮುಂದಾಗಿವೆ. ಇದಕ್ಕೆ ತಿರುಗೇಟು ನೀಡಲು ಕಾಂಗ್ರೆಸ್‌‍ ಮುಂದಾಗಿದೆ.
4
+ ಪಾದಯಾತ್ರೆ ನಡೆಯುವ ಮಾರ್ಗ ದುದ್ದಕ್ಕೂ ಬಿಡದಿ, ರಾಮನಗರ, ಮದ್ದೂರು-ಮಂಡ್ಯ, ಮೈಸೂರು ಪ್ರದೇಶಗಳಲ್ಲಿ ಕಾಂಗ್ರೆಸ್‌‍ ವತಿಯಿಂದ ಬೃಹತ್‌ ಸಮಾವೇಶಗಳನ್ನು ಆಯೋಜಿಸಿ ಜನರಿಗೆ ಸತ್ಯಾಂಶ ತಿಳಿಸಲು ಹಾಗೂ ಬಿಜೆಪಿ-ಜೆಡಿಎಸ್‌‍ ಪಾಳಯದ ಹಗರಣಗಳ ಬಗ್ಗೆ ಮಾಹಿತಿ ನೀಡಲು ನಿರ್ಧರಿಸಲಾಗಿದೆ.
5
+ ಸದ್ಯದ ಕಾರ್ಯಕ್ರಮ ಪಟ್ಟಿ ಪ್ರಕಾರ, ಬಿಡದಿ, ರಾಮನಗರ, ಮದ್ದೂರು-ಮಂಡ್ಯ, ಮೈಸೂರು ರಸ್ತೆಯಲ್ಲಿ ನಾಲ್ಕು ಕಡೆ ಸಾರ್ವಜನಿಕ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ. ಬಿಜೆಪಿಯ ಪಾದಯಾತ್ರೆ ತಲುಪುವ ಒಂದು ದಿನದ ಮೊದಲು ಕಾಂಗ್ರೆಸ್‌‍ ನಿಗದಿತ ಸ್ಥಳಗಳಲ್ಲಿ ಬೃಹತ್‌ ಸಮಾ ವೇಶಗಳನ್ನು ಆಯೋಜಿಸಲಿದೆ.
6
+ ಹೀಗಾಗಿ ಪಾದಯಾತ್ರೆಯಲ್ಲಿ ಬಿಜೆಪಿ- ಜೆಡಿಎಸ್‌‍ ನಾಯಕರು ಮಾಡುವ ಎಲ್ಲಾ ಆರೋಪಗಳಿಗೂ ಎದು ರೇಟು ನೀಡಲು ನಿರ್ಧರಿಸಲಾಗಿದೆ.ನಿನ್ನೆ ನಡೆದ ಸಭೆಯಲ್ಲಿ ಸಮಾವೇಶಗಳ ಆಯೋಜನೆ ಮತ್ತು ಯಾರ್ಯಾರು, ಯಾವ್ಯಾವ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು?, ಯಾವ್ಯಾವ ವಿಚಾರಗಳನ್ನು ಪ್ರಸ್ತಾಪಿಸಬೇಕು? ಎಂಬ ಕುರಿತು ಚರ್ಚೆಗಳಾಗಿವೆ.
7
+ ಅಂತಿಮವಾಗಿ ಮೈಸೂರಿನ ಸಮಾ ವೇಶಕ್ಕೆ ಹೈಕಮಾಂಡ್‌ ನಾಯಕ ರನ್ನು ಆಹ್ವಾನಿಸುವ ನಿರ್ಧಾರ ಗಳಾಗಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮತ್ತು ಸಂಪುಟದ ಪ್ರಮುಖ ಸಚಿವರು, ಕಾಂಗ್ರೆಸ್‌‍ ನಾಯಕರು ಸಮಾವೇಶಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
8
+ ಬಿಜೆಪಿಯ ಹಗರಣಗಳನ್ನು ಎಳೆಎಳೆ ಯಾಗಿ ಬಿಡಿಸಿಟ್ಟು ವಿರೋಧ ಪಕ್ಷಗಳ ನಾಯಕರ ಟೀಕೆಗಳಿಗೆ ಆಸ್ಪದವೇ ಇಲ್ಲದಂತೆ ಮಾಡುವ ರಣತಂತ್ರವನ್ನು ಕಾಂಗ್ರೆಸ್‌‍ ರೂಪಿಸಿದೆ.ಪಾದಯಾತ್ರೆಯ ಬಳಿಕ ರಾಜ್ಯದ ಇತರ ಪ್ರದೇಶಗಳಲ್ಲೂ ಇದೇ ರೀತಿಯ ಸಮಾವೇಶ ನಡೆಸುವ ಬಗ್ಗೆ ಚರ್ಚೆಗಳಾ ಗಿದ್ದು, ಬಿಜೆಪಿ-ಜೆಡಿಎಸ್‌‍ಗೆ ಭರ್ಜರಿ ಕೌಂಟರ್‌ ನೀಡಲು ತಯಾರಿ ನಡೆದಿದೆ.
9
+ ಪಾದಯಾತ್ರೆ ನಡೆಸಲು ಅಧಿಕೃತವಾಗಿ ಅನುಮತಿ ನೀಡದಿರಲು ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಈಗಾಗಲೇ ಸ್ಪಷ್ಟಪಡಿಸಿರುವ ಗೃಹಸಚಿವ ಪರಮೇಶ್ವರ್‌, ಈ ಹಿಂದೆ ನಾವು ��ಿರೋಧಪಕ್ಷದಲ್ಲಿದ್ದಾಗ ಹಲವು ಪಾದಯಾತ್ರೆಗಳನ್ನು ನಡೆಸಿದ್ದೇವೆ. ಆಗಿನ ಸರ್ಕಾರ ನಮಗೆ ಅನುಮತಿ ನೀಡಿರಲಿಲ್ಲ. ಅದೇ ರೀತಿ ಈಗ ನಾವು ಪಾದಯಾತ್ರೆಗೆ ಅನುಮತಿ ನೀಡುವುದಿಲ್ಲ. ಆದರೆ ಅವರ ಹೋರಾಟಕ್ಕೆ ಅಡ್ಡಿಪಡಿಸುವುದಿಲ್ಲ. ರಾಜಕೀಯವಾಗಿ ಸೂಕ್ತ ಪ್ರತ್ಯುತ್ತರ ನೀಡುತ್ತೇವೆ ಎಂದು ಪರಮೇಶ್ವರ್‌ ಹೇಳಿದ್ದಾರೆ.
10
+ ವಿಧಾನಮಂಡಲ ಅಧಿವೇಶನದಲ್ಲಿ ಅರ್ಧಕ್ಕೆ ಮೊಟಕುಗೊಂಡ ಚರ್ಚೆ ಗಳು ಇನ್ನು ಮುಂದೆ ಜನತಾ ನ್ಯಾಯಾಲಯದಲ್ಲಿ ಚರ್ಚೆಗೊಳ ಗಾಗಲಿವೆ. ಪಾದಯಾತ್ರೆಯುದ್ದಕ್ಕೂ ರಾಜಕೀಯ ಜಿದ್ದಾಜಿದ್ದಿ ಕಂಡುಬರುವ ಸಾಧ್ಯತೆಗಳಿವೆ.
eesanje/url_46_59_4.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ರಾಜ್ಯದಲ್ಲಿ ನಿಲ್ಲದ ವರುಣನ ಅವಾಂತರಗಳು : ಗ್ರಾಮಗಳು ಜಲಾವೃತ, ಹಲವೆಡೆ ಗುಡ್ಡ ಕುಸಿತ
2
+ ಬೆಂಗಳೂರು,ಜು.30-ಕೊಡಗು, ಬೆಳಗಾವಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಅತ್ತ ಉತ್ತರಕರ್ನಾಟಕದಲ್ಲಿ ಮಳೆಯ ಪ್ರಮಾಣ ತಗ್ಗಿದ್ದರೂ ಮಹಾರಾಷ್ಟ್ರದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದರಿಂದ ಕೃಷ್ಣಾ ಹಾಗೂ ಉಪನದಿಗಳ ಮಟ್ಟ ಏರಿಕೆಯಾಗಿ ಭಾರಿ ಪ್ರಮಾಣದಲ್ಲಿ ನೀರು ಹರಿದು ಗಡಿನಾಡುಗಳಲ್ಲಿ ಹಳ್ಳಿಗಳು ಜಲಾವೃತವಾಗಿ ನೂರಾರು ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ.
3
+ ಕೊಡಗು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ನಿನ್ನೆ ಸಂಜೆ ಸುರಿದ ಭಾರಿ ಮಳೆಗೆ ತ್ರಿವೇಣಿ ಸಂಗಮ ಮುಳುಗಡೆಯಾಗಿದೆ. ಬಾಗಮಂಡಲ ವ್ಯಾಪ್ತಿಯಲ್ಲಿ ಸುರಿಯುತ್ತಿರುವ ಮಳೆಗೆ ಭಾಗಮಂಡಲದ ಭಗಂಡೇಶ್ವರ ಸನ್ನಿಧಿಯ ಮುಂಬಾಗಿಲ ಮೆಟ್ಟಿಲವರೆಗೆ ನೀರು ಆವರಿಸಿದೆ.
4
+ ಅತ್ತ ಮಲೆನಾಡಿನಲ್ಲೂ ಮಳೆಯ ಅಬ್ಬರ ಹೆಚ್ಚಾಗಿದ್ದು, ಭಾರಿ ಮಳೆಯಿಂದ ಚಾರ್ಮುಡಿ ರಸ್ತೆಯಲ್ಲಿ ಬೃಹತ್‌ ಮರವೊಂದು ರಸ್ತೆಗುರುಳಿ ಚಿಕ್ಕಮಗಳೂರಿನ ಮಂಗಳೂರು ಮಾರ್ಗ ಸಂಪೂರ್ಣ ಬಂದ್‌ ಆಗಿ ಕೊಟ್ಟಿಗೆಹಾರ ಸಮೀಪ ಟ್ರಾಫಿಕ್‌ ಜಾಮ್‌ ಆಗಿತ್ತು. ವಾಹನಗಳನ್ನು ನಿಲ್ಲಿಸಲು ಪೊಲೀಸರು ಹರಸಾಹಸ ಪಡುವಂತಾಯಿತು. ಸಕಲೇಶಪುರ ಸಮೀಪ ಶಿರಾಡಿಘಾಟ್‌ ರಸ್ತೆಯ ದೊಡ್ಡತಪ್ಪಲೆ ಬಳಿ ಭೂ ಕುಸಿತ ಉಂಟಾಗಿ ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ.
5
+ ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದ ರಸ್ತೆ ಪಕ್ಕದಲ್ಲಿ ಹಾದುಹೋಗಿರುವ ಎತ್ತಿನಹೊಳೆ ಪೈಪ್‌ಲೈನ್‌ ಸಮೀಪ ಭೂಮಿ ಕುಸಿದು ಬಾರ್ಲಿ- ಮಲ್ಲಗದ್ದೆ-ಕಾಡುಮನೆ ಸೇರಿದಂತೆ ಹಲವು ಗ್ರಾಮಗಳಿಗೆ ರಸ್ತೆ ಸಂಪರ್ಕ ಕಡಿತವಾಗಿದೆ.ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಪ್ರಮಾಣ ಕೊಂಚ ತಗ್ಗಿದೆ. ಕಾವೇರಿ ಜಲಾಶಯಗಳೀಂದ ನದಿಗೆ ನೀರು ಬಿಡುತ್ತಿರುವ ಹೊರಹರಿವಿನ ಪ್ರಮಾಣ ಕಡಿಮೆಯಾದ ಹಿನ್ನೆಲೆಯಲ್ಲಿ ಪ್ರವಾಹ ಭೀತಿಯಲ್ಲಿದ್ದ 9 ಗ್ರಾಮಗಳು ಪಾರಾಗಿವೆ.
6
+ ಕಾವೇರಿ ನದಿಪಾತ್ರದ ಕೊಳ್ಳೆಗಾಲ ತಾಲ್ಲೂಕಿನ ದಾಸಪುರ, ಮಳ್ಳೂರು, ಹಳೆ ಅನ್ನಗಳ್ಳಿ, ಹಳೆ ಹಂಪಾಪುರ, ಅರಳೆ ಗ್ರಾಮದ ಪ್ರದೇಶಗಳಲ್ಲಿ ಪ್ರವಾಹ ನೀರಿನ ಪ್ರಮಾಣ ಕಡಿಮೆಯಾಗಿದೆ.ಸದ್ಯ ಕಾವೇರಿ ಜಲಾನಯನದ ಪ್ರದೇಶದಲ್ಲಿ ಯಾವುದೇ ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಇಲ್ಲ. ಪ್ರವಾಹದಿಂದ ಆದ ಬೆಳೆಹಾನಿಯ ಬಗ್ಗೆ ಡ್ರೋನ್‌ಗಳ ಮೂಲಕ ಸರ್ವೆ ನಡೆಸಲಾಗುತ್ತಿದೆ.
7
+ ಬೆಳಗಾವಿ :ಮಹಾರಾಷ್ಟ್ರದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಕೃಷ್ಣ, ದೂದ್‌ಗಂಗಾ, ವೇದ್‌ಗಂಗಾ, ಘಟಪ್ರಭಾ, ಮಲಪ್ರಭಾ, ಹಿರಣ್ಯಕೇಶಿ, ಮಾರ್ಕಂಡೇಯ ನದಿಗಳ ಪ್ರವಾಹದಿಂದ 44 ಸೇತುವೆಗಳು ಮುಳುಗಡೆಯಾಗಿವೆ. ಇಡ್ಕಲ್‌ ಜಲಾಶಯದಿಂದ ಘಟಪ್ರಭಾ ನದಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿಯಬಿಟ್ಟಿರುವುದರಿಂದ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ಪಿ.ವೈ.ಹುಣಶ್ಯಾಳ ಗ್ರಾಮ ಸಂಪೂರ್ಣ ಜಲಾವೃತವಾ���ಿದೆ.
8
+ ಇಡೀ ಗ್ರಾಮಕ್ಕೆ ಗ್ರಾಮವೇ ನೀರಿನಿಂದ ಆವೃತವಾಗಿರುವುದಿರಂದ ಜನಜೀವನ ಸ್ತವ್ಯಸ್ಥವಾಗಿದ್ದು, ಗ್ರಾಮದಲ್ಲಿರುವ ಎಲ್ಲರನ್ನೂ ಸ್ಥಳಾಂತರ ಮಾಡಲಾಗಿದೆ. ಹಲವೆಡೆ ಮಳೆ ಎಡಬಿಡದೆ ಬರುತ್ತಿದ್ದರೆ, ಕೆಲವೆಡೆ ಮಳೆ ಬಿಟ್ಟುಬಿಟ್ಟು ಬರುತ್ತಿದೆ.
9
+ ಒಟ್ಟಾರೆ ಮಳೆಯಿಂದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಉತ್ತರಕರ್ನಾಟಕ ಕರಾವಳಿ, ದಕ್ಷಿಣ ಕರ್ನಾಟಕ ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟದಿಂದ ಜನಜೀವನ ಅಸ್ತವ್ಯಸ್ತವಾಗಿದ್ದರೆ, ಮಧ್ಯ ಕರ್ನಾಟಕ ಭಾಗದಲ್ಲಿ ಮಳೆ ಅಷ್ಟೇನೂ ಪರಿಣಾಮ ಬೀರಿಲ್ಲ.
10
+ ಕಾಫಿನಾಡಿನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ:ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮತ್ತೆ ಮಳೆಯ ಆರ್ಭಟ ಜೋರಾಗಿದ್ದು, ಭಾರೀ ಬಿರುಗಾಳಿ ಮಳೆಗೆ ಚಾರ್ಮುಡಿ ಘಾಟ್‌ನ 9ನೆ ತಿರುವಿನಲ್ಲಿಗುಡ್ಡ ಕುಸಿತ ಉಂಟಾದ ಪರಿಣಾಮ ಬೆಂಗಳೂರು-ಮಂಗಳೂರು ಮಾರ್ಗ ಸಂಪೂರ್ಣ ಬಂದ್‌ ಆಗಿ ವಾಹನ ಚಾಲಕರು ಹಾಗೂ ಪ್ರಯಾಣಿಕರು ಪರದಾಡುವಂತಾಗಿತ್ತು.
11
+ ರಾತ್ರಿ ಭಾರೀ ಮಳೆಯಾಗಿದ್ದು, ಗುಡ್ಡಕುಸಿತದ ಪರಿಣಾಮ ಕೊಟ್ಟಿಗೆಹಾರದ ಬಳಿ ಭಾರೀ ಟ್ರಾಫಿಕ್‌ ಜಾಮ್‌ ಉಂಟಾಗಿ ಪ್ರಯಾಣಿಕರು ಗಂಟೆಗಟ್ಟಲೆ ರಸ್ತೆಯಲ್ಲೇ ಕತ್ತಲಲ್ಲೇ ಕಾಲ ಕಳೆಯುವಂತಾಗಿತ್ತು. ಸುದ್ದಿ ತಿಳಿದ ಕೂಡಲೇ ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ ಮರ ತೆರವುಗೊಳಿಸಿದ ನಂತರ ವಾಹನಗಳು ಮಂದಗತಿಯಲ್ಲಿ ಸಾಗಿದವು.ಎನ್‌ಆರ್‌ ಪುರ ತಾಲೂಕಿನ ಮಹಲ್ಲೋಡು ಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಿದ್ದು, ಬಾಳೆಹೊನ್ನೂರು- ಕಳಸ ಮಾರ್ಗ ಬಂದ್‌ ಆಗಿತ್ತು.
12
+ ಕಳೆದ ರಾತ್ರಿ ಭಾರೀ ಮಳೆಯಾಗಿದ್ದು , ಭದ್ರಾನದಿ ತುಂಬಿ ಹರಿಯುತ್ತಿದ್ದು, ನದಿಪಕ್ಕದ ಗ್ರಾಮಗಳಾದ ಬರೇಗುಡ್ಡಾ, ಮಹಲ್ಲೋಡು ನಿವಾಸಿಗಳನ್ನು ಸ್ಥಳಾಂತರಿಸಲಾಗುತ್ತಿದೆ. ಧಾರಾಕಾರ ಮಳೆಯಿಂದ ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಹಾಗೂ ಎನ್‌ಆರ್‌ ಪುರ ತಾಲೂಕಿನ ಅಂಗನವಾಡಿ ಮತ್ತು ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೊಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಆದೇಶ ಹೊರಡಿಸಿದ್ದಾರೆ.
eesanje/url_46_59_5.txt ADDED
@@ -0,0 +1,7 @@
 
 
 
 
 
 
 
 
1
+ ಅಕ್ರಮ ಬಾಂಗ್ಲಾ ವಲಸಿಗರನ್ನು ಅವರ ದೇಶಕ್ಕೆ ಗಡಿಪಾರು ಮಾಡುತ್ತೇವೆ : ಪರಮೇಶ್ವರ್‌
2
+ ಬೆಂಗಳೂರು, ಜು.30– ನೆರೆಪೀಡಿತ ಪ್ರದೇಶಗಳಲ್ಲಿ ಅಗತ್ಯ ಪರಿಹಾರ ಕಾರ್ಯ ಕೈಗೊಳ್ಳಲು ರಾಜ್ಯಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದೆ. ವಿರೋಧಪಕ್ಷಗಳವರು ತಡವಾಗಿ ಎಚ್ಚೆತ್ತು ಕೊಂಡು ಬಾಧಿತ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದಾರೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಿರುಗೇಟು ನೀಡಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಸಂಕಷ್ಟಕ್ಕೀಡಾದ ಪ್ರದೇಶಗಳಲ್ಲಿ ಕ್ರಮ ಕೈಗೊಂಡಿದೆ. ಜಿಲ್ಲಾ ಸಚಿವರು ಈಗಾಗಲೇ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಜೊತೆಗೆ ಕಂದಾಯ ಸಚಿವ ಕೃಷ್ಣಭೈರೇಗೌಡ ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದು, ಅಗತ್ಯ ಪರಿಹಾರಗಳನ್ನು ಕೊಡಿಸುತ್ತಿದ್ದಾರೆ ಎಂದು ಹೇಳಿದರು.
4
+ ಬಿಜೆಪಿ-ಜೆಡಿಎಸ್‌‍ನವರು ಪಾದಯಾತ್ರೆ ನೆಪದಲ್ಲಿ ಸಂಕಷ್ಟ ಸ್ಥಳಗಳಿಗೆ ಭೇಟಿ ನೀಡುವುದಾಗಿ ಹೇಳುತ್ತಿದ್ದಾರೆ ಎಂದು ತಿರುಗೇಟು ನೀಡಿದರು.ಬಾಂಗ್ಲಾ ದೇಶದ ಅಕ್ರಮ ವಲಸಿಗರು ರಾಜ್ಯದಲ್ಲಿರುವುದು ಕಂಡುಬಂದರೆ ಅವರಲ್ಲಿ ಸೂಕ್ತ ದಾಖಲಾತಿಗಳು ಇಲ್ಲ ಎಂದು ಮನವರಿಕೆಯಾದರೆ ವಶಕ್ಕೆ ಪಡೆದು ದಿಗ್ಬಂಧನ ಕೇಂದ್ರದಲ್ಲಿರಿಸಲಾಗುವುದು. ನಂತರ ಅವರ ದೇಶಕ್ಕೆ ಮಾಹಿತಿ ನೀಡಿ ಗಡೀಪಾರು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು.
5
+ ಅಕ್ರಮ ವಲಸಿಗರ ವಿರುದ್ಧವಾಗಿ ಕ್ರಮ ಕೈಗೊಳ್ಳಲು ರಾಜಕೀಯ ವ್ಯವಸ್ಥೆಯಲ್ಲಿ ಸಾಧ್ಯವಿಲ್ಲ ಎಂದು ನಿವೃತ್ತ ಐಪಿಎಸ್‌‍ ಅಧಿಕಾರಿ ಭಾಸ್ಕರ್‌ ರಾವ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ಪರಮೇಶ್ವರ್‌, ಅವರು ಪೊಲೀಸ್‌‍ ಆಯುಕ್ತರಾಗಿದ್ದಾಗ ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂಬುದು ಅವರದೇ ಹೇಳಿಕೆಯಿಂದ ಸಾಬೀತಾಗಿದೆ. ಆದರೆ ಈಗ ನಾವು ಕ್ರಮ ಕೈಗೊಳ್ಳುತ್ತಿದ್ದೇವೆ.
6
+ ವಿದೇಶಿಗರನ್ನು ಹೊಡೆದು , ಬಂಧಿಸಿ ಜೈಲಿನಲ್ಲಿಡಲಾಗುವುದಿಲ್ಲ. ರಾಜತಾಂತ್ರಿಕ ಮಾರ್ಗದಲ್ಲಿಯೇ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.ದೆಹಲಿಯ ಭೇಟಿಯ ವೇಳೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರು ಪ್ರತ್ಯೇಕವಾಗಿ ಸಂಸತ್ ವಿರೋಧಪಕ್ಷದ ನಾಯಕ ರಾಹುಲ್‌ಗಾಂಧಿಯವರನ್ನು ಭೇಟಿ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾವು ದೆಹಲಿಗೆ ಹೋದಾಗಲೂ ಈ ರೀತಿ ಪ್ರತ್ಯೇಕವಾಗಿ ಸಾಕಷ್ಟು ಬಾರಿ ಭೇಟಿ ಮಾಡಿದ್ದೇವೆ. ಅದರಲ್ಲೇನೂ ವಿಶೇಷ ಇಲ್ಲ.
7
+ ಹೈಕಮಾಂಡ್‌ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರಿಗೆ ಮಾತ್ರ ಆಹ್ವಾನ ನೀಡಿದೆ. ಸಂಪುಟದ ಬೇರ್ಯಾವ ಸಚಿವರಿಗೂ ಆಹ್ವಾನ ಇಲ್ಲ ಎಂದರು.ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ರಕ್ಷಣೆಗೆ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಹಲವರ ಮೇಲೆ ದಾಳಿಗಳಾಗುವುದು, ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವುದು ಸಾಮಾನ್ಯ ಎಂದು ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧದ ಕಾರ್ಯಾಚರಣೆಗೆ ಪರಮೇಶ್ವರ್‌ ಪ್ರತಿಕ್ರಿಯಿಸಿದರು.
eesanje/url_46_59_6.txt ADDED
@@ -0,0 +1,5 @@
 
 
 
 
 
 
1
+ ಶಿಕ್ಷಣ ಸಂಸ್ಥೆಗಳ ನಿವೇಶನ, ಕಟ್ಟಡಗಳಿಗೆ ಸುಂಕ ವಿಧಿಸಿರುವುದಕ್ಕೆ ವಿರೋಧ
2
+ ಬೆಂಗಳೂರು, ಜು.30– ಶೈಕ್ಷಣಿಕ ಉದ್ದೇಶಕ್ಕೆ ಬಳಸುವ ನಿವೇಶನ ಅಥವಾ ಕಟ್ಟಡಗಳಿಗೆ ಬೆಂಗಳೂರು ಮಹಾನಗರ ಪಾಲಿಕೆ ಕಾನೂನು ಬಾಹಿರವಾಗಿ ಸುಂಕ ವಸೂಲಿ ಮಾಡುತ್ತಿದ್ದು, ಇದು ಕಾನೂನು ಬಾಹಿರ ಎಂದು ಕರ್ನಾಟಕ ಖಾಸಗಿ ಶಿಕ್ಷಣಗಳ ಸಂಘ ವಿರೋಧಿಸಿದೆ.
3
+ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಧ್ಯಕ್ಷ ಲೋಕೇಶ್‌ ತಾಳಿಕಟ್ಟೆ, ಕರ್ನಾಟಕ ಮುನಿಸಿಪಲ್‌ ಆಕ್ಟ್‌, ಬಿಬಿಎಂಪಿ ಆಕ್ಟ್‌ ಹಾಗೂ ಟ್ಯಾಕ್ಸ್ ಗೆ ಸಂಬಂಧಿಸಿದಂತೆ ಚಾರಿಟೇಬಲ್‌ ಟ್ರಸ್ಟ್‌ನಡಿ ಸ್ಥಾಪಿಸಿರುವ ಶಾಲೆಗಳ ಕಟ್ಟಡ ಹಾಗೂ ಖಾಲಿ ನಿವೇಶನಗಳಿಗೆ ಯಾವುದೇ ರೀತಿಯ ಸುಂಕ( ಇನಮ್‌ ಟ್ಯಾಕ್ಸ್ , ಸರ್ವಿಸ್‌‍ ಟ್ಯಾಕ್ಸ್ , ಸೆಸ್‌‍ ಅಥವಾ ಬಿಬಿಎಂಪಿ ಟ್ಯಾಕ್ಸ್ ) ವಿಧಿಸುವಂತಿಲ್ಲ ಎಂದಿದೆ.
4
+ ಜೊತೆಗೆ ರಾಜ್ಯ ಹೈಕೋರ್ಟ್‌ ಸಹ ಟ್ಯಾಕ್ಸ್ ಸಂಬಂಧಿಸಿದ ಹಲವು ತೀರ್ಪುಗಳಲ್ಲಿ ಟ್ಯಾಕ್ಸ್ ವಿಽಸುವಂತಿಲ್ಲ, ಎಂದು ತೀರ್ಪು ನೀಡಿದೆ. ಹಾಗೂ ಸ್ವಾತಂತ್ರ್ಯ ನಂತರ ಇಲ್ಲಿಯವರೆಗೂ ದೇಶದ ಯಾವುದೇ ಶಾಲೆಗಳಿಂದ ಟ್ಯಾಕ್ಸ್ ನ್ನು ವಸೂಲಿ ಮಾಡಿಲ್ಲ. ಆದರೆ ಈಗ ಜು.19ರಿಂದ ಬೆಂಗಳೂರು ನಗರದ ಬಿಬಿಎಂಪಿಯು ಒಂದು ಸರ್ಕ್ಯುಲರ್‌ ಪ್ರಕಟಿಸಿ, ಬೆಂಗಳೂರಿನ ಶಾಲಾ ಕಾಲೇಜ್‌ ನವರಿಗೆ ಬೆದರಿಕೆ ಒಡ್ಡಿ, ಕಾನೂನುಬಾಹಿರವಾಗಿ, ಟ್ಯಾಕ್ಸ್ ವಸೂಲಿ ಮಾಡುತ್ತಿರುವುದನ್ನು ನಮ್ಮ ಒಕ್ಕೂಟ ಜಂಟಿಯಾಗಿ ಖಂಡಿಸುತ್ತದೆ ಎಂದರು.
5
+ ಇದು ಶಿಕ್ಷಣ ಸಂಸ್ಥೆಗಳಿಗೆ ಮಾಡುತ್ತಿರುವ ಮೋಸ, ಈ ರೀತಿಯ ಪ್ರಕ್ರಿಯೆಯನ್ನು ತಕ್ಷಣ ನಿಲ್ಲಿಸಿ, ಈಗಾಗಲೇ ಪಡೆದಿರುವ ಟ್ಯಾಕ್ಸನ್ನು ಆಯಾ ಶಾಲಾ- ಕಾಲೇಜುಗಳಿಗೆ ಹಿಂದಿರುಗಿಸಬೇಕು. ಇಲ್ಲವಾದರೆ ಸಂಬಂಧಿಸಿದ ಅಧಿಕಾರಿಗಳ ಮೇಲೆ ಕಾನೂನು ಹೋರಾಟಕ್ಕೆ ಮುಂದಾಗಲು ನಾವು ಹಿಂಜರಿಯುವುದಿಲ್ಲ. ಈ ಕುರಿತು ಮುಖ್ಯಮಂತ್ರಿಗಳು ತಕ್ಷಣ ಮಧ್ಯಪ್ರವೇಶ ಮಾಡಿ ತಕ್ಷಣ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದರು.
eesanje/url_46_59_7.txt ADDED
@@ -0,0 +1,5 @@
 
 
 
 
 
 
1
+ ಬಿಯರ್‌ ಪ್ರೀಯರಿಗೆ ಬೆಲೆ ಏರಿಕೆ ಭಾಗ್ಯ, , ಪ್ರತಿ ಬಾಟಲಿಗೆ 10 ರಿಂದ 20 ರೂ. ಹೆಚ್ಚಳ
2
+ ಬೆಂಗಳೂರು, ಜುಲೈ 30 :ಮದ್ಯ ಪ್ರಿಯರಿಗೆ ಮತ್ತೆ ಬೆಲೆ ಏರಿಕೆ ಬಿಸಿ ತಟ್ಟಿದೆ ಬಿಯರ್‌ ಮೇಲೆ ತೆರಿಗೆ ಹೆಚ್ಚಿಸಲಾಗಿದ್ದು,ಇದರಿಂದ ಇಂದಿನಿಂದಲೇ ಬೆಲೆ 10 ರಿಂದ 20 ರೂಪಾಯಿ ಏರಿಕೆಯಾಗಲಿದೆ.ರಾಜ್ಯದಲ್ಲಿ ಅಬಕಾರಿ ಇಲಾಖೆ ಕಳೆದ 17 ತಿಂಗಳಲ್ಲಿ 5ನೇ ಬಾರಿಗೆ ಬಿಯರ್‌ ಬೆಲೆ ಏರಿಕೆಯಾಗಿದೆ. ಒಂದು ತಿಂಗಳ ಹಿಂದೆಯಷ್ಟೆ ಕಚ್ಚಾ ವಸ್ತುಗಳ ಬೆಲೆ ಏರಿಕೆ ಕಾರಣ ನೀಡಿ ಮದ್ಯ ತಯಾರಿಕೆ ಕಂಪನಿಗಳು ದರ ಏರಿಸಿತ್ತು ಆದರೆ ಈಗ ಮತ್ತೆ ಹೆಚ್ಚಿಸಲಾಗಿದೆ 1 ವರ್ಷದಲ್ಲಿ ಸರಿ ಸುಮಾರು 50ರಿಂದ 60 ರೂ.ವರೆಗೆ ಏರಿಕೆಯಾಗಿದೆ.
3
+ ಸರ್ಕಾರ ಈ ಹಿಂದೆ ಬಿಯರ್‌ ಮೇಲೆ ಶೇ.20ರಷ್ಟು ಹೆಚ್ಚುವರಿ ಸುಂಕ ವಿಧಿಸಿತ್ತು. ಆ ನಂತರ ಉತ್ಪಾದನಾ ವೆಚ್ಚ ಸರಿದೂಗಿಸಿಕೊಳ್ಳಲು ಬಿಯರ್‌ ಕಂಪನಿಗಳು ಫೆಬ್ರವರಿ ತಿಂಗಳಲ್ಲಿ ಬಿಯರ್‌ ಬೆಲೆ 10 ರೂ.ವರೆಗೆ ಏರಿಕೆ ಮಾಡಿತ್ತು.ಈಗ ಕಂಪನಿಗಳು ಕಚ್ಚಾ ವಸ್ತುಗಳ ಬೆಲೆ ಏರಿಕೆ ಕಾರಣ ನೀಡಿ ಬಿಯರ್‌ ದರ ಏರಿಕೆ ಮಾಡಿವೆ. ಈ ಮೂಲಕ 15 ತಿಂಗಳ ಅಂತರದಲ್ಲಿ ಬಿಯರ್‌ ಬೆಲೆ ಸುಮಾರು 50 ರಿಂದ 60 ರೂ. ವರೆಗೆ ಹೆಚ್ಚಳವಾದಂತಾಗಿದೆ.
4
+ ಕೆಲವು ಕಂಪನಿಗಳ ಬಿಯರ್‌ ದರ ಕಳೆದ ಗುರುವಾರದಿಂದ ಏರಿಕೆಯಾಗಿದೆ. ಇನ್ನು ಕೆಲವು ಕಂಪನಿಗಳ ಪರಿಷ್ಕೃತ ದರ ಮಂಗಳವಾರ, ಬುಧವಾರದಿಂದ ಜಾರಿಯಾಗಲಿದೆ. ಎಲ್ಲ ಬ್ರ್ಯಾಂಡ್‌ಗಳ ಬಿಯರ್‌ ಬೆಲೆ ಪ್ರತಿ ಬಾಟಲಿಗೆ 10 ರಿಂದ 20 ರೂಪಾಯಿವರೆಗೆ ಹೆಚ್ಚಳವಾಗಿದೆ.
5
+ ರಾಜ್ಯ ಸರ್ಕಾರ ಮೊದಲಿಗೆ ಮದ್ಯದ ಮೇಲಿನ ಸುಂಕ ಏರಿಸಿತ್ತು. ನಂತರ ವಾಣಿಜ್ಯ ವಾಹನಗಳ ಮೇಲಿನ ಸಾರಿಗೆ ಸೆಸ್‌‍ ಅನ್ನು ಏರಿಕೆ ಮಾಡಿತ್ತು.ನಂತರ ಮುಂದ್ರಾಂಕ ಶುಲ್ಕವನ್ನು ಏರಿಕೆ ಮಾಡಿತ್ತು. ನಂತರ ಬಿತ್ತನೆ ಬೀಜದ ಬೆಲೆ ಶೇ50-60 ರಷ್ಟು ಹೆಚ್ಚಳ ಮಾಡಿತ್ತು. ಪೆಟ್ರೋಲ್‌ ಡೀಸೆಲ್‌ ಬೆಲೆ ಪ್ರತಿ ಲೀಟರ್‌ಗೆ 3 ರೂ. ಹೆಚ್ಚಳವಾಗಿತ್ತು. ತದನಂತರದಲ್ಲಿ ನಂದಿನಿ ಹಾಲಿನ ದರ 2 ರೂ. ಏರಿಕೆ ಮಾಡಿ ಈಗ ಮತ್ತೆ ಮದ್ಯದ ತೆರಿಗೆ ಮೇಲೆ ಕನ್ಣು ಹಾಕಿದೆ
eesanje/url_46_59_8.txt ADDED
@@ -0,0 +1,7 @@
 
 
 
 
 
 
 
 
1
+ ಮುಜರಾಯಿ ದೇವಾಲಯಗಳಲ್ಲಿ ಆನ್‌ಲೈನ್‌ ಸೇವೆಗೆ ಅರ್ಚಕರಿಂದ ವಿರೋಧ
2
+ ಬೆಂಗಳೂರು,ಜು.30-ಮುಜರಾಯಿ ದೇವಾಲಯಗಳಲ್ಲಿ ಆನ್‌ಲೈನ್‌ ಸೇವೆಗೆ ಅರ್ಚಕರಿಂದ ವಿರೋಧ ವ್ಯಕ್ತವಾಗಿದೆ. ಆನ್‌ಲೈನ್‌ನಲ್ಲಿ ಕೆಲ ಭಕ್ತರು ಸಂಜೆ ಹಾಗೂ ರಾತ್ರಿ ಸೇವೆಗೆ ಬುಕ್‌ ಮಾಡಿರುತ್ತಾರೆ. ಹೆಚ್ಚು ಜನ ಪ್ರಸಾದಕ್ಕಾಗಿ ಬುಕ್‌ ಮಾಡಿಕೊಂಡಿರುತ್ತಾರೆ. ಇದರಿಂದ ಮರುದಿನ ಬೆಳಗ್ಗೆಯೇ ಬುಕ್‌ ಮಾಡಿದ ಭಕ್ತಾಧಿಗಳ ಸೇವೆ ಮಾಡಲು ಕಷ್ಟವಾಗುತ್ತದೆ ಎಂದು ಅರ್ಚಕರು ದೂರಿದ್ದಾರೆ.
3
+ ಅಲ್ಲದೆ ಭಕ್ತಾಧಿಗಳು ತಕ್ಷಣ ಮಾಡಿದ ಬುಕ್ಕಿಂಗ್‌ ಮಾಹಿತಿ ಅರ್ಚಕರಿಗೆ ಇರುವುದಿಲ್ಲ. ಪ್ರಸಾದವನ್ನು ತಕ್ಷಣಕ್ಕೆ ತಯಾರಿಸಲು ಆಗುವುದಿಲ್ಲ. ಪೂಜೆಗೆ ರಾತ್ರಿ ಬುಕ್‌ ಮಾಡಿದರೆ ಬೆಳಿಗ್ಗೆನೇ ಮಾಡಿ ಬಿಡಲು ಆಗುವುದಿಲ್ಲ. ಅದಕ್ಕಾಗಿ ನಾವು ಕೂಡ ತಯಾರಿ ಮಾಡಿಕೊಳ್ಳಬೇಕು. ತಕ್ಷಣಕ್ಕೆ ಬುಕ್ಕಿಂಗ್‌ ಮಾಡುವುದರಿಂದ ಪೂಜೆ ಮಾಡಿ ಹಾಗೂ ಪ್ರಸಾದ ನೀಡಲು ಸಾಧ್ಯವಾಗುತ್ತಿಲ್ಲ. ಪ್ರಸಾದ ತಯಾರಿಸಲು ಸಮಯ ಬೇಕಾಗುತ್ತದೆ.
4
+ ರಾತ್ರಿ ಬುಕ್‌ ಮಾಡಿ ಬೆಳಿಗ್ಗೆ ಪ್ರಸಾದ ಬೇಕು ಹಾಗೂ ಪೂಜೆ ನಡೆಯಬೇಕು ಅಂದರೆ ಅದು ಕಷ್ಟವಾಗುತ್ತಿದೆ ಎಂದು ಅರ್ಚಕ ಒಕ್ಕೂಟ ತಮ ಸಮಸ್ಯೆ ಹೇಳಿಕೊಂಡಿದ್ದಾರೆ. ಈ ಬಗ್ಗೆ ಅರ್ಚಕರ ಒಕ್ಕೂಟ ಧಾರ್ಮಿಕ ದತ್ತಿ ಆಯುಕ್ತರಿಗೆ ಪತ್ರ ಬರೆದಿದೆ. ಮುಜರಾಯಿ ಇಲಾಖೆಗೆ ಒಳಪಡುವ ಬಹುತೇಕ ದೇವಸ್ಥಾನಗಳಲ್ಲಿ ಅಡುಗೆಯವರು ಹಾಗೂ ಅಗ್ರಾಣದ ವ್ಯವಸ್ಥೆ ಇಲ್ಲ. ಅಲ್ಲದೆ ಆನ್‌ಲೈನ್‌ನಲ್ಲಿ ಬುಕ್‌ ಮಾಡಿದ ಹಣ ಯಾವಾಗಲೋ ಅರ್ಚಕರ ಕೈ ಸೇರುತ್ತದೆ. ಇದರಿಂದ ಪೂಜಾ ಸಾಮಾಗ್ರಿ ಹಾಗೂ ಪ್ರಸಾದ ತಯಾರಿಸಲು ಬೇಕಾಗುವ ಪದಾರ್ಥಗಳನ್ನು ತರಲು ತೊಂದರೆಯಾಗುತ್ತಿದೆ. ಹೀಗಾಗಿ ಆನ್‌ಲೈನ್‌ ಸೇವೆಯನ್ನು ನಿಲ್ಲಿಸಬೇಕು ಎಂದು ಅರ್ಚಕರು ಒತ್ತಾಯಿಸಿದ್ದಾರೆ.
5
+ ಮುಜರಾಯಿ ಇಲಾಖೆಗೆ ಒಳಪಡುವ ರಾಜ್ಯದ ದೊಡ್ಡ ದೊಡ್ಡ ದೇವಸ್ಥಾನಗಳಲ್ಲಿ ಆನ್‌ಲೈನ್‌ ಸೇವೆ ಒದಗಿಸುವುದಕ್ಕೆ ತೊಂದರೆ ಇಲ್ಲ. ಯಾಕೆಂದರೆ ಕುಕ್ಕೆ ಸುಬ್ರಹಣ್ಯ, ಚಾಮುಂಡಿಬೆಟ್ಟ, ನಂಜನಗೂಡು, ಮೇಲುಕೋಟೆ ಇತರ ದೊಡ್ಡ ದೇವಸ್ಥಾನಗಳಲ್ಲಿ ಇದಕ್ಕೆಲ್ಲ ವ್ಯವಸ್ಥೆ ಇದೆ. ಅಲ್ಲಿ ಆನ್‌ಲೈನ್‌ ಸೇವೆ ಒದಗಿಸಬಹುದು. ಯಾಕೆಂದರೆ ಅಲ್ಲಿ ಕೆಲಸದವರು, ಸಿಬ್ಬಂದಿಗಳು ಹಾಗೂ ಉಗ್ರಾಣಗಳು ಹೆಚ್ಚುವರಿಯಾಗಿ ಇರುತ್ತವೆ. ಇದರಿಂದ ಅಲ್ಲಿ ತೊಂದರೆಯಾಗುವುದಿಲ್ಲ.
6
+ ಆದರೆ ಇಂತಹ ವ್ಯವಸ್ಥೆ ಇಲ್ಲದ ದೇವಸ್ಥಾನಗಳಲ್ಲಿ ಇದು ಕಷ್ವವಾಗುತ್ತಿದೆ. ಇದರಿಂದ ನಿತ್ಯ ಪೂಜೆ ಸಲ್ಲಿಸುವ ಭಕ್ತರಿಗೆ ಪೂಜೆ ಮಾಡಿಕೊಡುವುದು ಆನ್‌ಲೈನ್‌ ಮೂಲಕ ಬಂದ ಭಕ್ತರಿಗಾಗಿ ಪೂಜೆ ಸಲ್ಲಿಸುವುದು ಕಷ್ಟವಾಗುತ್ತಿದೆ. ರಾತ್ರಿ ಬುಕ್‌ ಆದ ಸೇವೆಗೆ ಬೆಳಿಗ್ಗೆ ವ್ಯವಸ್ಥೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಅರ್ಚಕರು ಬೇಸರ ವ್ಯಕ್ತಪಡಿಸಿದ್ದಾರೆ.
7
+ ಆದರೆ ಪೂಜಾ ಸೇವೆಗಳನ್ನು ಆನ್‌ಲೈನ್‌ ಮೂಲಕ ಬುಕ್‌ ಮಾಡಲು ಮೊದಲ ಹಂತವಾಗಿ ಬೆ���ಗಳೂರಿನ ಬನಶಂಕರಿ ಅಮನವರ ದೇವಾಲಯದಲ್ಲಿ ಪೋರ್ಟಲ್‌ ಹಾಗೂ ಮೊಬೈಲ್‌ ಆಪ್‌ನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆನ್‌ಲೈನ್‌ ಮೂಲಕ ಕಾಯ್ದಿರಿಸುವುದಕ್ಕೆ ಅವಕಾಶ ನೀಡಲಾಗುತ್ತಿದೆ. ಈ ಎಲ್ಲಾ ಸಮಸ್ಯೆಗಳಿಂದಾಗಿ ಈ ಆನ್‌ಲೈನ್‌ ಸೇವೆಯನ್ನು ಹಾಗೂ ಈ ಮೊಬೈಲ್‌ ಆಪ್‌ನ್ನು ರದ್ದು ಮಾಡಬೇಕೆಂದು ಅರ್ಚಕರ ಒಕ್ಕೂಟ ಒತ್ತಾಯಿಸಿದೆ.
eesanje/url_46_59_9.txt ADDED
@@ -0,0 +1,6 @@
 
 
 
 
 
 
 
1
+ ಮೇಕೆದಾಟು ಯೋಜನೆ ಗೆ ತ.ನಾಡು ಅನಗತ್ಯ ವಿರೋಧ : ಸಿಎಂ ಸಿದ್ದರಾಮಯ್ಯ
2
+ ಮೈಸೂರು,ಜು.29-ಮೇಕೆದಾಟು ಅಣೆಕಟ್ಟೆ ನಿರ್ಮಿಸು ವುದರಿಂದ ತಮಿಳುನಾಡಿಗೆ ಹೆಚ್ಚಿನ ಲಾಭವಾಗುತ್ತದೆ. ಆದರೂ ರಾಜಕೀಯ ಕಾರಣಕ್ಕಾಗಿ ಅನಗತ್ಯವಾಗಿ ವಿರೋಧ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.
3
+ ಕೆಆರ್‌ಎಸ್‌‍ಗೆ ಬಾಗಿನ ಅರ್ಪಿಸಿದ ಬಳಿಕ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೇಕೆದಾಟು ಅಣೆಕಟ್ಟು ನಿರ್ಮಾಣದಿಂದ 65 ಟಿಎಂಸಿ ನೀರು ಸಂಗ್ರಹಿಸಲು ಸಾಧ್ಯವಾಗುತ್ತದೆ. ಅಣೆಕಟ್ಟು ಕಟ್ಟುವುದು ತಮಿಳುನಾಡು ಜಾಗದಲ್ಲಲ್ಲ. ಕೇರಳದ ಜಾಗದಲ್ಲಿ. ಕಾವೇರಿ ನದಿಯ ನೀರಿನ ಹಂಚಿಕೆ ಕೇವಲ ತಮಿಳುನಾಡು-ಕರ್ನಾಟಕಕ್ಕೆ ಸೀಮಿತವಲ್ಲ. ಪಾಂಡಿಚೇರಿ ಹಾಗೂ ಕೇರಳ ರಾಜ್ಯಗಳೂ ಇದರ ಪಾಲುದಾರಿಕೆ ಹೊಂದಿವೆ ಎಂದರು.
4
+ ಮೇಕೆದಾಟು ನಿರ್ಮಾಣ ನಮ ಹಕ್ಕು. ಇದಕ್ಕಾಗಿ ಸಾಕಷ್ಟು ಪ್ರತಿಭಟನೆಯನ್ನು ನಡೆಸಿದ್ದೇವೆ. ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ತಕ್ಷಣ ಅಣೆಕಟ್ಟು ನಿರ್ಮಾಣ ಮಾಡುತ್ತೇವೆ. ಕೇಂದ್ರ ಸರ್ಕಾರ ಈವರೆಗೂ ಅನುಮತಿ ನೀಡಿಲ್ಲ. ತಮಿಳುನಾಡಿನ ವಿರೋಧ ಅನಗತ್ಯ ಎಂದು ಹೇಳಿದರು.
5
+ ಕೇಂದ್ರ ಸರ್ಕಾರ ರಾಜಕೀಯ ಕಾರಣಕ್ಕಾಗಿ ಇ.ಡಿ, ಸಿಬಿಐ ಅನ್ನು ಬಳಸಿಕೊಂಡು ನಿರಪರಾಧಿಗಳನ್ನು ಜೈಲಿಗೆ ಕಳುಹಿಸುವ ಪ್ರಯತ್ನ ಮಾಡುತ್ತಿದೆ. ಜನ ಇದನ್ನು ಖಂಡಿಸಬೇಕು ಎಂದ ಸಿದ್ದರಾಮಯ್ಯ, ಬಿಜೆಪಿಯವರು ಮನೆಮುರುಕರು. ಯಾವುದೇ ಪ್ರಕರಣವಾದರೂ ಜೆಡಿಎಸ್‌‍-ಬಿಜೆಪಿ ಒಂದಾಗಿ ಸಿಬಿಐ ತನಿಖೆಗೆ ಕೊಡಿ ಎಂದು ಒತ್ತಾಯ ಮಾಡುತ್ತಾರೆ ಎಂದು ಆಕ್ಷೇಪಿಸಿದರು.
6
+ ರಾಜ್ಯದ ಸಂಸದರು ಕೇಂದ್ರ ಸರ್ಕಾರದಿಂದಾಗಿರುವ ಅನ್ಯಾಯಗಳ ವಿರುದ್ಧ ಒಂದು ದಿನವೂ ಪ್ರತಿಭಟನೆ ಮಾಡಿಲ್ಲ. ಅನಗತ್ಯ ವಿಚಾರಗಳನ್ನು ಪ್ರಸ್ತಾಪಿಸುತ್ತಿದೆ. ಬಜೆಟ್‌ನ ಅನ್ಯಾಯವೂ ಸೇರಿದಂತೆ ಕೇಂದ್ರ ಸರ್ಕಾರಕ್ಕೆ ಸಾಕಷ್ಟು ಅನ್ಯಾಯವಾಗಿದೆ. ಆದರೆ ರಾಜ್ಯದ ಜೆಡಿಎಸ್‌‍-ಬಿಜೆಪಿ ಸಂಸದರು ಯಾವುದರ ಬಗ್ಗೆಯೂ ಪ್ರಸ್ತಾಪ ಮಾಡಿಲ್ಲ ಎಂದರು.ಪ್ರತಿ ವರ್ಷ ಇದೇ ರೀತಿ ರಾಜ್ಯದ ನದಿಗಳು ತುಂಬಿಹರಿಯಲಿ, ಸಮೃದ್ಧಿ ನೆಲೆಸಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದ ಸಿದ್ದರಾಮಯ್ಯ, ಕೆಆರ್‌ಎಸ್‌‍ನ ಎಡದಂಡೆ ಕಾಲುವೆಯನ್ನು ಅಭಿವೃದ್ಧಿಪಡಿಸುವುದಾಗಿ ಭರವಸೆ ನೀಡಿದರು.
eesanje/url_46_5_1.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಎಚ್‌ಡಿಕೆ ಜಾಮೀನು ರದ್ದು ಕೋರಿ ಕೋರ್ಟ್‌ಗೆ ಎಸ್‌‍ಐಟಿ ಅರ್ಜಿ ಸಾಧ್ಯತೆ
2
+ '
3
+ ಬೆಂಗಳೂರು,ಸೆ.30-ಸಾಯಿ ಮಿನರಲ್ಸ್ ಪ್ರಕರಣದಲ್ಲಿ ಲೋಕಾಯುಕ್ತ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದಿದ್ದ ಕೇಂದ್ರ ಸಚಿವ ಎಚ್‌.ಡಿ.ಕುಮಾರ ಸ್ವಾಮಿಯವರ ಜಾಮೀನು ರದ್ದು ಕೋರಿ ಎಸ್‌‍ಐಟಿ ಹೈಕೋರ್ಟ್‌ ಮೆಟ್ಟಿಲೇರಲು ಮುಂದಾಗಿದೆ.ಗಮನಿಸಬೇಕಾದ ಅಂಶವೆಂದರೆ ಮೂರು ದಿನಗಳ ಹಿಂದಷ್ಟೇ ಕುಮಾರಸ್ವಾಮಿಯವರು ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್‌ ವಿರುದ್ಧ ಕೆಲವು ಗಂಭೀರ ಆರೋಪಗಳನ್ನು ಮಾಡಿದ್ದರು.
4
+ ಇದರ ಬೆನ್ನಲೇ ಎಸ್‌‍ಐಟಿ ಲೋಕಾಯುಕ್ತ ನ್ಯಾಯಾಲಯ ನೀಡಿರುವ ನಿರೀಕ್ಷಣಾ ಜಾಮೀನು ರದ್ದುಪಡಿಸಲು ಮೇಲನವಿ ಅರ್ಜಿ ಸಲ್ಲಿಕೆಗೆ ತಯಾರಿ ನಡೆಸಿದೆ.ಶನಿವಾರ ಲೋಕಾಯುಕ್ತ ನ್ಯಾಯಾಲಯದಲ್ಲಿ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗಿದ್ದ ಕುಮಾರಸ್ವಾಮಿ, ಲೋಕಾಯುಕ್ತ ಡಿವೈಎಸ್ಪಿ ಕವಿತಾ ಮತ್ತು ತನಿಖಾಧಿಕಾರಿಗಳು ಮುಂದಿಟ್ಟ ಕೆಲವು ಪ್ರಶ್ನೆಗಳಿಗೆ ಅಸಮರ್ಪಕ ಉತ್ತರ ನೀಡಿದ್ದಾರೆ ಎನ್ನಲಾಗಿದೆ.
5
+ ವಿಚಾರಣೆಗೆ ಅಸಹಕಾರ ತೋರಿದ ಹಿನ್ನಲೆಯಲ್ಲಿ ನಿರೀಕ್ಷಣಾ ಜಾಮೀನು ರದ್ದು ಕೋರಿ ಮೇಲನವಿ ಸಲ್ಲಿಸಲು ಎಸ್‌‍ಐಟಿ ತೀರ್ಮಾನಿಸಿದೆ. ಈ ಸಂಬಂಧ ಸೋಮವಾರ ಕಾನೂನು ತಜ್ಞರ ಜೊತೆ ಸಾಧಕಬಾಧಕಗಳ ಬಗ್ಗೆ ಚರ್ಚೆ ನಡೆಸಲಾಗಿದೆ.
6
+ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್‌ ವಿರುದ್ದ ಕುಮಾರಸ್ವಾಮಿ ಮಾಡಿದ ಆರೋಪಕ್ಕೆ ಇದು ಕರ್ತವ್ಯಕ್ಕೆ ಅಡ್ಡಿಪಡಿಸುವ ತಂತ್ರವಾಗಿದೆ. ಅವರು ಎಷ್ಟೇ ಆರೋಪ ಮಾಡಿದರೂ ಆರೋಪಿ ಆರೋಪಿಯೇ ಎಂದು ತಿರುಗೇಟು ನೀಡಿದ್ದರು. ಲೋಕಾಯುಕ್ತ ಪೊಲೀಸ್‌‍ ವರಿಷ್ಠಾಧಿಕಾರಿ 2023ರ ಸೆಪ್ಟೆಂಬರ್‌ನಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಪತ್ರ ಬರೆದಿದ್ದರು.
7
+ 2006ರಲ್ಲಿ ಬಿಜೆಪಿ-ಜೆಡಿಎಸ್‌‍ ಸಮಿಶ್ರ ಸರ್ಕಾರವಿದ್ದಾಗ ಮುಖ್ಯಮಂತ್ರಿಯಾಗಿದ್ದ ಎಚ್‌ ಕುಮಾರಸ್ವಾಮಿ ಅವರು ಎಂಸಿಆರ್‌ ನಿಯಮಾವಳಿಗಳನ್ನು ಉಲ್ಲಂಘಿಸಿ ವಾಣಿಜ್ಯ ಮತ್ತು ಕೈಗಾರಿಕೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳ ಜೊತೆಗೂಡಿ ವಿನೋದ್‌ ಗೋಯಲ್‌ ಎಂಬ ವ್ಯಕ್ತಿಗೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ಎನ್‌ಇಬಿ ರೇಂಜ್‌ನಲ್ಲಿನ 550 ಎಕರೆ ಭೂಮಿ ಮಂಜೂರು ಮಾಡಲು ಒಳಸಂಚು ರೂಪಿಸಿದ್ದಾರೆ ಎಂಬುದು ಆರೋಪವಾಗಿದೆ.
8
+ ಸಾಯಿ ವೆಂಕಟೇಶ್ವರ ಮಿನರಲ್‌್ಸ ಮಾಲೀಕ ವಿನೋದ್‌ ಗೋಯಲ್‌ ಎಂದು ಸುಳ್ಳು ದಾಖಲೆಗಳನ್ನು ಸೃಷ್ಟಿಸಲು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಕಾರ್ಯದರ್ಶಿ ಕೆ.ಜಯಚಂದ್ರ ಮತ್ತು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರಥಮ ದರ್ಜೆ ಸಹಾಯಕ ಬಿ ಟಿ ಜವರೇಗೌಡ ಸಹಕರಿಸಿದ ಆರೋಪಕ್ಕೆ ಗುರಿಯಾಗಿದ್ದಾರೆ.
9
+ ಈ ಪ್ರಕರಣದಲ್ಲಿ ಎಸ್‌‍ಐಟಿ ಅಧಿಕಾರಿಗಳು ವಿನೋದ್‌ ಗೋಯಲ್‌ ಅವರನ್ನು ಪ್ರಥಮ ಆರೋಪಿಯೆಂದೂ, ಎಚ್‌.ಡಿ. ಕುಮಾರಸ್ವಾಮಿ ಅವರನ್ನು 2ನೇ ಆರೋಪಿಯೆಂದೂ, ಕೆ.ಜಯಚಂದ್ರ ಹಾಗೂ ಜವರೇಗೌಡ ಅವ���ನ್ನು ಕ್ರಮವಾಗಿ ಮೂರು ಮತ್ತು ನಾಲ್ಕನೇ ಆರೋಪಿಗಳನ್ನಾಗಿ ದಾಖಲಿಸಿದ್ದಾರೆ.
10
+ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್‌ಗಳಾದ 420, 465, 468, 409 ಜೊತೆಗೆ 120ಬಿ ಮತ್ತು ಐಪಿಸಿ ಸೆಕ್ಷನ್‌ 511, ಭ್ರಷ್ಟಾಚಾರ ನಿರೋಧಕ ಕಾಯಿದೆ ಸೆಕ್ಷನ್‌ 13(2) ಜೊತೆಗೆ 13(1)(ಡಿ) ಮತ್ತು ಎಂಎಂಆರ್‌ಡಿ ಕಾಯಿದೆಯ ಸೆಕ್ಷನ್‌ಗಳಾದ 21(2) ಮತ್ತು 23 ಅಡಿ ದಾಖಲಾಗಿರುವ ಪ್ರಕರಣದಲ್ಲಿ ಸಂಬಂಧಿತ ನ್ಯಾಯಾಲಯಕ್ಕೆ ಆರೋಪ ಪಟ್ಟಿಸಲು ಅಭಿಯೋಜನಾ ಮಂಜೂರಾತಿ ನೀಡುವಂತೆ ರಾಜ್ಯಪಾಲರಿಗೆ ಲೋಕಾಯುಕ್ತ ಪೊಲೀಸರು 2023ರ ಸೆಪ್ಟೆಂಬರ್‌ನಲ್ಲಿ ಮನವಿ ಮಾಡಿದ್ದಾರೆ.
11
+ ಪ್ರಕರಣದ ಹಿನ್ನೆಲೆ:ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ಎನ್‌ಇಬಿ ರೇಂಜ್‌ ಪ್ರದೇಶದಲ್ಲಿ ಮೆಸರ್ಸ್‌ ಚೌಗಲೆ ಮತ್ತು ಕಂಪನಿಯು ಗಣಿಗಾರಿಕೆಗೆ ಮಂಜೂರಾತಿ ಪಡೆದು ಆನಂತರ ಸರ್ಕಾರಕ್ಕೆ 550 ಎಕರೆ ಅಧ್ಯರ್ಪಣೆ ಮಾಡಿದ ಪ್ರದೇಶಕ್ಕೆ ಗಣಿ ಗುತ್ತಿಗೆ ಮಂಜೂರಾತಿಗಾಗಿ 2006ರ ಏಪ್ರಿಲ್‌ ತಿಂಗಳಲ್ಲಿ ಒಟ್ಟು 29 ಅರ್ಜಿದಾರರು ತಮ ಸಂಸ್ಥೆ, ಕಂಪನಿ ಹೆಸರಿನಲ್ಲಿ ಬೇರೆ ಬೇರೆ ವಿಸ್ತೀರ್ಣಗಳಿಗೆ ಅರ್ಜಿ ಸಲ್ಲಿಸಿದ್ದವು.
12
+ ಶ್ರೀ ಸಾಯಿ ವೆಂಕಟೇಶ್ವರ ಮಿನರಲ್‌್ಸ ಹೆಸರಿನಡಿ ಎಸ್‌‍ ವಿ ಸಾಕ್ರೆ ಸಲ್ಲಿಸಿದ್ದ ಅರ್ಜಿಯಲ್ಲಿ ಶ್ರೀ ಸಾಯಿ ವೆಂಕಟೇಶ್ವರ ಮಿನರಲ್‌್ಸ ಸಂಸ್ಥೆಯ ರೂಪುರೇಷೆಗಳು ಹಾಗೂ ಪಾಲುದಾರರ ಬಗ್ಗೆ ಇರುವ ಅಸ್ಪಷ್ಪತೆಯ ಲಾಭ ಪಡೆಯುವ ಉದ್ದೇಶದಿಂದ ವಿನೋದ್‌ ಗೋಯಲ್‌ ಎಂಬ ವ್ಯಕ್ತಿಯು ಸರ್ಕಾರಿ ಅಧಿಕಾರಿಗಳಾದ ಜಯಚಂದ್ರ ಮತ್ತು ಜವರೇಗೌಡ ಜೊತೆ ಶಾಮೀಲಾಗಿ, ಸುಳ್ಳು ದಾಖಲೆಗಳನ್ನು ಸೃಷ್ಟಿಸಿ, ಆ ದಾಖಲೆಗಳನ್ನು ಆಧರಿಸಿ, ಹೈಕೋರ್ಟ್‌ನಲ್ಲಿ ದಾವೆ ಹೂಡಿ, ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಹೆಸರಿಗೆ ಗಣಿ ಗುತ್ತಿಗೆ ನೀಡುವಂತೆ ಮತ್ತು ಎಸ್‌‍.ವಿ.ಸಾಕ್ರೆ ಹೆಸರಿನ ಬದಲು ವಿನೋದ್‌ ಗೋಯೆಲ್‌ ಶ್ರೀ ಸಾಯಿ ವೆಂಕಟೇಶ್ವರ ಮಿನರಲ್‌್ಸ ಮಾಲೀಕರು ಎಂದು ಮಾಡಿ, ಆ ಮೂಲಕ ಗಣಿ ಗುತ್ತಿಗೆ ಪಡೆಯಲು ಯತ್ನಿಸಿದ್ದಾರೆ ಎಂಬುದು ಆರೋಪವಾಗಿದೆ.
eesanje/url_46_5_10.txt ADDED
@@ -0,0 +1,7 @@
 
 
 
 
 
 
 
 
1
+ ಕೇಡರ್ ಕಂಟ್ರೋಲ್ ಮೂಲಕ ಚಂದ್ರಶೇಖರ್ ಮೇಲೆ ಕ್ರಮ ಕೈಗೊಳ್ಳುತ್ತೇವೆ : ಜೋಶಿ ಎಚ್ಚರಿಕೆ
2
+
3
+ ಹುಬ್ಬಳ್ಳಿ, ಸೆ.29-ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿದ ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್ ವಿರುದ್ಧ ಕೇಡರ್ ಕಂಟ್ರೋಲ್ ಮೂಲಕ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ ಎಚ್ಚರಿಸಿದ್ದಾರೆ.
4
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಲೋಕಾಯುಕ್ತ ಎಡಿಜಿಪಿಗೆ ಏನಾದರೂ ಸೇವಾ ನಿಯಮಗಳ ಬಗ್ಗೆ ಜ್ಞಾನವಿದ್ದರೆ ತಕ್ಷಣ ಕ್ಷಮಾಪಣೆ ಕೇಳಲಿ ಎಂದು ಸೂಚಿಸಿದರು.ಒಬ್ಬ ಜನಪ್ರತಿನಿಧಿ, ಅದರಲ್ಲೂ ಕೇಂದ್ರ ಸಚಿವರ ಬಗ್ಗೆ ಅಸಭ್ಯ ಭಾಷೆಯಲ್ಲಿ, ಕೆಟ್ಟ ಪದ ಬಳಸುವುದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಕೇಡರ್ ಕಂಟ್ರೋಲ್ ಇದನ್ನು ಗಂಭೀರವಾಗಿ ಪರಿಗಣಿಸಲಿದೆ ಎಂದು ತಿಳಿಸಿದರು.
5
+ ಕುಮಾರಸ್ವಾಮಿ ಅವರು ಯಾವತ್ತೂ ಯಾರ ಬಗ್ಗೆಯೂ ಅಸಭ್ಯ ಭಾಷೆ ಬಳಸಿದವರಲ್ಲ. ಈ ಅಧಿಕಾರಿ ಬಗ್ಗೆಯೂ ಹಾಗೆಲ್ಲ ಏಕವಚನದಲ್ಲಿ ಮಾತನಾಡಿಲ್ಲ ಎಂದು ಜೋಶಿ ಸ್ಪಷ್ಟಪಡಿಸಿದರು.ಕುಮಾರಸ್ವಾಮಿ ಅವರ ಬಗ್ಗೆ ಕೆಟ್ಟ ಪದದಲ್ಲಿ ಸಂಬೋಧನೆ ಮಾಡಿರುವುದು ಅಧಿಕಾರಿಯ ಅಹಂಕಾರದ ಪರಮಾವಧಿಯಾಗಿದ್ದು, ಮುಂದಿನ ದಿನಗಳಲ್ಲಿ ಇದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.
6
+ ಸರ್ಕಾರದ ಆದೇಶವಿದ್ದರೆ ತನಿಖೆ ನಡೆಸಲಿ. ಕುಮಾರಸ್ವಾಮಿ ಆರೋಪ ಮಾಡಿದ್ದರೆ, ಗೌರವಯುತ ಭಾಷೆಯಲ್ಲಿ, ಸಭ್ಯ ಪದಗಳಲ್ಲಿ ಸ್ಪಷ್ಟನೆ ಕೊಡಲಿ. ಅದು ಬಿಟ್ಟು ಈ ರೀತಿ ಕೆಟ್ಟದಾಗಿ ಸಂಬೋಧಿಸುವುದು ಯಾವುದೇ ಅಧಿಕಾರಿಗಳಿಗೂ ಶೋಭೆ ತರುವುದಿಲ್ಲ ಎಂದು ಅವರು ಹೇಳಿದರು.
7
+ ಒಬ್ಬ ಜನಪ್ರತಿನಿಧಿ ಬಗ್ಗೆ ಲೋಕಾಯುಕ್ತ ಎಡಿಜಿಪಿ ಕೆಟ್ಟ ಪದ ಬಳಸಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತಕ್ಕೆ ಹಿಡಿದ ಕೈಗನ್ನಡಿ. ಇದು ಮುಂದೆ ಕಾಂಗ್ರೆಸ್ಗೆ ಮುಳುವಾಗಲಿದೆ. ಕಾಂಗ್ರೆಸ್ ಎಂಥೆಂಥ ಅಧಿಕಾರಿಗಳನ್ನು ಬೆಳೆಸುತ್ತಿದೆಯಲ್ಲವೇ ಎಂದು ಅವರು ಕಿಡಿ ಕಾರಿದರು.ರಾಜ್ಯದಲ್ಲಿ ಈ ಸರ್ಕಾರವೇ ಶಾಶ್ವತವಾಗಿ ಇರೋದಿಲ್ಲ. ಸ್ವಲ್ಪ ಎಚ್ಚರ ವಹಿಸಿ ಮಾತನಾಡಿ, ಕೆಲಸ ಮಾಡಿ ಎಂದು ಚಂದ್ರಶೇಖರ್ಗೆ ಜೋಶಿ ಚಾಟಿ ಬೀಸಿದರು.
eesanje/url_46_5_11.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ನೈತಿಕತೆ ಇದ್ದರೆ ಯಡಿಯೂರಪ್ಪ ಮತ್ತು ವಿಜಯೇಂದ್ರರನ್ನು ಮೊದಲು ಪಕ್ಷದಿಂದ ಹೊರಹಾಕಿ : ಪ್ರಿಯಾಂಕ್ ಖರ್ಗೆ
2
+
3
+ ಬೆಂಗಳೂರು,ಸೆ.29-ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಬಿಜೆಪಿಯವರಿಗೆ ನೈತಿಕತೆ ಇದ್ದರೆ ಮೊದಲು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ತಮ್ಮ ಪಕ್ಷದಿಂದ ಮೊದಲು ಹೊರಹಾಕಲಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ.
4
+ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ರಾಜ್ಯಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿಯವರು ಆದಾಯ ತೆರಿಗೆ, ಜಾರಿ ನಿರ್ದೇಶನಾಲಯ ಹಾಗೂ ರಾಜ್ಯಪಾಲರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ನಾವು ಇದಕ್ಕೆ ಹೆದರುವುದಿಲ್ಲ ಎಂದರು.
5
+ ಕರಡಿಗೆ ಎಷ್ಟು ಕೂದಲುಗಳಿವೆಯೋ ಅಷ್ಟು ಆರೋಪಗಳು ಬಿಜೆಪಿಯವರ ಮೇಲಿದೆ. ಬಿ.ವೈ.ವಿಜಯೇಂದ್ರ ಸೆಲ್ ಕಂಪನಿಗಳ ಮೂಲಕ ಮನಿಲ್ಯಾಂಡ್ರಿಂಗ್ ಮಾಡುತ್ತಿದ್ದಾರೆ. ಹಲವು ಬಾರಿ ಮಲೇಷಿಯಾ ಸೇರಿದಂತೆ ವಿದೇಶಗಳಿಗೆ ಭೇಟಿ ನೀಡಿದ್ದಾರೆ. ಅವರು ಎಷ್ಟು ಬಾರಿ ವಿದೇಶಕ್ಕೆ ಭೇಟಿ ನೀಡಿದ್ದಾರೆ ಎಂಬ ಬಗ್ಗೆ ಪಾಸ್ಪೋರ್ಟ್ ತೋರಿಸಲಿ. ನಾವು ನಮ ಪಾಸ್ಪೋರ್ಟ್ ತೋರಿಸುತ್ತೇವೆ ಎಂದು ಸೆಡ್ಡು ಹೊಡೆದರು.
6
+ ಪ್ರಹ್ಲಾದ್ ಜೋಷಿ ಕೇಂದ್ರ ಸಚಿವರಾಗಿ ರಾಜ್ಯಕ್ಕೆ ಯಾವುದೇ ಯೋಜನೆಯನ್ನು ತಂದಿಲ್ಲ. ಆದರೆ ರಾಜಕೀಯವಾಗಿ ಕ್ಷುಲ್ಲಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸೋನಿಯಾಗಾಂಧಿ, ರಾಹುಲ್ಗಾಂಧಿ ಮನಿಲ್ಯಾಂಡ್ರಿಂಗ್ ಮಾಡಿದ್ದಾರೆ ಎಂದು ಜೋಷಿ ಹೇಳಿರುವುದು ಹಾಸ್ಯಾಸ್ಪದ. 10 ವರ್ಷ ಕೇಂದ್ರದಲ್ಲಿ ಆಡಳಿತ ಮಾಡಿರುವ ಜೋಷಿಯವರು ಚಾಂದಿನಿ ಚೌಕ್ನಲ್ಲಿ ಪಾನಿಪುರಿ ತಿನ್ನುತ್ತಿದ್ದಾರೆಯೇ?, ಒಂದು ವೇಳೆ ಸೋನಿಯಾಗಾಂಧಿ, ರಾಹುಲ್ಗಾಂಧಿ ತಪ್ಪು ಮಾಡಿದ್ದರೆ ಏಕೆ ಜೈಲಿಗೆ ಹಾಕಿಲ್ಲ ಎಂದು ಪ್ರಶ್ನಿಸಿದರು.
7
+ ಜೋಷಿಯವರ ಹೇಳಿಕೆಯನ್ನು ಗಮನಿಸಿದರೆ ಕೇಂದ್ರ ಗೃಹಸಚಿವ ಅಮಿತ್ ಷಾ ಅಸಮರ್ಥರು. ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲು ಅವರಿಂದಾಗುತ್ತಿಲ್ಲ ಎಂಬ ಅರ್ಥ ಬರುವಂತಿದೆ ಎಂದು ಹೇಳಿದರು.
8
+ ಮುನಿರತ್ನ ಅತ್ಯಾಚಾರ, ಹನಿಟ್ರ್ಯಾಪ್, ಜಾತಿನಿಂದನೆ ಸೇರಿದಂತೆ ಹಲವು ಆರೋಪಗಳಿಗೆ ಗುರಿಯಾಗಿದ್ದಾರೆ. ಬಿಜೆಪಿಯ ನಾಯಕರು ಅವರ ಬಗ್ಗೆ ಬಾಯಿ ಬಿಟ್ಟಿಲ್ಲ. ಛಲವಾದಿ ನಾರಾಯಣ ಸ್ವಾಮಿ, ನಿವೇಶನ ಹಗರಣದಲ್ಲಿದ್ದಾರೆ. ಯಡಿಯೂರಪ್ಪ ವಿರುದ್ಧ ಫೋಕ್ಸೊ ಪ್ರಕರಣದ ದಾಖಲಾಗಿದೆ. ಹಿಂದೂ ಧರ್ಮದ ರಕ್ಷಕರೆಂದು ಹೇಳಿಕೊಳ್ಳುವವರ ವಿರುದ್ಧ ಇರುವ ಪ್ರಕರಣಗಳನ್ನು ನೋಡಿದರೆ ನಾಚಿಕೆಯಾಗುತ್ತಿದೆ. ಮುನಿರತ್ನ ವಿರುದ್ಧ ಮಾತನಾಡಲು ಹೆದರುತ್ತಿರುವುದನ್ನು ನೋಡಿದರೆ ಬಿಜೆಪಿ ನಾಯಕರ ಸಿಡಿಗಳಿವೆಯೇ ಎಂಬ ಅನುಮಾನ ಕಾಡುತ್ತಿದೆ ಎಂದರು.
9
+ ಎಡಿಜಿಪಿ ಚಂದ್ರಶೇಖರ್ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ನಡುವಿನ ಟೀಕೆಗಳ ಕುರಿತು ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಈ ಹಿಂದೆ ಮುಖ್ಯಮಂತ್ರಿಯಾಗಿದ್ದರು. ಆಗ ಅವರ ಕೈಕೆಳಗೆ ಇದೇ ಚಂದ್ರಶೇಖರ್ ಕೆಲಸ ಮಾಡಿದ್ದಾರೆ. ಈಗ ಕೆಟ್ಟವರಾಗಿರುವ ಅಧಿಕಾರಿ ಆಗ ಒಳ್ಳೆಯವರಾಗಿದ್ದರೇ?, ಕಾನೂನು ಪಾಲನೆ ಮಾಡಿದವರು ಇವರ ಕಣ್ಣಿಗೆ ಕೆಟ್ಟವರಾಗಿ ಕಾಣುತ್ತಾರೆಯೇ?, ಚಂದ್ರಶೇಖರ್ ಅವರು ಬರ್ನಾಡ್ ಷಾ ಅವರ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆ. ಈ ಪ್ರಕರಣದಲ್ಲಿ ಪತ್ರ ಬರೆದವನೂ ನಾನಲ್ಲ, ಸ್ವೀಕಾರ ಮಾಡಿದವನೂ ನಾನಲ್ಲ. ಚಂದ್ರಶೇಖರ್ ಅವರು ತಮ ಅಧಿಕಾರಿಗಳಿಗೆ ನೈತಿಕ ಧೈರ್ಯ ತುಂಬುವ ಸಲುವಾಗಿ ಈ ರೀತಿ ಪತ್ರ ಬರೆದಿರಬಹುದು ಎಂದು ಹೇಳಿದರು.
10
+ ಗಣಿಗಾರಿಕೆಗೆ ಅರಣ್ಯ ಭೂಮಿ ಹಂಚಿಕೆಗೆ ತಾವು ಸಹಿ ಹಾಕಿಲ್ಲ ಎಂದು ಮೊದಲು ಹೇಳಿದ್ದರು. ಅನಂತರ ಸಹಿ ಹಾಕಿದ್ದೇನೆ, ಡಿ ನೋಟಿಫಿಕೇಷನ್ ಮಾಡಿಲ್ಲ ಎಂದರು. ಕೊಲೆ ಮಾಡಿಲ್ಲ, ಕೊಲೆ ಯತ್ನ ಮಾಡಿದ್ದೇನೆ ಎಂದು ಹೇಳಿದಂತಿದೆ ಅವರ ಹೇಳಿಕೆ ಎಂದು ಲೇವಡಿ ಮಾಡಿದರು.
11
+ ರಾಜ್ಯ ಬಿಜೆಪಿಯವರು ಸಂಕಷ್ಟದಲ್ಲಿದ್ದಾರೆ. ನಾಯಕತ್ವದ ಪರ ಹಲವು ಹಗರಣಗಳು ಅವರನ್ನು ಕಾಡುತ್ತಿವೆ. ಎಲೆಕ್ಟ್ರೋಲ್ ಬಾಂಡ್ ಹಗರಣದಲ್ಲಿ ಬಿಜೆಪಿಯವರು ಇಕ್ಕಟ್ಟಿಗೆ ಸಿಲುಕಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
eesanje/url_46_5_12.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ನನ್ನ ಪ್ರಶ್ನೆಗಳಿಗೆ ಚಂದ್ರಶೇಖರ್ ಉತ್ತರಿಸಲಿ : ಎಚ್ಡಿಕೆ ಗರಂ
2
+ --
3
+ ಬೆಂಗಳೂರು,ಸೆ.29-ಐಪಿಎಸ್ ಅಧಿಕಾರಿ ಚಂದ್ರ ಶೇಖರ್ ಒಬ್ಬ ಬ್ಲ್ಯಾಕ್ ಮೇಲರ್, ಕ್ರಿಮಿನಲ್ ಎಂದು ಮತ್ತೆ ಆರೋಪಿಸಿದ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು, ನಾನು ಕೇಳಿರುವ ಪ್ರಶ್ನೆಗಳಿಗೆ ಈ ಅಧಿಕಾರಿ ಉತ್ತರ ನೀಡಲಿ ಎಂದು ಒತ್ತಾಯಿಸಿದ್ದಾರೆ.
4
+ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಈ ಅಧಿಕಾರಿ ತನ್ನ ಸಹೋದ್ಯೊ ೕಗಿಗಳಿಗೆ ಬರೆದಿರುವ ಪತ್ರವನ್ನು ಚೆನ್ನಾಗಿ ತಯಾರು ಮಾಡಿದ್ದಾರೆ. ಆ ಪತ್ರವನ್ನು ಯಾರು? ಎಲ್ಲಿ? ತಯಾರು ಮಾಡಿಕೊಟ್ಟರು ಎನ್ನುವುದು ನನಗೂ ಚೆನ್ನಾಗಿ ಗೊತ್ತಿದೆ. ಉತ್ತರ ಕೊಡುವ ಜಾಗದಲ್ಲಿ, ಯಾವ ಸಂದರ್ಭದಲ್ಲಿ ಇದಕ್ಕೆ ಸರಿಯಾದ ಉತ್ತರ ಕೋಡಬೇಕೋ, ಕೊಡುತ್ತೇನೆ ಎಂದು ಅವರು ಹೇಳಿದರು.
5
+ ಅಧಿಕಾರಿ ಹೇಳಿರುವಂತೆ ನಾನು ಪ್ರಕರಣದಲ್ಲಿ ಆರೋಪಿ ಇರಬಹುದು. ಆದರೆ, ಅವರು ಅಧಿಕಾರಿ ಸೋಗಿ ನಲ್ಲಿರುವ ಕ್ರಿಮಿನಲ್. ಅವರ ವಿರುದ್ಧ ಸರಣಿ ಅಪರಾಧ ಕೃತ್ಯಗಳನ್ನು ಎಸಗಿರುವ ಆರೋಪಗಳಿವೆ ಎಂದು ಸಚಿವರು ಕಿಡಿಕಾರಿದರು.ಲೋಕಾಯುಕ್ತರಿಗೆ ರಾಜ್ಯಪಾಲರು ಬರೆದ ಪತ್ರವು ಸರ್ಕಾರಿ ಪ್ರಾಯೋಜಿತ ಒಂದು ನಿರ್ದಿಷ್ಟ ಸುದ್ದಿ ವಾಹಿನಿಗೆ ಸೋರಿಕೆ ಆಗಿತ್ತು. ಅದನ್ನು ಸೋರಿಕೆ ಮಾಡಿದ್ದು ಯಾರು ಎನ್ನುವುದು ಎಲ್ಲರಿಗೂ ಗೊತ್ತಿದೆ.
6
+ ಆದರೆ, ಅದು ರಾಜಭವನದಿಂದಲೇ ಸೋರಿಕೆ ಆಗಿರಬೇಕೆಂದು ಕಥೆ ಕಟ್ಟಿ, ರಾಜಭವನ ಸಿಬ್ಬಂದಿಯನ್ನೇ ತನಿಖೆ ಮಾಡಬೇಕು, ಅನುಮತಿ ಕೊಡಿ ಎಂದು ಅಧಿಕಾರಿ ಚಂದ್ರಶೇಖರ್ ತನ್ನ ಉನ್ನತ ಅಧಿಕಾರಿಗೆ ಪತ್ರ ಬರೆದಿದ್ದರು. ಹೀಗಾಗಿ ಆ ಅಧಿಕಾರಿಯ ದರ್ಪ ಹಾಗೂ ಆತನ ಹಿನ್ನೆಲೆಯ ಬಗ್ಗೆ ನಾನು ದಾಖಲೆಗಳ ಸಮೇತ ಮಾತನಾಡಿದ್ದೇನೆ ಎಂದು ಕುಮಾರಸ್ವಾಮಿ ಹೇಳಿದರು.
7
+ ನನ್ನ ಪ್ರಶ್ನೆಗಳಿಗೆ ಉತ್ತರ ಕೊಡುವ ಬದಲಿಗೆ ಕ್ರಿಮಿನಲ್ ಮನಃಸ್ಥಿತಿಯ ಕೊಳಕು ಭಾಷೆಯನ್ನು ಬಳಸಿ, ಒಬ್ಬ ಕೇಂದ್ರ ಸಚಿವರ ಬಗ್ಗೆ ಕೆಟ್ಟದ್ದಾಗಿ ಪತ್ರದಲ್ಲಿ ಪದ ಬಳಕೆ ಮಾಡಿದ್ದಾರೆ. ಇದಕ್ಕೆ ಏನು ಮಾಡಬೇಕು? ಎಲ್ಲಿ ಉತ್ತರ ಕೊಡಬೇಕು? ಎನ್ನುವುದು ನನಗೆ ಗೊತ್ತಿದೆ ಎಂದು ಅವರು ತಿಳಿಸಿದರು.
8
+ ನಾನು ದಾಖಲೆ, ವಿಷಯ ಇಲ್ಲದೆ ಮಾತನಾಡುವುದಿಲ್ಲ. ಅಧಿಕಾರಿ ಬರೆದಿರುವ ಪತ್ರವನ್ನು ಚೆನ್ನಾಗಿ ಸಿದ್ಧ ಮಾಡಿಕೊಟ್ಟಿದ್ದಾರೆ. ನಾನು ಶನಿವಾರ ಬೆಳಗ್ಗೆ ಸುದ್ದಿಗೋಷ್ಠಿ ಮಾಡಿದ ಮೇಲೆ, ಸಂಜೆ ಆ ಅಧಿಕಾರಿ ಎಲ್ಲಿ ಹೋಗಿದ್ದರು ಎನ್ನುವುದು ಗೊತ್ತಿದೆ. ಅವರ ಪತ್ರವನ್ನು ಅಲ್ಲಿ ಯಾವ ಕಾನೂನು ಪಂಡಿತರು ಸಿದ್ಧ ಮಾಡಿಕೊಟ್ಟರು. ಅವರೊಂದಿಗೆ ಇನ್ನೊಬ್ಬರು ಯಾರಿದ್ದರು ಎನ್ನುವುದು ನನಗೆ ಗೊತ್ತಿದೆ ಎಂದು ಅವರು ಹೇಳಿದರು.
9
+ ನಾನು ದಾಖಲೆ ಇಟ್ಕೊಂಡೇ ನಿನ್ನೆ ಮಾತಾಡಿದ್ದೇನೆ. ಅಧಿಕಾರಿ ಆಂಧ್ರ ಪ್ರದೇಶ ಮೂಲದವರು. ಹಿಮಾಚಲ ಪ್ರದೇಶದ ಕೇಡರ್ ಅಧಿಕಾರಿ 25 ವರ್ಷಗಳಿಂದ ಇಲ್ಲಿದ್ದಾರೆ. ಯಾರು ಯಾರನ್ನು ಹಿಡಿದು ಇಲ್ಲಿಗ��� ಬಂದಿದ್ದೀರಿ? ಅಧಿಕಾರಿ ಬಳಕೆ ಮಾಡಿರುವ ಭಾಷೆಯು ಅವರ ಸಂಸ್ಕೃತಿಯನ್ನು ತೋರಿಸುತ್ತದೆ. ಯಾರು ಯಾರ ಜತೆ ಈತನ ಕ್ರಿಮಿನಲ್ ನಂಟಿದೆ ಎನ್ನುವುದನ್ನು ನಿನ್ನೆಯೇ ದಾಖಲೆ ಸಮೇತ ಹೇಳಿದ್ದೇನೆ.
10
+ ಒಬ್ಬ ಕೇಂದ್ರ ಮಂತ್ರಿ ಬಗ್ಗೆ ಯಾವ ಭಾಷೆ ಬಳಸಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಾಗಿದೆ ಎಂದು ಅವರು ಹೇಳಿದರು.ಪತ್ರದಲ್ಲಿ ಸತ್ಯಮೇವ ಜಯತೆ ಎಂದು ಅಧಿಕಾರಿ ಬರೆದಿದ್ದಾರೆ. ನಾನು ಹೋರಾಟ ಮಾಡುತ್ತಿರುವುದು ಕೂಡ ಅದೇ ಉದ್ದೇಶಕ್ಕೆ. ಅಷ್ಟು ದಾಖಲೆಗಳ ಸಮೇತ ಈ ವ್ಯಕ್ತಿ ಬಗ್ಗೆ ಹೇಳಿದ್ದು ಕೂಡ ಸತ್ಯಮೇವ ಜಯತೆ ಕಾರಣಕ್ಕಾಗಿಯೇ ಎಂದು ಕುಮಾರಸ್ವಾಮಿ ತಿಳಿಸಿದರು.
11
+ ಪೊಲೀಸ್ ಠಾಣೆಗೆ ಈ ಅಧಿಕಾರಿ ವಿರುದ್ಧ ನಾನು ದೂರು ಕೊಟ್ಟಿದ್ದೇನೆಯೇ? ಅವರ ಕೈಕೆಳಗೆ ಕೆಲಸ ಮಾಡುವ ಇನ್‌್ಸಪೆಕ್ಟರ್ಗೆ 20 ಕೋಟಿ ರೂ. ಬೇಡಿಕೆ ಇಟ್ಟು ಸಿಕ್ಕಿ ಬಿದ್ದಿದ್ದಾರೆ. ಆ ಇನ್‌್ಸಪೆಕ್ಟರ್ ಈ ಅಧಿಕಾರಿ ವಿರುದ್ಧ ದೂರು ನೀಡಿದ್ದಾರೆ. ತಕ್ಷಣ 2 ಕೋಟಿ ರೂ.ತಂದು ಕೊಡಬೇಕು ಎಂದು ಬ್ಲಾಕ್ ಮೇಲ್ ಮಾಡಿದ್ದು ಈತನೇ ಅಲ್ಲವೇ? ನಂತರ ಕೇಸ್ ಕೋರ್ಟ್ ಮುಂದೆ ಇದೆಯಲ್ಲವೇ? ಇದೇನಾ ಅಧಿಕಾರಿಯ ಸತ್ಯಮೇವ ಜಯತೆ? ಎಂದು ಸಚಿವರು ಕಿಡಿಕಾರಿದರು.
12
+ ನನ್ನ ರಾಜೀನಾಮೆ ಕೇಳುವ ನೈತಿಕತೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪಟಾಲಂಗೆ ನನ್ನ ರಾಜೀನಾಮೆ ಕೇಳುವ ನೈತಿಕತೆ ಇಲ್ಲ. ಸಿದ್ದರಾಮಯ್ಯ ಅವರನ್ನು ಮೆಚ್ಚಿಸಲು ನಾನು ರಾಜೀನಾಮೆ ಕೊಡಬೇಕೇ? ನಾನು ತಪ್ಪು ಮಾಡಿಲ್ಲ, ತಪ್ಪು ಮಾಡಿಲ್ಲ ಅಂದ ಮೇಲೆ ರಾಜೀನಾಮೆ ಯಾಕೆ ಕೊಡಲಿ? ಸುಳ್ಳು ಹೇಳುತ್ತಿರುವುದು ನಾನಲ್ಲ ಎಂದು ಟೀಕಾ ಪ್ರಹಾರ ನಡೆಸಿದರು.
eesanje/url_46_5_2.txt ADDED
@@ -0,0 +1,17 @@
 
 
 
 
 
 
 
 
 
 
 
 
 
 
 
 
 
 
1
+ ಬೆಂಗಳೂರಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕ್‌, ಬಾಂಗ್ಲಾ ಪ್ರಜೆಗಳ ವಿರುದ್ಧ ಕಠಿಣ ಕ್ರಮ : ಪರಮೇಶ್ವರ್‌
2
+
3
+ ಬೆಂಗಳೂರು,ಸೆ.30-ಬೆಂಗಳೂರಿನಲ್ಲಿ ನೆಲೆಸಿದ್ದ ಪಾಕಿಸ್ತಾನದ ಪ್ರಜೆ ಹಾಗೂ ಹಲವು ಬಾಂಗ್ಲ ದೇಶೀಯರ ಬಗ್ಗೆ ತನಿಖೆ ನಡೆಯುತ್ತಿದ್ದು, ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಠಿಣ ಕ್ರಮ ಜರುಗಿಸುವುದಾಗಿ ಗೃಹಸಚಿವ ಡಾ.ಜಿ. ಪರಮೇಶ್ವರ್‌ ತಿಳಿಸಿದ್ದಾರೆ.
4
+ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಬಂದಿರುವ ಮಾಹಿತಿ ಪ್ರಕಾರ ಹತ್ತು ವರ್ಷದಿಂದ ಭಾರತದಲ್ಲಿದ್ದಾರೆ. ನಾಲ್ವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
5
+ ಯಾವ ಉದ್ದೇಶದಿಂದ ಬೆಂಗಳೂರಿಗೆ ಬಂದಿದ್ದರು ಎಂಬುದು ಹೊರಬರಲಿದೆ. ಹತ್ತು ವರ್ಷದ ಹಿಂದೆ ಭಾರತಕ್ಕೆ ಬಂದಿದ್ದರು ಎಂಬುದು ಸತ್ಯವಾಗಿದ್ದರೆ, ಕೇಂದ್ರ ಗುಪ್ತದಳದ ಗಮನಕ್ಕೆ ಬರಲಿಲ್ಲ. ಬಂಧಿತರು ಪಾಸ್‌‍ಪೋರ್ಟ್‌ ಮಾಡಿಸಿಕೊಳ್ಳುವ ಮಟ್ಟಕ್ಕೆ ಹೋಗಿದ್ದರು. ಹೆಸರು ಬದಲಾಯಿಸಿಕೊಂಡಿದ್ದಾರೆ. ತನಿಖೆಯಲ್ಲಿ ಏನೆಲ್ಲ ಮಾಹಿತಿಗಳು ಹೊರಬರುತ್ತವೆ ಎಂಬುದನ್ನು ನೋಡೋಣ ಎಂದು ತಿಳಿಸಿದರು.
6
+ ಬಹಳ ಜನ ಬಾಂಗ್ಲಾ ದೇಶದವರು ಬಂದಿದ್ದಾರೆ. ಪ್ರತಿನಿತ್ಯ ಅವರನ್ನು ವಶಕ್ಕೆ ಪಡೆದು ವರದಿ ನೀಡುತ್ತಿದ್ದೇವೆ. ಬಾಂಗ್ಲಾ ಗಡಿಯಲ್ಲಿ ನುಸುಳದಂತೆ ಬಂದೋಬಸ್ತ್‌ ಹೆಚ್ಚಿಸಬೇಕು. ಕೇಂದ್ರ ಸರ್ಕಾರದ ಗಮನಕ್ಕೆ ತರುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಬಾಂಗ್ಲಾ ದೇಶದ ಹೈಕಮೀಷನ್‌ಗೂ ಮಾಹಿತಿ ನೀಡುತ್ತೇವೆ ಎಂದರು.
7
+ ಎತ್ತಿನಹೊಳೆ ಯೋಜನೆ ವಿಚಾರವಾಗಿ ಚರ್ಚಿಸಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಆಗಮಿಸಿದ್ದರು. ಇದಕ್ಕೆ ಬೇರೆ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ ಎಂದು ಗೃಹ ಸಚಿವರು ಹೇಳಿದರು.
8
+ ಎತ್ತಿನಹೊಳೆ ಯೋಜನೆ ವೇಗವಾಗಿ ಆಗುತ್ತಿಲ್ಲ. ಹಣ ಬಿಡುಗಡೆ ಆಗಬೇಕಿದೆ. ದೊಡ್ಡಬಳ್ಳಾಪುರದಲ್ಲಿ ನೀರು ಸಂಗ್ರಹಕ್ಕೆ ಐದು ಸಾವಿರ ಎಕರೆ ಭೂಮಿ ಪ್ರಸ್ತಾಪ ಮಾಡಲಾಗಿತ್ತು. ಅದರಲ್ಲಿ 2,500 ಎಕರೆ ಭೂಮಿ ಕೊರಟಗೆರೆ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ಹಿಂದಿನ ಸರ್ಕಾರ ಇದನ್ನು ಬದಲಾಯಿಸಿ, ನಿಲ್ಲಿಸಿತ್ತು. ಅದು ಆಗಬಾರದು ಎಂಬ ಚರ್ಚೆ ನಡೆಯುತ್ತಿತ್ತು.
9
+ ಮುಂದಿನ ವರ್ಷಕ್ಕಾದರು ಜಿಲ್ಲೆಗೆ ನೀರು ಬರಬೇಕು. ಈ ಬಗ್ಗೆ ಚರ್ಚಿಸಲು ಭೇಟಿ ಮಾಡುವುದಾಗಿ ಡಿಸಿಎಂ ಅವರಿಗೆ ಹೇಳಿದ್ದೆ. ಡಿಸಿಎಂ ಅವರು ನಾನೇ ಬರುತ್ತೇನೆ, ಮಾತಾಡೋಣ ಎಂದಿದ್ದರು. ಬನ್ನಿ ಎಂದು ಕರೆದ್ದೆಿ ಎಂದು ಸ್ಪಷ್ಟನೆ ನೀಡಿದರು.
10
+ ಡಿ.ಕೆ.ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಿದ್ದಾರೆ. ನಾವು ಮಾತಾಡಿಕೊಳ್ಳದಿದ್ದರೆ ಇನ್ನ್ಯಾರು ಮಾತಾಡಿಕೊಳ್ಳಬೇಕು? ನಮ ಸಮಸ್ಯೆಗಳ ಬಗ್ಗೆ ನಾವೇ ಚರ್ಚೆ ಮಾಡಬೇಕು. ನಾನು ಮತ್ತು ಡಿ.ಕೆ.ಶಿವಕುಮಾರ್‌ ಅವರು ಹೊಸದಾಗಿ ಭೇಟಿ ಆಗುತ್ತಿದ್ದೇವೆಯೇ? ಎಂದ��� ಪ್ರಶ್ನಿಸಿದರು.
11
+ ಡಿಸಿಎಂ ಭೇಟಿಯನ್ನು ಬೇರೆ ರೀತಿಯ ದೃಷ್ಟಿಕೋನದಲ್ಲಿ ನೋಡಬೇಕಿಲ್ಲ. ನಮ ಕೆಲಸ ಕಾರ್ಯಗಳಾಗಬೇಕಾಗುತ್ತದೆ. ಗುಬ್ಬಿಯಿಂದ ಕುಣಿಗಲ್‌ವರೆಗೆ ಎಕ್‌್ಸಪ್ರೆಸ್‌‍ ಕೆನಲ್‌ ಮಾಡಲು ಅನುಮತಿ ಸಿಕ್ಕಿದೆ. ಕೆಲಸ ಆರಂಭಿಸುವಾಗ ಜನರು ತಡೆದಿದ್ದಾರೆ. ಈ ಬಗ್ಗೆಯೂ ಚರ್ಚಿಸಲಾಗಿದೆ. ನೀರಾವರಿ ಸಚಿವರಾದ ಡಿ.ಕೆ.ಶಿವಕುಮಾರ್‌ ಅವರು ತಾಂತ್ರಿಕ ಸಮಿತಿ ಮಾಡಿದ್ದಾರೆ. ಅದರ ವರದಿ ಬಂದ ಮೇಲೆ ಮುಂದುವರಿಯುತ್ತದೆ. ಭೇಟಿ ಮಾಡುವುದಕ್ಕೆ ಬೇರೆಬೇರೆ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ ಎಂದು ಸ್ಪಷ್ಟಪಡಿಸಿದರು.
12
+ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್‌ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿದ ಅವರು, ನಾನು ಸಾವಿರ ಕೋಟಿ ರೂ. ನೋಡಿಲ್ಲ. ಸರ್ಕಾರ ಅಸ್ಥಿರಗೊಳಿಸಲು ಸಾವಿರ ಕೋಟಿ ರೂ. ಎಲ್ಲಿಟ್ಟಿದ್ದಾರೆ ಎಂಬುದನ್ನು ಯತ್ನಾಳ್‌ ಅವರನ್ನೇ ಕೇಳಬೇಕು. ಸಾವಿರ ಕೋಟಿ ಎಲ್ಲಿಟ್ಟಿದ್ದಾರೆ ಎಂಬುದರ ಬಗ್ಗೆ ತನಿಖೆಯಾಗಬೇಕು. ಸುಮೋಟೋ ಪ್ರಕರಣ ದಾಖಲಿಸುವ ಬಗ್ಗೆ ಪರಿಶೀಲಿಸಲಾಗುವುದು. ಸಂದರ್ಭ ಬಂದರೆ ದಾಖಲಿಸಬೇಕಾಗುತ್ತದೆ ಎಂದು ತಿಳಿಸಿದರು.
13
+ ಫ್ರೇಜರ್‌ ಟೌನ್‌ನಲ್ಲಿ ಪೊಲೀಸ್‌‍ ವಸತಿಗೃಹಗಳ ದುಸ್ಥಿತಿಯನ್ನು ಪರಿಶೀಲಿಸಲು ಹಿರಿಯ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸುತ್ತೇನೆ. ಸಾಧ್ಯವಾದರೆ ಖುದ್ದಾಗಿ ಭೇಟಿ ನೀಡಿ, ಸೂಕ್ತ ನಿರ್ದೇಶನ ನೀಡುತ್ತೇನೆ ಎಂದು ಹೇಳಿದರು.
14
+ ಹಿರಿಯ ಅಧಿಕಾರಿ ಏನು ಪದ ಬಳಕೆ ಮಾಡಿದ್ದಾರೆ. ಬರ್ನಾಡ್‌ ಷಾ ಆ ರೀತಿ ಹೇಳಿದ್ದಾರೆ ಅಂತ ಹೇಳಿದ್ದಾರೆಯೇ ಹೊರತು, ಕುಮಾರಸ್ವಾಮಿ ಅವರಿಗೆ ರೆಫರ್‌ ಮಾಡಿ ಹೇಳಿಲ್ಲವಲ್ಲ. ನಮಗೆ ಓದುವುದಕ್ಕೆ ಬರಬೇಕಲ್ಲ. ಓದುವುದಕ್ಕೆ, ಅರ್ಥ ಮಾಡಿಕೊಳ್ಳಲು ಬಂದರೆ ಈ ರೀತಿ ಪ್ರಶ್ನೆಯೇ ಬರುವುದಿಲ್ಲ ಎಂದರು.
15
+ ಬರ್ನಾಡ್‌ ಷಾ ಹೇಳಿರುವುದನ್ನು ಉಲ್ಲೇಖಿಸಿದ್ದಾರೆ. ಕುಮಾರಸ್ವಾಮಿ ಅವರು ನನಗೆ ಅನ್ವಯಿಸುತ್ತದೆ ಎಂದು ಏಕೆ ಅಂದುಕೊಳ್ಳಬೇಕು. ಗಾದೆಮಾತು, ನಾಣ್ಣುಡಿ, ದೊಡ್ಡವರು ಹೇಳಿದ ಮಾತುಗಳನ್ನು ಒಂದು ಅರ್ಥದಲ್ಲಿ ಹೇಳುತ್ತಾರೆ. ನಮಗೆ ಹೇಗೆ ಬೇಕೋ ಹಾಗೇ ಅರ್ಥ ಮಾಡಿಕೊಳ್ಳಲು ಆಗುವುದಿಲ್ಲ ಎಂದು ಹೇಳಿದರು.
16
+ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿ, ಇ.ಡಿ ಅವರಿಗೆ ಮತ್ತೇ ದೂರು ಕೊಡಲಿ. ಅದೆಲ್ಲವನ್ನು ಕಾನೂನು ನೋಡಿಕೊಳ್ಳುತ್ತದೆ. ನಾವು ಪ್ರತಿಕ್ರಿಯಿಸಲು ಆಗುವುದಿಲ್ಲ ಎಂದರು.
17
+ ಯಾರಿಗೆ ಯಾರು ದ್ವೇಷ ಮಾಡುತ್ತಾರೋ ಗೊತ್ತಿಲ್ಲ. ದಿನಬೆಳಗಾದರೆ ಇದೇ ಆಗಿದೆ. ಇವರಿಗೆ ಅವರು ಏನೋ ಅಂದರು, ಅವರಿಗೇ ಇವರು ಏನೋ ಅಂದರು ಎಂಬುದಾಗಿದೆ. ಸಾರ್ವಜನಿಕ ಜೀವನ ಇಷ್ಟರ ಮಟ್ಟಿಗೆ ಕಲುಷಿತ ಆದರೆ ಬಹಳ ಕಷ್ಟ ಎಂದು ಅವರು ಬೇಸರ ವ್ಯಕ್ತಪಡಿಸಿದರು.
eesanje/url_46_5_3.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ 14 ವರ್ಷಗಳ ಬಳಿಕ ಬಳ್ಳಾರಿ ಪ್ರವೇಶಕ್ಕೆ ಜನಾರ್ಧನ ರೆಡ್ಡಿಗೆ ಅನುಮತಿ, ಬೆಂಬಲಿಗರ ಸಂಭ್ರಮ
2
+ 14 ,
3
+
4
+ ನವದೆಹಲಿ, ಸೆ.30– ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲು ಪಾಲಾಗಿ ಜಾಮೀನಿನ ಮೇಲೆ ಹೊರಬಂದಿದ್ದ ಮಾಜಿ ಸಚಿವ, ಹಾಲಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ತವರು ಜಿಲ್ಲೆ ಪ್ರವೇಶಕ್ಕೆ ವಿಧಿಸಲಾಗಿದ್ದ ನಿರ್ಬಂಧವನ್ನು ಸುಪ್ರೀಂಕೋರ್ಟ್‌ ತೆರವು ಮಾಡಿದೆ.ಈವರೆಗೂ ಬಳ್ಳಾರಿಗೆ ತೆರಳಲು ಜನಾರ್ಧನ ರೆಡ್ಡಿ ನ್ಯಾಯಾಲಯದಿಂದ ಪೂರ್ವಾನುಮತಿ ಪಡೆಯಬೇಕಿತ್ತು. ಇದನ್ನು ಪ್ರಶ್ನಿಸಿ ಅವರ ಪರ ವಕೀಲರು ಸುಪ್ರೀಂಕೋರ್ಟ್‌ಗೆ ಮೇಲನವಿ ಅರ್ಜಿ ಸಲ್ಲಿಸಿದ್ದರು.
5
+ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳಾದ ಎಂ.ಎಂ.ಸುಂದರೇಶ್‌ ನೇತೃತ್ವದ ದ್ವಿಸದಸ್ಯ ಪೀಠ, ಬಳ್ಳಾರಿ , ಕಡಪ ಮತ್ತು ಅನಂತಪುರ ಜಿಲ್ಲೆಗಳಿಗೆ ತೆರಳಲು ಹಾಕಿದ್ದ ನಿರ್ಬಂಧವನ್ನು ತೆರವು ಮಾಡಿತು.
6
+ ಈ ಹಿಂದೆ ರೆಡ್ಡಿ ತಮ ಪುತ್ರಿಯ ವಿವಾಹ ಹಾಗೂ ಹೆರಿಗೆ ಸಂದರ್ಭದಲ್ಲಿ ಮಾತ್ರ ಬಳ್ಳಾರಿ ಪ್ರವೇಶಕ್ಕೆ ನ್ಯಾಯಾಲಯ ಅನುಮತಿ ನೀಡಿತ್ತು. ಅವರು ಜಿಲ್ಲೆಗೆ ಬಂದರೆ ಅಕ್ರಮ ಗಣಿಕಗಾರಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿಗಳ ಮೇಲೆ ಪ್ರಭಾವ ಬೀರಬಹುದೆಂಬ ಹಿನ್ನಲೆಯಲ್ಲಿ ಬಳ್ಳಾರಿ ಜಿಲ್ಲೆಗೆ ಕಾಲಿಡದಂತೆ ನಿರ್ಬಂಧ ಹಾಕಲಾಗಿತ್ತು.
7
+ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಜೈಲುಪಾಲಾಗಿದ್ದರು. ನಂತರ ಪ್ರಕರಣ ಸುಪ್ರೀಂಕೋರ್ಟ್‌ ಮೆಟ್ಟಿಲೇರಿತ್ತು. 2015ರ ಜನವರಿ 23ರಂದು ಜನಾರ್ದನ ರೆಡ್ಡಿಗೆ ಷರತ್ತುಬದ್ಧ ಜಾಮೀನು ನೀಡಲಾಗಿತ್ತು.
8
+ ಅಕ್ರಮ ಗಣಿಗಾರಿಕೆ, ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಸೆಪ್ಟೆಂಬರ್‌ 5, 2011ರಲ್ಲಿ ಜನಾರ್ದನ ರೆಡ್ಡಿ ಹಾಗೂ ಒಬಳಾಪುರಂ ಮೈನಿಂಗ್‌ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ, ಸಂಬಂಧಿ ಬಿ.ವಿ.ಶ್ರೀನಿವಾಸ್‌‍ ರೆಡ್ಡಿ ಅವರನ್ನು ಸಿಬಿಐ ಬಂಧಿಸಿತ್ತು. ಬಳಿಕ ಅವರನ್ನು ಆಂಧ್ರಪ್ರದೇಶದ ಪೆನುಗೊಂಡ ಜೈಲಿನಲ್ಲಿ ಇಡಲಾಗಿತ್ತು.
9
+ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ರೆಡ್ಡಿ ಆಂಧ್ರಪ್ರದೇಶ ಹೈಕೋರ್ಟ್‌ ಮೊರೆ ಹೋಗಿದ್ದರು. ಆದರೆ ಹೈಕೋರ್ಟ್‌ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಬಳಿಕ ರೆಡ್ಡಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.
10
+ ಬೇಲೆಕೇರಿ ಅದಿರು ನಾಪತ್ತೆ ಸೇರಿದಂತೆ ಅಕ್ರಮ ಗಣಿಗಾರಿಕೆ, ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ರೆಡ್ಡಿ ವಿರುದ್ಧ ಒಟ್ಟು ಏಳು ಪ್ರಕರಣಗಳು ದಾಖಲಾಗಿದ್ದವು. ಎಲ್ಲಾ ಪ್ರಕರಣಗಳಲ್ಲೂ ಜಾಮೀನು ಪಡೆದಿದ್ದ ರೆಡ್ಡಿ, ಒಬಳಾಪುರಂ ಮೈನಿಂಗ್‌ ಪ್ರಕರಣದಲ್ಲಿ ಮಾತ್ರ ಜಾಮೀನು ಸಿಗಬೇಕಿತ್ತು. ಈಗ ಅದೂ ಸಿಕ್ಕಿದ್ದು, ರೆಡ್ಡಿ ಜೈಲಿನಿಂದ ಹೊರ ಬಂದಿದ್ದರು.
11
+ ಕಳೆದ ಬಾರಿಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿಱಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸಿದ್ದ ಜನಾರ್ದನ ರೆಡ್ಡಿ ಕೊಪ್ಪಳ ಜಿಲ್ಲೆಯ ಗ���ಗಾವತಿ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಪಕ್ಷದ ಇತರ ಅಭ್ಯರ್ಥಿಗಳು ಯಾರೂ ಗೆಲುವು ಸಾಧಿಸಿರಲಿಲ್ಲ.2024 ರ ಲೋಕಸಭೆ ಚುನಾವಣೆಗೂ ಮುನ್ನ ಮಾರ್ಚ್‌ 25ರಂದು ಅವರು ಮತ್ತೆ ಬಿಜೆಪಿ ಸೇರ್ಪಡೆಯಾಗಿದ್ದರು. ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ಷರತ್ತುರಹಿತವಾಗಿ ಬಿಜೆಪಿ ಜತೆ ವಿಲೀನಗೊಳಿಸಿದ್ದರು.
eesanje/url_46_5_4.txt ADDED
@@ -0,0 +1,6 @@
 
 
 
 
 
 
 
1
+ ಪ್ರಧಾನಿ ಮೋದಿ ಭಾರತವನ್ನು ನಂ.1 ಸ್ಥಾನಕ್ಕೆ ಕೊಂಡೊಯ್ಯಬೇಕು, ಖರ್ಗೆ ಅಭಿನಂದಿಸುವುದನ್ನು ನಾವು ನೋಡಬೇಕು : ವಿಜಯೇಂದ್ರ
2
+
3
+ ಬೆಂಗಳೂರು,ಸೆ.30-ಪ್ರಧಾನಿ ನರೇಂದ್ರಮೋದಿ ಅವರು ಭಾರತವನ್ನು ವಿಶ್ವ ಮುಂಚೂಣಿಯಲ್ಲಿ ನಂಬರ್‌ 1 ಸ್ಥಾನಕ್ಕೆ ಕೊಂಡೊಯ್ಯಬೇಕು, ಅದನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಭಿನಂದಿಸುವುದನ್ನು ನಾವು ನೋಡಬೇಕು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
4
+ ಈ ಸಂಬಂಧ ಎಕ್‌್ಸನಲ್ಲಿ ಟ್ವೀಟ್‌ ಮಾಡಿರುವ ಅವರು, ಹಿರಿಯರಾದ ಮಲ್ಲಿಕಾರ್ಜುನ ಖರ್ಗೆ ಅವರು ನೂರ್ಕಾಲ ಬಾಳಬೇಕು, ಸುದೀರ್ಘ ರಾಜಕೀಯ ಜೀವನ ಸಾಗಿಸಬೇಕು ಎನ್ನುವುದು ನಮ ಪ್ರಾಮಾಣಿಕ ಅಪೇಕ್ಷೆ ಹಾಗೂ ಪ್ರಾರ್ಥನೆ ಎಂದಿದ್ದಾರೆ.
5
+ ಖರ್ಗೆ ಅವರ ಕಣ್ಣ ಮುಂದೆಯೇ ಹೆಮೆಯ ಪ್ರಧಾನಿ ನರೇಂದ್ರ ಜೀ ಅವರು ಭಾರತವನ್ನು ವಿಶ್ವ ಮುಂಚೂಣಿಯಲ್ಲಿ ನಂಬರ್‌ 1 ಸ್ಥಾನಕ್ಕೆ ಕೊಂಡೊಯ್ಯಬೇಕು, ಅದನ್ನು ಖರ್ಗೆ ಅವರು ಅಭಿನಂದಿಸುವುದನ್ನು ನೋಡಬೇಕೆಂಬುದು ನಮ ಹೆಬ್ಬಯಕೆ ಎಂದು ಹೇಳಿದ್ದಾರೆ.
6
+ ಕೆಳಗಿಳಿಸುವವರ ವ್ಯೂಹ ಬೇಧಿಸಿ ಮೂರನೆ ಬಾರಿಯೂ ಮೇಲೆದ್ದು ನಿಂತ ಪ್ರಧಾನಿ ಮೋದಿಯವರ ಈವರೆಗಿನ ನಡೆ, ಸಾಧಿಸಿರುವ ಸಾಧನೆಗಳು ಶತಕೋಟಿ ಭಾರತೀಯರ ಕನಸನ್ನು ನನಸಾಗಿಸುತ್ತಿದೆ ಈ ನಿಟ್ಟಿನಲ್ಲಿ ಭಾರತ ಜಗತ್ತಿನ ಮುಂದೆ ನಂ.1 ಸ್ಥಾನದಲ್ಲಿ ತಲೆ ಎತ್ತಿ ನಿಲ್ಲವುದರಲ್ಲೂ ನಮಗೆ ಯಾವುದೇ ಅನುಮಾನವಿಲ್ಲ ಎಂದಿದ್ದಾರೆ.
eesanje/url_46_5_5.txt ADDED
@@ -0,0 +1,5 @@
 
 
 
 
 
 
1
+ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅ.4ಕ್ಕೆ ಮುಂದೂಡಿಕೆ
2
+ ' .4
3
+ ಬೆಂಗಳೂರು,ಸೆ.30-ರೇಣುಕಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಅ.4ಕ್ಕೆ ಮುಂದೂಡಿದೆ.ಸೋಮವಾರ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಬೆಂಗಳೂರಿನ 57ನೇ ಸಿಟಿ ಸಿವಿಲ್ ನ್ಯಾಯಾಲಯ ದರ್ಶನ್ ಪರ ವಕೀಲರು ವಾದ ಮಂಡಿಸಲು ಸಮಯ ಅವಕಾಶ ಬೇಕೆಂದು ನ್ಯಾಯಾಧೀಶರಿಗೆ ಮನವಿ ಮಾಡಿದರು.
4
+ ಇದನ್ನು ಮನ್ನಿಸಿದ ನ್ಯಾಯಾಲಯ ಮುಂದಿನ ಅರ್ಜಿ ವಿಚಾರಣೆಯನ್ನು ಅ.4ಕ್ಕೆ ಮುಂದೂಡಿತು. ಇದರಿಂದಾಗಿ ದರ್ಶನ್ ಅಲ್ಲಿಯವರೆಗೂ ಬಳ್ಳಾರಿ ಜೈಲೇ ಗಟ್ಟಿ.ಈಗಾಗಲೇ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು ವಿಚಾರಣೆಯನ್ನು ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.
5
+ ತನಿಖೆ ಮುಗಿದ ಹಿನ್ನಲೆಯಲ್ಲಿ ತಮಗೆ ಜಾಮೀನು ನೀಡಬೇಕೆಂದು ನ್ಯಾಯಾಲಯಕ್ಕೆ ಮೇಲನವಿ ಅರ್ಜಿ ಸಲ್ಲಿಸಿದ್ದಾರೆ. ಆದರೆ ಈಗಾಗಲೇ ವಿಶೇಷ ಸಾರ್ವಜನಿಕ ಅಭಿಯೋಜಕ ಪ್ರಸನ್ನ ಅವರು, ಆಕ್ಷೇಪಣೆ ಸಲ್ಲಿಸಿ ಜಾಮೀನು ನೀಡದಂತೆ ಮನವಿ ಮಾಡಿದ್ದಾರೆ.ನಾಗೇಶ್ ಪರ ವಕೀಲರು ವಾದ ಮಂಡಿಸಿದ ನಂತರ ನ್ಯಾಯಾಲಯ ನೀಡುವ ತೀರ್ಪು ದರ್ಶನ್ ಜಾಮೀನು ಭವಿಷ್ಯವನ್ನು ನಿರ್ಧರಿಸುತ್ತದೆ.
eesanje/url_46_5_6.txt ADDED
@@ -0,0 +1,8 @@
 
 
 
 
 
 
 
 
 
1
+ ನಾಲಿಗೆ ಹಾರಿಬಿಡುವ ಬಿಜೆಪಿ ಭಿನ್ನಮತೀಯರಿಗೆ ಹೈಕಮಾಂಡ್ ವಾರ್ನಿಂಗ್
2
+
3
+ ಬೆಂಗಳೂರು,ಸೆ.30-ಪಕ್ಷದಲ್ಲಿ ನಡೆಯುತ್ತಿರುವ ಬೆಳೆವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವ ದೆಹಲಿ ಬಿಜೆಪಿ ನಾಯಕರು ಭಿನ್ನಮತೀಯ ನಾಯಕರ ಚಟುವಟಿಕೆಗಳಿಗೆ ಸಂಪೂರ್ಣವಾಗಿ ಕಡಿವಾಣ ಹಾಕಲು ಮುಂದಾಗಿದ್ದಾರೆ. ಇನ್ನು ಮುಂದೆ ಪ್ರತ್ಯೇಕವಾಗಿ ಯಾವುದೇ ನಾಯಕರು ಸಭೆ ನಡೆಸುವುದು, ಇಲ್ಲವೇ ಪಕ್ಷದ ಅನುಮತಿ ಇಲ್ಲದೆ ಬಾಯಿಗೆ ಬಂದಂತೆ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದರೆ ಅದನ್ನು ಅಶಿಸ್ತು ಎಂದು ಪರಿಗಣಿಸುವುದಾಗಿ ಎಚ್ಚರಿಕೆ ಕೊಟ್ಟಿದೆ.
4
+ ಇನ್ನು ಮುಂದೆ ಪಕ್ಷದ ಅಧಿಕೃತ ಆದೇಶವಿಲ್ಲದೆ ಯಾರೋಬ್ಬರು ಸಭೆ ನಡೆಸುವಂತಿಲ್ಲ. ಏನೇ ಇದ್ದರೂ ಪಕ್ಷದ ಚೌಕಟ್ಟಿನೊಳಗೆ ನಡೆಯಬೇಕು. ಸ್ವಪಕ್ಷೀಯರ ವಿರುದ್ಧವೇ ಬಹಿರಂಗ ಹೇಳಿಕೆ ನೀಡಿದರೆ ಶಿಸ್ತು ಕ್ರಮ ಜರುಗಿಸಬೇಕಾಗುತ್ತದೆ ಎಂಬ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.
5
+ ಬಿಜೆಪಿಯ ಖಾಯಂ ಭಿನ್ನಮತೀಯ ಎಂದು ಗುರುತಿಸಿಕೊಂಡಿರುವ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ಶಾಸಕರಾದ ಬಿ.ಪಿ.ಹರೀಶ್‌, ರಮೇಶ್‌ ಜಾರಕಿಹೊಳಿ, ಮಾಜಿ ಸಚಿವರಾದ ಪ್ರತಾಪ್‌ ಸಿಂಹ, ಜಿ.ಎಂ.ಸಿದ್ದೇಶ್ವರ್‌, ಅಣ್ಣಾ ಸಾಹೇಬ್‌ ಜೊಲ್ಲೆ ಜೊತೆ ಸಭೆ ನಡೆಸಿದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ವರಿಷ್ಠರು ಭಿನ್ನಮತೀಯ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಮುಂದಾಗಿದ್ದಾರೆ.
6
+ ಕರ್ನಾಟಕದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ನಮಗೆ ನೋವು ತಂದಿದೆ. ಸಂಘ ಪರಿವಾರದ ನಾಯಕರು ಮಧ್ಯಪ್ರವೇಶ ಮಾಡಿ ಸಭೆ ನಡೆಸಿದ ಮೇಲು ಈ ರೀತಿ ಪ್ರತ್ಯೇಕ ಸಭೆ ನಡೆಸುವುದು ಸರಿಯಲ್ಲ.ಪಕ್ಷದ ಚೌಕಟ್ಟಿನೊಳಗೆ ನಡೆಸಬೇಕಾದ ಚಟುವಟಿಕೆಗಳನ್ನು ಪ್ರತ್ಯೇಕವಾಗಿ ನಡೆಸುತ್ತಿರುವ ಔಚಿತ್ಯವಾದರೂ ಏನು ರಾಷ್ಟ್ರೀಯ ನಾಯಕರು ಪ್ರಶ್ನಿಸಿದ್ದಾರೆ ಎಂದು ತಿಳಿದುಬಂದಿದೆ.
7
+ ಯಾವುದೇ ರಾಜ್ಯದಲ್ಲೂ ಇರದ ಇಕ್ಕಟ್ಟು-ಬಿಕ್ಕಟ್ಟು ಕರ್ನಾಟಕದಲ್ಲಿದೆ. ರಾಜ್ಯಾಧ್ಯಕ್ಷರು ಪದಾಧಿಕಾರಿಗಳ ಸಮಿತಿ ಇರುವಾಗ ಗುಂಪು ಕಟ್ಟಿಕೊಂಡು ಪ್ರತ್ಯೇಕ ಸಭೆ ನಡೆಸುವುದರಿಂದ ನೀವು ಏನನ್ನೂ ಸಾಧಿಸುತ್ತೀರಿ, ಸಂಘ ಪರಿವಾರದ ನಾಯಕರ ಜೊತೆ ಸಂಧಾನ ಸಭೆ ನಡೆಸಿದಾಗ ಕೊಟ್ಟ ಮಾತು ಮರೆತಿದೆಯೇ ಎಂದು ಪ್ರಶ್ನೆ ಮಾಡಿದ್ದಾರೆ.
8
+ ಆಡಳಿತಾರೂಢ ಕಾಂಗ್ರೆಸ್‌‍ನಲ್ಲಿ ಸಾಕಷ್ಟು ಸಮಸ್ಯೆಗಳು ಉಲ್ಬಣಗೊಂಡಿವೆ. ಈ ಸಂದರ್ಭದಲ್ಲಿ ಒಗ್ಗಟ್ಟು ತೋರಿಸಬೇಕಾದವರು ಬಿಕ್ಕಟ್ಟನ್ನು ಸೃಷ್ಟಿಸುತ್ತಿದ್ದೀರಿ, ಪಕ್ಷದ ಬ್ಯಾನರ್‌ನಡಿ ಪಾದಯಾತ್ರೆ ಮಾಡಿ ಎಂದರೆ ನಾವು ರಾಜ್ಯಾಧ್ಯಕ್ಷರನ್ನು ಹೊರಗಿಟ್ಟು, ಪಾದಯಾತ್ರೆ ಮಾಡುತ್ತೇವೆ ಎಂದರೆ ಅದಕ್ಕೆ ಅನುಮತಿ ನೀಡುವುದಾದರೂ ಹೇಗೆ ಎಂದು ರಾಜ್ಯ ಉಸ್ತುವಾರಿ ರಾಧಾ ಮೋಹನ್‌ದಾಸ್‌‍ ಅಗರ್‌ವಾಲ್‌ ಅವರು ಯತ್ನಾಳ್‌ಗೆ ಪ್ರಶ್ನೆ ಮಾಡಿರುವುದಾಗಿ ತಿಳಿದುಬಂದಿದೆ.
eesanje/url_46_5_7.txt ADDED
@@ -0,0 +1,7 @@
 
 
 
 
 
 
 
 
1
+ ಸಂಕಷ್ಟ ಬಂದಾಗಲೆಲ್ಲ ‘ಜಾತಿ ಗಣತಿ’ ಜಪ ಮಾಡುವುದು ಸಿದ್ದರಾಮಯ್ಯನವರಿಗೆ ಚಟವಾಗಿಬಿಟ್ಟಿದೆ : ಸುನೀಲ್‌ ಕುಮಾರ್‌
2
+ ' '
3
+ ಬೆಂಗಳೂರು,ಸೆ.30-ರಾಜಕೀಯವಾಗಿ ಸಂಕಷ್ಟ ಬಂದಾಗಲೆಲ್ಲ ಜಾತಿ ಗಣತಿ ವರದಿ ಜಾರಿ ವಿಚಾರ ಪ್ರಸ್ತಾಪಿಸಿ ಹಿಂದುಳಿದ ಹಾಗೂ ಶೋಷಿತ ವರ್ಗದ ದಾರಿ ತಪ್ಪಿಸಿವುದು ಸಿಎಂ ಸಿದ್ದರಾಮಯ್ಯ ಅವರಿಗೆ ಚಟವಾಗಿ ಬಿಟ್ಟಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್‌ ಕುಮಾರ್‌ ಟೀಕಿಸಿದ್ದಾರೆ.
4
+ ಸಿದ್ದರಾಮಯ್ಯನವರಿಗೆ ಜಾತಿ ಗಣತಿ ವರದಿ ಎನ್ನುವುದು ಖುರ್ಚಿ ಭದ್ರಪಡಿಸಿಕೊಳ್ಳುವುದಕ್ಕಾಗಿನ ಮಹಾನ್‌ ಅಸ್ತ್ರವಾಗಿದೆ. ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷೆ ಜಾರಿ, ಅಹಿಂದ ವರ್ಗಕ್ಕೆ ಅನ್ಯಾಯ ಎಂದು ಭಾಷಣ ಬಿಗಿದು ಬಚಾವ್‌ ಆಗುವುದು ಚಾಳಿಯಾಗಿ ಬಿಟ್ಟಿದೆ. ಪೊಲೀಸ್‌‍ ಭಾಷೆಯಲ್ಲಿ ಹೇಳಬೇಕೆಂದರೆ ಇದು ವೃತ್ತಿಪರ ಆರೋಪಿ ಎಸಗುವ ಗಮನ ಸೆಳೆಯುವ ತಂತ್ರ ಎಂದು ವ್ಯಂಗ್ಯವಾಡಿದ್ದಾರೆ.
5
+ ಸಿದ್ದರಾಮಯ್ಯನವರು ಹಾದಿ ತಪ್ಪಿಸುವುದರಲ್ಲಿ ಎಕ್‌್ಸಪರ್ಟ್‌, ಇಡೀ ಕರ್ನಾಟಕವನ್ನು ನಾಲ್ಕು ದಶಕಗಳಿಂದ ಹಾದಿ ತಪ್ಪಿಸುತ್ತಲೇ ಬಂದಿದ್ದೀರಿ. ರಾಮಕೃಷ್ಣ ಹೆಗಡೆ, ದೇವೇಗೌಡ, ಎಸ್‌‍.ಎಂ.ಕೃಷ್ಣರಂಥ ಘಟಾನುಘಟಿಗಳ ಪಥವನ್ನೇ ಬದಲಿಸಿದ ನಿಮಗೆ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಯಾವುದಾದರೂ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ನೀಡಬೇಕಿದೆ ಎಂದು ಟೀಕಿಸಿದ್ದಾರೆ.
6
+ ಮುಡಾ ವಿಚಾರದಲ್ಲಿ ಸಂಕಷ್ಟ ಎದುರಾಗುತ್ತಿದ್ದಂತೆ ನೀವು ಜಾತಿ ಗಣತಿ ವಿಚಾರವನ್ನು ಮುಂದಿಟ್ಟುಕೊಂಡು ಹಿಂದುಳಿದ ಹಾಗೂ ಶೋಷಿತ ವರ್ಗದ ದಿಕ್ಕು ತಪ್ಪಿಸಲು ಹೊರಟಿದ್ದೀರಿ. ಎಷ್ಟು ದಿನ ಈ ನಾಟಕ? ಅಧಿಕಾರಕ್ಕೆ ಬಂದಾಗಿನಿಂದ ಜಾತಿ ಗಣತಿ ಅನುಷ್ಠಾನ ಮಾಡುತ್ತೇನೆ ಎಂದು ಹೇಳುತ್ತಲೇ ಬಂದಿದ್ದೀರೇ ವಿನಾ ಆ ದಿಶೆಯಲ್ಲಿ ಒಂದೇ ಒಂದು ಹೆಜ್ಜೆ ಮುಂದಿಟ್ಟಿಲ್ಲ ಎಂದು ಕಿಡಿಕಾರಿದ್ದಾರೆ.
7
+ ಹಲವು ಕಾರಣದಿಂದ ಜಾರಿಯಾಗಿಲ್ಲ ಎಂದು ಮಗುಮಾಗಿ ಹೇಳಿದರೆ ಸಾಕೆ? ಆ ಕಾರಣವನ್ನು ಬಹಿರಂಗಪಡಿಸಿ. ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಭಯವೇ? ಅಥವಾ ವರದಿಯಲ್ಲಿ ಲೋಪಗಳಿವೆಯೇ? ಯಾವುದನ್ನೂ ಸ್ಪಷ್ಟಪಡಿಸದೇ ಜಾರಿ ಜಪ ಎಷ್ಟು ವರ್ಷ ಮುಂದುವರಿಸುತ್ತೀರಿ? ಎಂದು ಅವರು ಪ್ರಶ್ನಿಸಿದ್ದಾರೆ..
eesanje/url_46_5_8.txt ADDED
@@ -0,0 +1,9 @@
 
 
 
 
 
 
 
 
 
 
1
+ ಎಲೆಕ್ಟ್ರೋ ಬಾಂಡ್ ಹಗರಣ : ಪೊಲೀಸ್ ತನಿಖೆ ಚುರುಕು
2
+
3
+ ಬೆಂಗಳೂರು,ಸೆ.29-ಎಲೆಕ್ಟ್ರೋಲ್ ಬಾಂಡ್ ಹಗರಣ ದಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಇತರರ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ತನಿಖೆ ಚುರುಕುಗೊಳಿಸಿರುವ ತಿಲಕ್ನಗರ ಠಾಣೆಯ ಪೊಲೀಸರು ಪ್ರಾಥಮಿಕ ಮಾಹಿತಿ ಹಾಗೂ ದಾಖಲಾತಿಗಳನ್ನು ಕಲೆ ಹಾಕಲಾರಂಭಿಸಿದ್ದು, ದೂರು ದಾರರ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ.
4
+ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಪ್ರಕಾರ, ಜನಾಧಿಕಾರ ಸಂಘರ್ಷ ಪರಿಷತ್ನ ಸಹ ಅಧ್ಯಕ್ಷ ಆದರ್ಶ ಅಯ್ಯರ್ ಅವರ ದೂರನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.ಆದರ್ಶ ಅಯ್ಯರ್ ಅವರಿಂದ ಹೇಳಿಕೆಗಳನ್ನು ಪಡೆದುಕೊಳ್ಳಲಾಗಿದ್ದು, ಅವರ ಬಳಿಯಿರುವ ದಾಖಲಾತಿಗಳ ಪರಿಶೀಲನೆ ನಡೆಸಲಾಗುತ್ತಿದೆ.
5
+ ದೂರುದಾರರ ಆರೋಪಗಳು ಹಾಗೂ ಅದಕ್ಕೆ ಪೂರಕವಾದ ದಾಖಲೆಗಳನ್ನು ವಿಶ್ಲೇಷಣೆ ನಡೆಸಲಾಗುತ್ತಿದೆ. ಎಲೆಕ್ಟ್ರೋಲ್ ಬಾಂಡ್ ರಾಷ್ಟ್ರಮಟ್ಟದ ಹಗರಣವಾಗಿದ್ದು, ಸುಪ್ರೀಂಕೋರ್ಟ್ನಲ್ಲಿ ಈಗಾಗಲೇ ವಿಚಾರಣೆಯ ಹಂತದಲ್ಲಿದೆ. ಜಾರಿ ನಿರ್ದೇಶನಾಲಯ, ಸಿಬಿಐ ಮತ್ತು ಆದಾಯ ತೆರಿಗೆ ಇಲಾಖೆಗಳನ್ನು ಬಳಕೆ ಮಾಡಿಕೊಂಡು ದಾಳಿ ನಡೆಸಿ, ಬೆದರಿಸಿ ಎಲೆಕ್ಟ್ರೋಲ್ ಬಾಂಡ್ಗಳನ್ನು ಖರೀದಿಸುವಂತೆ ಮಾಡಲಾಗಿದೆ ಎಂಬ ಆರೋಪವನ್ನು ವಿರೋಧಪಕ್ಷಗಳು ಮಾಡಿವೆ.
6
+ ಇದಕ್ಕೆ ತಕ್ಕ ಹಾಗೆ ಎಲೆಕ್ಟ್ರೋಲ್ ಬಾಂಡ್ನಲ್ಲಿ ಅಧಿಕಾರರೂಢ ಬಿಜೆಪಿ ಹೆಚ್ಚು ಪಾಲು ಹೊಂದಿರುವುದು ಚರ್ಚೆಗೆ ಗ್ರಾಸವಾಗಿತ್ತು. ದೂರುದಾರರಾದ ಆದರ್ಶ ಅಯ್ಯರ್ ಆದಾಯ ತೆರಿಗೆ ಮತ್ತು ಜಾರಿ ನಿರ್ದೇಶನಾಲಯದ ದಾಳಿ ಹಾಗೂ ಅದೇ ಟೈಮ್ಲೈನ್ನಲ್ಲಿ ಎಲೆಕ್ಟ್ರೋಲ್ ಬಾಂಡ್ ಖರೀದಿ ಆಗಿರುವುದರಿಂದ ಹಗರಣಗಳು ಆಗಿವೆ ಎಂದು ಆರೋಪಿಸಿದ್ದರು.ಕಳೆದ ಮಾರ್ಚ್ನಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಜಾರಿ ನಿರ್ದೇಶನಾಲಯದ ಅಧಿಕಾರಿಗಳು, ರಾಜ್ಯ ಬಿಜೆಪಿಯ ನಳಿನ್ಕುಮಾರ್ ಕಟೀಲ್, ಬಿ.ವೈ.ವಿಜಯೇಂದ್ರ ಸೇರಿದಂತೆ ಹಲವರ ವಿರುದ್ಧ ದೂರುಗಳನ್ನು ನೀಡಿದ್ದರು. ಆದರೆ ಅದು ದಾಖಲಾಗಿರಲಿಲ್ಲ.
7
+ ಈ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮೆಟ್ಟಿಲೇರಿದ್ದರು. ಎರಡು ದಿನಗಳ ಹಿಂದೆ ನ್ಯಾಯಾಲಯ ಆದೇಶ ನೀಡಿದ್ದು, ಅದರಂತೆ ಪ್ರಕರಣ ದಾಖಲಾಗಿದೆ. ತನಿಖೆಗೆ ಒಬ್ಬರು ಎಸಿಪಿ ಹಾಗೂ ಇಬ್ಬರು ಇನ್ಸ್ ಪೆಕ್ಟರ್ಗಳ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿದೆ. ದೂರುದಾರರು ಹೇಳಿದಂತೆ ಆರ್ಥಿಕ ವಹಿವಾಟು ಹಾಗೂ ಎಲೆಕ್ಟ್ರೋಲ್ ಬಾಂಡ್ ಖರೀದಿಯ ಟೈಮ್ಲೈನ್ ಹೊಂದಾಣಿಕೆಯಾಗಲಿದೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ.
8
+ ಪ್ರಾಥಮಿಕ ತನಿಖೆ ಪೂರ್ಣಗೊಂಡ ಬಳಿಕ ಪ್ರತಿವಾದಿಗಳಿಗೆ ನೋಟಿಸ್ ನೀಡುವ ಬಗ್ಗೆಯೂ ಅಧಿಕಾರಿಗಳು ಕಾನೂನು ತಜ್ಞರ ಸಲಹೆ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ.ಎಸ್ಐಟಿ ರಚನೆ : ರಾಷ್ಟ್ರಮಟ��ಟದ ಈ ಹಗರಣದ ತನಿಖೆಗೆ ವಿಶೇಷ ತನಿಖಾ ದಳ ರಚಿಸುವ ಸಾಧ್ಯಾಸಾಧ್ಯತೆಗಳ ಬಗ್ಗೆಯೂ ಚರ್ಚೆ ನಡೆಯುತ್ತಿದೆ.
9
+ ಸ್ಥಳೀಯ ಪೊಲೀಸರು ತನಿಖೆ ನಡೆಸಲು ಕಷ್ಟಸಾಧ್ಯವಾಗುವುದರಿಂದ ಹಿರಿಯ ಐಎಎಸ್ ಅಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತನಿಖಾ ದಳವನ್ನು ರಚಿಸಿ ತನಿಖೆ ನಡೆಸುವ ಮೂಲಕ ಕೇಂದ್ರ ಬಿಜೆಪಿಗೆ ಸೆಡ್ಡು ಹೊಡೆಯಲು ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರಯತ್ನ ನಡೆಸುತ್ತಿದೆ. ಈ ಬಗ್ಗೆ ಸೋಮವಾರ ಚರ್ಚೆ ನಡೆಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
eesanje/url_46_5_9.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ಕಾಂಗ್ರೆಸ್ ಸರ್ಕಾರ ಉರುಳಿಸಲು ನಮ್ಮವರೇ 1000 ಕೋಟಿ ಮೀಸಲಿಟ್ಟಿದ್ದಾರೆ : ಯತ್ನಾಳ್ ಬಾಂಬ್
2
+ 1000
3
+ ದಾವಣಗೆರೆ, ಸೆ.29– ಕಾಂಗ್ರೆಸ್ ಸರ್ಕಾರ ಉರುಳಿಸಲು ನಮ್ಮವರೇ 1 ಸಾವಿರ ಕೋಟಿ ಹಣವನ್ನು ಮೀಸಲಿಟ್ಟಿದ್ದಾರೆ ಎಂದು ಸ್ವಪಕ್ಷೀಯರ ವಿರುದ್ದವೇ ಬಿಜೆಪಿಯ ಖಾಯಂ ಭಿನ್ನಮತೀಯ ನಾಯಕ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸ್ಪೋಟಕ ಆರೋಪ ಮಾಡಿದ್ದಾರೆ.
4
+ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರವನ್ನು ಕೆಡವಿ, ತಾವು ಸಿಎಂ ಆಗಬೇಕೆಂದು ಬಿಜೆಪಿಯ ನಾಯಕರೊಬ್ಬರು ಒಂದು ಸಾವಿರ ಕೋಟಿ ರೂ. ರೆಡಿ ಮಾಡಿಕೊಂಡಿದ್ದಾರೆ.ಡಿಸೆಂಬರ್ ತಿಂಗಳಿನಲ್ಲಿ ಕಾಂಗ್ರೆಸ್ ಸರ್ಕಾರ ಬಿದ್ದು ಹೋಗಲಿದೆ ಎಂದು ಭಾವಿಸಿಕೊಂಡಿದ್ದಾರೆ ಎಂದು ಪರೋಕ್ಷವಾಗಿ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೆಸರು ಹೇಳದೆ ಆರೋಪಿಸಿದರು.
5
+ ಈ ಹಿಂದೆ, ಮುಖ್ಯಮಂತ್ರಿ ಹುದ್ದೆಗಾಗಿ ಬಿಜೆಪಿ ಹೈಕಮಾಂಡ್ ಗೆ ಯಾರು ಎರಡೂವರೆ ಸಾವಿರ ಕೋಟಿ ರೂ. ಕೊಡುತ್ತಾರೋ ಅವರಿಗೆ ಮುಖ್ಯಮಂತ್ರಿ ಪಟ್ಟ ಒಲಿಯುತ್ತದೆ ಎಂದು ಹೇಳುವ ಮೂಲಕ ಭಾರೀ ಸಂಚಲನ ಸೃಷ್ಟಿಸಿದ್ದರು. ಈಗ, ಬಿಜೆಪಿ ನಾಯಕರೊಬ್ಬರು ಸಿಎಂ ಆಗಲು 1000 ಕೋಟಿ ರೂ. ಕೂಡಿಟ್ಟುಕೊಂಡಿದ್ದಾರೆ ಎಂದು ಹೇಳುವ ಮೂಲಕ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಆದರೆ, ಸಾವಿರ ಕೋಟಿ ರೂ. ಕೂಡಿಟ್ಟುಕೊಂಡಿರುವ ಬಿಜೆಪಿ ನಾಯಕ ಯಾರು ಎಂಬುದನ್ನು ಬಹಿರಂಗಪಡಿಲಿಲ್ಲ.
6
+ ಕಾಂಗ್ರೆಸ್ ಸರ್ಕಾರವನ್ನು ಕೆಡವಲು ನಮ್ಮ ಪಕ್ಷದವರೇ ಪ್ರಯತ್ನ ನಡೆಸುತ್ತಿದ್ದಾರೆ.ಆದರೆ, ಸರ್ಕಾರ ಅಸ್ಥಿರಗೊಳಿಸುವುದು ಅಂದುಕೊಂಡಷ್ಟು ಸುಲಭವಲ್ಲ. ಅವರು ಮುಖ್ಯಮಂತ್ರಿಯಾಗಲು ನಾವು ಬೆಂಬಲ ಕೊಡಬೇಕಲ್ಲವೇ?. ಕಳೆದ ಬಾರಿಯಂತೆ ಎಲ್ಲಾ ಶಾಸಕರು ಆ ನಾಯಕತ್ವಕ್ಕೆ ಮನ್ನಣೆ ಕೊಡುವುದಿಲ್ಲ.ಸರ್ಕಾರ ರಚನೆ ಅವರು ಅಂದುಕೊಂಡಷ್ಟು ಸರಳವಾಗಿಲ್ಲ ಎಂದು ಹೇಳಿದರು.
7
+ ಸಿಎಂ ಆಗಬೇಕೆಂದು ಎಲ್ಲರಿಗೂ ಇಷ್ಟವಿರುತ್ತದೆ. ಆದರೆ, ಅದೃಷ್ಟ ಇದ್ದವರಿಗಷ್ಟೇ ಆಗುತ್ತೆ ಎಂದು ಮಾತು ಆರಂಭಿಸಿದ ಅವರು, ರಾಜ್ಯದಲ್ಲಿ ಇದೇ ವರ್ಷ ಡಿಸೆಂಬರ್ ನಲ್ಲಿ ದೊಡ್ಡದಾದ ರಾಜಕೀಯ ಕ್ರಾಂತಿಯೊಂದನ್ನು ಮಾಡಲು ಹಲವಾರು ಬಿಜೆಪಿಗರು ಪ್ರಯತ್ನಿಸುತ್ತಿದ್ದಾರೆ. ಆಪರೇಷನ್ ಕಮಲ ಮಾಡಿ ಕಾಂಗ್ರೆಸ್ ಸರ್ಕಾರವನ್ನು ಕೆಡವಿ ತಾವು ಮುಖ್ಯಮಂತ್ರಿಯಾಗಲು ಬಿಜೆಪಿಯ ಒಬ್ಬ ನಾಯಕರು 1000 ಕೋಟಿ ರೂ.ಗಳನ್ನು ಕೂಡಿಟ್ಟುಕೊಂಡಿಟ್ಟುಕೊಂಡಿದ್ದಾರೆ ಎಂದು ಹೇಳಿದ್ದಾರೆ.
8
+ ಕೆಲವರಿಗೆ ಶಾಸಕರನ್ನು ಖರೀದಿ ಮಾಡುವುದು ತುಂಬಾ ಸರಳವಾಗಿದೆ. ಏಕೆಂದರೆ ಹಿಂದೆಯೂ ಇದೇ ರೀತಿ ಖರೀದಿ ಮಾಡಿಯೇ ಕೆಲವರು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದರು. ಅದರ ಚಾಳಿ ಈಗ ಕೆಲವರು ಮುಂದುವರೆಸಿಕೊಂಡು ಹೋಗಲು ಸಜ್ಜಾಗಿದ್ದಾರೆ. ಪಕ್ಷದ ಹೈ ಕಮಾಂಡ್ ಇದಕ್ಕೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಯತ್ನಾಳ್ ಹೇಳಿದರು.
9
+ ಕೆಲವರಿಗೆ ಯಾರು ಬೇಕ���ಗಿಲ್ಲ. ಮುಖ್ಯಮಂತ್ರಿ ಗಾದಿ ಬೇಕಾಗಿದೆ ಅಷ್ಟೇ.ನಮಗೆ ಪಕ್ಷದ ಹಿತ ಮುಖ್ಯ.ಸ್ಥಾನಮಾನಕ್ಕಾಗಿ ಪಕ್ಷವನ್ನು ಒಬ್ಬರ ಕೈಯಲ್ಲಿ ಕೊಡಲು ಸಾಧ್ಯವಿಲ್ಲ. ಹಿಂದೆ ಒಬ್ಬರಿಗೆ ಎಲ್ಲವನ್ನೂ ಕೊಟ್ಟಿದ್ದಕ್ಕೆ ಏನಾಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ.ಆದರೆ, ಆಪರೇಷನ್ ಕಮಲಕ್ಕೆ ನನ್ನ ಸಮ್ಮತಿಯಿಲ್ಲ ಎಂದು ಹೇಳಿದ ಅವರು, ಕಳೆದ ಬಾರಿ ಆಪರೇಷನ್ ಕಮಲ ಮಾಡಿದಾಗ ಬಂದಿದ್ದ 17 ಮಂದಿಯಿಂದಲೇ ಬಿಜೆಪಿಯ ಅವಸಾನವಾಗಿದ್ದು.
10
+ ಈಗ ಮತ್ತೆ ಅಂಥ ಪರಿಸ್ಥಿತಿ ಬರುವುದು ಬೇಡ ಎಂದರು. ಕಾಂಗ್ರೆಸ್ ಸರ್ಕಾರ ಬಿದ್ದ ಸಂದರ್ಭದಲ್ಲಿ ನಾವು ಚುನಾವಣೆಗೆ ಹೋಗಬೇಕು. ಜನರ ಆಶೀರ್ವಾದ ಪಡೆದು ಗೆದ್ದು ಅಧಿಕಾರಕ್ಕೆ ಬರಬೇಕು. ಆ ಮೂಲಕ, ಆಪರೇಷನ್ ಕಮಲ ಮುಂತಾದ ಭ್ರಷ್ಟಾಚಾರ ವ್ಯವಸ್ಥೆಯನ್ನು ಕೊನೆಗಾಣಿಸಬೇಕು ಎಂದು ಅವರು ಗುಡುಗಿದರು.
11
+ ಬೆಳಗಾವಿಯಲ್ಲಿ ಸಭೆ ಆದಮೇಲೆ ರಾಷ್ಟ್ರೀಯ ಸ್ವಯಂ ಸಂಘದ ಸಭೆ ಆಗಿದೆ ಅಲ್ಲಿ ಎಲ್ಲಾ ಹೇಳಿದ್ದೆವೆ.ನಮ್ಮ ಪಕ್ಷದ ಮುಖಂಡರಿಗೆ ತಿಳಿಸುವ ಕೆಲಸ ಮಾಡಿದ್ದೇವೆ.ಯಾರು ಬಿಜೆಪಿ ಮಹಾನ್ ನಾಯಕರು ಯಾರು ಬರುವುದಿಲ್ಲ. ದಾವಣಗೆರೆ ಯಲ್ಲಿ ಗಣೇಶ್ ವೇಳೆ ಗಲಾಟೆ ಆಗಿದೆ ಅದರ ಸಂಬಂದ ಬಂದಿದ್ದೇವೆ ಎಂದು ಯತ್ನಾಳ್ ಹೇಳಿದರು.
12
+ ಈ ಹಿಂದೆ, ಬಿಜೆಪಿ ಹೈಕಮಾಂಡ್ ಬಗ್ಗೆ ಹಾಗೂ ರಾಜ್ಯದ ಬಿಜೆಪಿಯ ಅಧ್ಯಕ್ಷ ವಿಜಯೇಂದ್ರ ಹಾಗೂ ಯಡಿಯೂರಪ್ಪನವರ ಕುಟುಂಬದ ಬಗ್ಗೆ ಆಗಾಗ ವಿವಾದಾತ್ಮಕ ಹೇಳಿಕೆ ನೀಡುತ್ತಲೇ ಬಂದಿರುವ ಅವರು, ಬಿಜೆಪಿಗೆ ಭಾರೀ ಮುಜುಗರ ತಂದಿದ್ದಾರೆ. ಕೆಲವು ಸಂದರ್ಭಗಳಲ್ಲಿ ತಮ್ಮ ವಿರುದ್ಧ ಪಕ್ಷ ಕ್ರಮ ಕೈಗೊಳ್ಳಲಿ ನೋಡೋಣ ಎಂದು ಸವಾಲು ಹಾಕಿದ್ದೂ ಉಂಟು.
13
+ ಈಗಾಗಲೇ ರಾಜ್ಯ ಬಿಜೆಪಿಯಿಂದ ಯತ್ನಾಳ್ ಅವರಿಗೆ ಎಚ್ಚರಿಕೆ ಸಂದೇಶ ಬಂದಿತ್ತು. ಆದರೆ, ಈಗ ಪುನಃ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಬಿಜೆಪಿ ನಾಯಕತ್ವ ಹೇಗೆ ಸ್ವೀಕರಿಸುತ್ತದೆ, ಯಾವ ರೀತಿ ಪ್ರತಿಕ್ರಿಯೆ ಮಾಡುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
eesanje/url_46_60_1.txt ADDED
@@ -0,0 +1,5 @@
 
 
 
 
 
 
1
+ ಬೆಂಗಳೂರು-ಮಂಗಳೂರು ರೈಲು ಸಂಚಾರ ರದ್ದು, ಬಸ್ ಟಿಕೆಟ್ ದರ ದುಪ್ಪಟ್ಟು ವಸೂಲಿ
2
+ ಬೆಂಗಳೂರು,ಜು.29-ಶಿರಾಡಿ ಘಾಟ್ ಬಳಿಯ ಎಡಕುಮೇರಿ-ಕಡವಗರಳ್ಳಿ ಮಧ್ಯೆ ಭೂ ಕುಸಿತವಾಗಿ ಬೆಂಗಳೂರು-ಮಂಗಳೂರು ರೈಲು ಸಂಚಾರ ಒಂದು ವಾರಗಳ ಕಾಲ ರದ್ದಾಗಿದ್ದು, ಖಾಸಗಿ ಬಸ್ಗಳ ಟಿಕೆಟ್ ದರ ದುಪ್ಪಟ್ಟಾಗಿದೆ.
3
+ ವಿಮಾನ ಪ್ರಯಾಣ ದರವೂ ಕೂಡ ಏರಿಕೆಯಾಗಿದೆ. ಭೂ ಕುಸಿತದ ಹಿನ್ನೆಲೆಯಲ್ಲಿ ಒಂದು ವಾರ ರೈಲುಗಳ ಸಂಚಾರ ರದ್ದಾಗಿದ್ದು, 700 ಮಂದಿಯಿಂದ ದುರಸ್ಥಿ ಕಾರ್ಯ ನಡೆಯುತ್ತಿದ್ದು, ಆ.4ರವರೆಗೆ ಈ ಮಾರ್ಗದಲ್ಲಿ ರೈಲು ಸಂಚಾರ ಅಸಾಧ್ಯ ಎಂದು ರೈಲ್ವೆ ಇಲಾಖೆ ಮಾಹಿತಿ ನೀಡಿದೆ.
4
+ ರೈಲು ಸಂಚಾರ ರದ್ದಾದ ಬೆನ್ನಲ್ಲೇ ಬೆಂಗಳೂರು-ಮಂಗಳೂರು ನಡುವಿನ ಖಾಸಗಿ ಬಸ್ಗಳ ಪ್ರಯಾಣದರ ದುಪ್ಪಟ್ಟಾಗಿದೆ. ಜೊತೆಗೆ ವಿಮಾನ ಪ್ರಯಾಣದರವೂ ಕೂಡ ಏರಿಕೆಯಾಗಿದೆ. ಸಾಮಾನ್ಯವಾಗಿ ರೂ. 2,000 ದಿಂದ ರೂ. 3,000 ವರೆಗೆ ಇದ್ದ ವಿಮಾನ ಪ್ರಯಾಣ ದರ ಈಗ ಏಕಾಏಕಿ ರೂ. 10000ಕ್ಕೆ ಏರಿಕೆಯಾಗಿದೆ.
5
+ ಕಣ್ಣೂರು-ಬೆಂಗಳೂರು ಎಕ್‌್ಸಪ್ರೆಸ್, ಮಂಗಳೂರು ಸೆಂಟ್ರಲ್-ವಿಜಯಪುರ ಸ್ಪೆಷಲ್ ಎಕ್‌್ಸಪ್ರೆಸ್, ವಿಜಯಪುರ-ಮಂಗಳೂರು ಸೆಂಟ್ರಲ್ ಎಕ್ಸ್ ಪ್ರೆಸ್, ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು, ಮುರುಡೇಶ್ವರ ಎಕ್ಸ್ ಪ್ರೆಸ್, ಬೆಂಗಳೂರು-ಕಾರವಾರ-ಪಂಚಗಂಗ ಎಕ್‌್ಸಪ್ರೆಸ್ಗಳ ಪ್ರಯಾಣವನ್ನು ಆ.4ರವರೆಗೆ ರದ್ದು ಮಾಡಲಾಗಿದೆ.
eesanje/url_46_60_10.txt ADDED
@@ -0,0 +1,5 @@
 
 
 
 
 
 
1
+ ಬೆಂಗಳೂರಲ್ಲಿ ಕಳಪೆ ಮಾಂಸ ವಿವಾದ : ವರದಿಗೆ ಕಾಯುತ್ತಿರುವ ಪೊಲೀಸರು
2
+ ಬೆಂಗಳೂರು,ಜು.28-ನಗರದಲ್ಲಿ ಭುಗಿಲೆದ್ದಿರುವ ಮಾಂಸ ವಿವಾದಕ್ಕೆ ಸಂಬಂಧಿಸಿದಂತೆ ಮಾಂಸ ಪೂರೈಕೆದಾರರ ವಿರುದ್ಧ ದಾಖಲಾಗಿರುವ ಆರೋಪ ಪ್ರಕರಣ ಸಂಬಂಧ ಆಹಾರ ಮತ್ತು ಸುರಕ್ಷತಾ ಇಲಾಖೆಯವರ ವರದಿ ನಿರೀಕ್ಷಿಸಲಾಗಿದ್ದು, ವರದಿ ನಂತರ ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ.
3
+ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರ ರಕ್ಷಣಾ ಪಡೆ ಮುಖಂಡ ಪುನೀತ್‌ ಕೆರೆಹಳ್ಳಿ ಹಾಗೂ ಆತನ ಸಹಚರರು ಮತ್ತು ಮಾಂಸ ಪೂರೈಕೆದಾರರು ಸೇರಿದಂತೆ ಒಟ್ಟು 3 ಎಫ್‌ಐಆರ್‌ಗಳು ಕಾಟನ್‌ಪೇಟೆ ಪೊಲೀಸ್‌‍ ಠಾಣೆಯಲ್ಲಿ ದಾಖಲಾಗಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಪುನೀತ್‌ ಕೆರೆಹಳ್ಳಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
4
+ 2ನೇ ಎಫ್‌ಐಆರ್‌ನಲ್ಲಿ ಈತನ ಸಹಚರರನ ವಿಚಾರಣೆ ನಡೆಸಿ ಠಾಣಾ ಜಾಮೀನಿನ ಮೇರೆಗೆ ಬಿಡುಗಡೆ ಮಾಡಲಾಗಿದೆ.ರಾಜಸ್ಥಾನದ ಮಾಂಸ ಪೂರೈಕೆದಾರರ ವಿರುದ್ಧ ಹಾನಿಕಾರಕ ಆಹಾರ ಪೂರೈಕೆ ಆರೋಪದಡಿ ಪ್ರಕರಣ ದಾಖಲಿಸಲಾಗಿದ್ದು, ಆಹಾರ ಸುರಕ್ಷತಾ ಇಲಾಖೆಯವರು ವಿವಾದಿತ ಮಾಂಸದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿದ್ದು, ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
5
+ ಕಳೆದೆರಡು ದಿನಗಳ ಹಿಂದೆ ರಾಜಸ್ಥಾನದಿಂದ ಸುಮಾರು 90 ಬಾಕ್‌್ಸಗಳಲ್ಲಿ 4,500 ಕೆ.ಜಿ.ಗೂ ಹೆಚ್ಚು ಮಾಂಸ ರೈಲಿನಲ್ಲಿ ನಗರದ ಸಂಗೊಳ್ಳಿರಾಯಣ್ಣ ರೈಲು ನಿಲ್ದಾಣಕ್ಕೆ ತರಲಾಗಿತ್ತು. ಈ ಮಾಂಸ ತಿನ್ನಲು ಯೋಗ್ಯವಲ್ಲ. ನಾಯಿ ಮಾಂಸವೆಂಬ ಆರೋಪ ಕೇಳಿಬಂದಿತ್ತು. ಅಲ್ಲದೆ ನಗರದ ಕೆಲ ಮಾಂಸದ ವ್ಯಾಪಾರಿಗಳು ಹೊರರಾಜ್ಯದಿಂದ ನಗರಕ್ಕೆ ಕಳಪೆ ಗುಣಮಟ್ಟದ ಮಾಂಸ ತಂದು ವ್ಯಾಪಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.
eesanje/url_46_60_11.txt ADDED
@@ -0,0 +1,5 @@
 
 
 
 
 
 
1
+ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡುವಂತೆ ಸಚಿವರಿಗೆ ಡಿಸಿಎಂ ಡಿಕೆಶಿ ಮನವಿ
2
+ ಬೆಂಗಳೂರು,ಜು.28-ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಜನರ ಕಷ್ಟಗಳನ್ನು ಆಲಿಸಬೇಕು ಹಾಗೂ ಅಗತ್ಯ ನೆರವುಗಳನ್ನು ಒದಗಿಸಿಕೊಡಬೇಕು ಎಂದು ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮನವಿ ಮಾಡಿದ್ದಾರೆ.
3
+ ರಾಜ್ಯದಲ್ಲಿ ಈ ವರ್ಷ ಭಾರಿ ಮಳೆಯಾಗುತ್ತಿದೆ ಮತ್ತು ಪ್ರವಾಹದಿಂದ ರಾಜ್ಯದ ನದಿಗಳು ಉಕ್ಕಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿ ನೀರಿನ ಹೊರಹರಿವು ಹೆಚ್ಚಾದ ಪರಿಣಾಮ ನೆರೆ ಪರಿಸ್ಥಿತಿ ಎದುರಾಗಿದೆ. ನದಿ ಪಾತ್ರದ ಜನ, ಜಾನುವಾರು, ಆಸ್ತಿ, ಬೆಳೆಗಳಿಗೆ ಹಾನಿಗಳ ಬಗ್ಗೆ ವರದಿಯಾಗುತ್ತಿದೆ.
4
+ ಇಂತಹ ಕಷ್ಟದ ಸಮಯದಲ್ಲಿ ಜನರ ಜೊತೆ ನಿಲ್ಲಬೇಕಿರುವುದು ನಮ ಸರ್ಕಾರದ ಕರ್ತವ್ಯ. ಹೀಗಾಗಿ ಸಚಿವ ಸಹೋದ್ಯೋಗಿಗಳು ತಮ ಕ್ಷೇತ್ರ ವ್ಯಾಪ್ತಿಯ ಹಾಗೂ ಇತರ ಪ್ರವಾಹಪೀಡಿತ ಪ್ರದೇಶಗಳ ಶಾಸಕರ ಸಂಪರ್ಕದೊಂದಿಗೆ ಭೇಟಿ ಕೊಟ್ಟು, ಸಂತ್ರಸ್ತರ ಅಹವಾಲುಗಳನ್ನು ಸ್ವೀಕರಿಸಿ ಅವರ ನೆರವಿಗೆ ಧಾವಿಸಬೇಕಾಗಿ ಕೋರುತ್ತೇನೆ ಎಂದು ಮನವಿ ಮಾಡಿದ್ದಾರೆ.
5
+ ವರುಣನ ಕೃಪೆಯಿಂದ ಉತ್ತಮ ಮಳೆಯಾಗುತ್ತಿದೆ. ಇದೇ ವೇಳೆ ಉಂಟಾಗಿರುವ ಅವಘಡಗಳಿಂದ ಜನರು ಆತಂಕಕ್ಕೆ ಒಳಗಾಗಿದ್ದು, ಜನಪ್ರತಿನಿಧಿಗಳಾದ ನಾವು ಅವರ ಜೊತೆ ನಿಲ್ಲೋಣ ಎಂದು ತಿಳಿಸಿದ್ದಾರೆ.
eesanje/url_46_60_12.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ವಾಗ್ದಾಳಿ
2
+ ಬೆಂಗಳೂರು,ಜು.28-ರಾಷ್ಟ್ರೀಯ ಯೂನಿಯನ್‌ ಬ್ಯಾಂಕ್‌ನಲ್ಲಿ ಹಣ ವರ್ಗಾವಣೆಯಾಗಿದ್ದರೆ ಅದರ ಹೊಣೆಗಾರಿಕೆಯನ್ನು ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊರಬೇಕೇ ವಿನಃ ಫಲಾಯನ ಮಾಡಬಾರದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ವಾಗ್ದಾಳಿ ನಡೆಸಿದ್ದಾರೆ.
3
+ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ ಅಕ್ರಮವಾಗಿ ಹಣ ವರ್ಗಾವಣೆಯಾಗಿದೆ. ಇದರ ಹೊಣೆಗಾರಿಕೆಯನ್ನು ನಿರ್ಮಲಾ ಸೀತಾರಾಮನ್‌ ಹೊರಬೇಕೆಂಬ ಸಿದ್ದರಾಮಯ್ಯನವರ ಹೇಳಿಕೆಗೆ ಕೆಂಡ ಕಾರಿದ ನಿರ್ಮಲಾ ಸೀತಾರಾಮನ್‌, ಅವರೊಬ್ಬರೇ ಚಾಣಾಕ್ಷ ಎಂದುಕೊಂಡಿದ್ದರೆ ಸಂತೋಷ ಎಂದು ವ್ಯಂಗ್ಯವಾಡಿದರು.
4
+ ನಾನು ಹೊಣೆ ಹೊತ್ತುಕೊಳ್ಳಬೇಕು ಎಂದು ಹೇಳುವುದಾದರೆ ಸಿದ್ದರಾಮಯ್ಯನವರು ಹಾಗೆಯೇ ಹೇಳಿಕೊಳ್ಳಲಿ. ಅದಕ್ಕೆ ನನ್ನದೇನೂ ಅಭ್ಯಂತರವಿಲ್ಲ. ಆದರೆ ಅವರೊಬ್ಬರೇ ಚಾಣಾಕ್ಷ ಎಂದುಕೊಂಡಿದ್ದರೆ ನನಗೂ ಅದರ ಹತ್ತು ಪಟ್ಟು ಚಾಣಾಕ್ಷತನ ತೋರಿಸಲು ಬರುತ್ತದೆ. ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನಾನು ಇದರ ಬಗ್ಗೆ ಮಾತನಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
5
+ ಮಹರ್ಷಿ ವಾಲೀಕಿ ನಿಗಮದಲ್ಲಿ ಹಗರಣ ನಡೆದಿಲ್ಲ ಎಂದಿದ್ದರೆ ಅವರ ಸಂಪುಟದ ಸಚಿವರು ಯಾವ ಕಾರಣಕ್ಕಾಗಿ ರಾಜೀನಾಮೆ ಕೊಟ್ಟಿದ್ದಾರೆ? ಮತ್ತೊಬ್ಬ ಶಾಸಕರು ಇ.ಡಿ. ವಿಚಾರಣೆಯನ್ನು ಏಕೆ ಎದುರಿಸುತ್ತಿದ್ದಾರೆ? ಎಂಬ ಸತ್ಯ ಸಿದ್ದರಾಮಯ್ಯನವರಿಗೆ ಗೊತ್ತಿಲ್ಲವೇ? ಎಂದು ಪ್ರಶ್ನಿಸಿದರು.
6
+ ನಿಗಮದಲ್ಲಿ ಅಕ್ರಮ ನಡೆದಿದ್ದರೂ ಸಿದ್ದರಾಮಯ್ಯ ಒಪ್ಪಿಕೊಳ್ಳದಿರುವುದು ನನಗೆ ಆಶ್ಚರ್ಯವೇನೂ ಉಂಟುಮಾಡಿಲ್ಲ. ಏಕೆಂದರೆ ಅದು ಎಸ್‌‍ಸಿ/ಎಸ್‌‍ಟಿ ಸಮುದಾಯಕ್ಕೆ ಸೇರಿದ ಹಣ ಎಂಬ ಧೋರಣೆಯಿಂದ ಇದನ್ನು ನಿರ್ಲಕ್ಷ ಮಾಡುತ್ತಿದ್ದಾರೆ. ಈ ವರ್ಗಗಳಿಗೆ ಅನ್ಯಾಯ ಆಗಿದೆ. ಹಣದ ದರೋಡೆಗೆ ಹೊಣೆಯಾರು ಎಂದು ನಿರ್ಮಲಾ ಸೀತಾರಾಮನ್‌ ಪ್ರಶ್ನಿಸಿದರು.
7
+ ಒಂದು ವೇಳೆ ರಾಷ್ಟ್ರೀಯ ಬ್ಯಾಂಕುಗಳಲ್ಲಿ ಅಧಿಕಾರಿಗಳು ತಪ್ಪು ಮಾಡಿದ್ದರೆ ಅವರ ವಿರುದ್ಧ ಖಂಡಿತವಾಗಿ ಕಾನೂನಿನ ಪ್ರಕಾರವೇ ಕ್ರಮ ಆಗುತ್ತದೆ. ಅವರನ್ನು ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ನೆಲದ ಕಾನೂನಿಗಿಂತ ಯಾರೊಬ್ಬರೂ ದೊಡ್ಡವರಲ್ಲ ಎಂದು ಹೇಳಿದರು.ಎಸ್‌‍ಸಿ/ಎಸ್‌‍ಟಿ ಸಮುದಾಯಕ್ಕೆ ಸೇರಿದ ಹಣವನ್ನು ದರೋಡೆ ಮಾಡಿದವರು ಯಾರು?, ಇದಕ್ಕೆ ಹೊಣೆಗಾರರು ಯಾರು? ಎಂಬುದು ಗೊತ್ತಾಗಬೇಕು. ಹಗರಣ ನಡೆದು ತಿಂಗಳಾಗಿದ್ದರೂ ಸಂಬಂಧಪಟ್ಟ ಸಚಿವರಿಂದ ರಾಜೀನಾಮೆ ನೀಡಲು ವಿಳಂಬ ಮಾಡಿದಿರಿ. ಅಧಿಕಾರಿಗಳ ತಲೆಗೆ ಕಟ್ಟಿ ಈ ಪ್ರಕರಣವನ್ನು ಮುಚ್ಚಿ ಹಾಕಲು ವ್ಯವಸ್ಥಿತ ಷಡ್ಯಂತ್ರ ನಡೆದಿತ್ತು ಎಂದು ಆರೋಪಿಸಿದರು.
8
+ ಹಣ ದೋಚಿದ್ದು ನಿಮ ಇಲಾಖೆ. ಈ ಹಣವು ಎಸ್‌‍ಸಿ/ಎಸ��‌‍ಟಿ ವರ್ಗಗಳಿಗೆ ಸೇರಿದ್ದು ಎಂಬುದನ್ನು ಮೊದಲು ಸಿದ್ದರಾಮಯ್ಯನವರು ಅರಿತುಕೊಂಡು ಮಾತನಾಡಲಿ. ಇದರಲ್ಲಿ ರಾಜಕಾರಣವನ್ನು ವಿಲೀನ ಮಾಡುವುದಾದರೆ ನಮಗೂ ಮಾಡಲು ಬರುತ್ತದೆ ಎಂದು ತಿರುಗೇಟು ನೀಡಿದರು.
9
+ ಎಸ್‌‍ಸಿ/ಎಸ್‌‍ಟಿ ವರ್ಗಗಳಿಗೆ ಸೇರಿದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿದ್ದೀರಿ. ನಿಮ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಮರೆಮಾಚಲು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಬೇಡಿ. ತಪ್ಪು ಮಾಡಿದ್ದರೆ ಒಪ್ಪಿಕೊಳ್ಳುವ ಸೌಜನ್ಯ ಇಲ್ಲವೇ ಎಂದು ಸೀತಾರಾಮನ್‌ ಕೆಂಡ ಕಾರಿದರು.
10
+ ಶನಿವಾರ ನಡೆದ ನೀತಿ ಆಯೋಗದ ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬರಬೇಕಿತ್ತು. ರಾಜ್ಯದ ಸಮಸ್ಯೆಗಳ ಬಗ್ಗೆ ಅಲ್ಲಿ ಬೆಳಕು ಚೆಲ್ಲಿದ್ದರೆ ಕರ್ನಾಟಕಕ್ಕೆ ಅನುಕೂಲವಾಗುತ್ತಿತ್ತು. ಅವರು ನೀತಿ ಆಯೋಗವನ್ನು ವೇದಿಕೆಯಾಗಿ ಬಳಸಿಕೊಳ್ಳುವ ಅವಕಾಶವನ್ನು ಕಳೆದುಕೊಂಡರು ಎಂದು ಅಸಮಾಧಾನ ಹೊರಹಾಕಿದರು.
11
+ ನೀತಿ ಆಯೋಗದ ಸಭೆಗೆ ಆಗಮಿಸಿದ್ದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮೈಕ್‌ ಆಫ್‌ ಮಾಡಲಾಗಿತ್ತು ಎಂಬುದು ಶುದ್ಧ ಸುಳ್ಳು. ನಾವೇಕೆ ಅವರ ಮೈಕ್‌ ಆಫ್‌ ಮಾಡಬೇಕು. ಅವರು ಸಭೆಗೆ ಬಂದಿದ್ದೇ ವಿವಾದ ಸೃಷ್ಟಿಸಲು. ಒಳಗೆ ಏನು ಹೇಳಬೇಕೆಂಬ ಅರಿವಿಲ್ಲದೆ ಹೊರಗೆ ಬಂದು ಏನೇನೋ ಸುಳ್ಳು ಆರೋಪಗಳನ್ನು ಮಾಡಿದರು. ಅವರ ಹೇಳಿಕೆಗೂ, ಮಾಡಿರುವ ಆರೋಪಕ್ಕೂ ಒಂದಕ್ಕೊಂದು ಸಂಬಂಧವಿಲ್ಲ ಎಂದು ಸೀತಾರಾಮನ್‌ ತಿಳಿಸಿದರು.
eesanje/url_46_60_2.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಕೇಂದ್ರ ಸರ್ಕಾರ ಕರ್ನಾಟಕದ ಆರ್ಥಿಕ ಬೆಳವಣಿಗೆ ಕುಗ್ಗಿಸುವ ಪ್ರಯತ್ನ ಮಾಡುತ್ತಿದೆ : ಡಿ.ಕೆ.ಸುರೇಶ್‌
2
+ ಬೆಂಗಳೂರು,ಜು.29– ಕರ್ನಾಟಕದ ಆರ್ಥಿಕ ಬೆಳವಣಿಗೆಯನ್ನು ಕುಗ್ಗಿಸುವ ಪ್ರಯತ್ನವನ್ನು ಕೇಂದ್ರಸರ್ಕಾರ ಹಿಂಬಾಗಿಲ ಮೂಲಕ ಮಾಡುತ್ತಿದೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಆರೋಪಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಬಜೆಟ್‌ನಲ್ಲಿ ಗುಜರಾತ್‌, ಉತ್ತರಪ್ರದೇಶ ಸೇರಿ ಉತ್ತರಭಾರತದ ರಾಜ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ದಕ್ಷಿಣ ಭಾರತದ ರಾಜ್ಯಗಳನ್ನು ಸಂಪೂರ್ಣ ನಿರ್ಲಕ್ಷಿಸಲಾಗಿದೆ.
3
+ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ನಿನ್ನೆ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಕರ್ನಾಟಕ ಸರ್ಕಾರದ ಮೇಲೆ ಗೂಬೆ ಕೂರಿಸುವ ಯತ್ನ ನಡೆಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
4
+ ಜಿಎಸ್‌‍ಟಿ ವ್ಯವಸ್ಥೆ ಜಾರಿಗೆ ಬಂದ ಬಳಿಕ ಇಲ್ಲಿನ ತೆರಿಗೆಯನ್ನು ಕೇಂದ್ರ ಸರ್ಕಾರ ಸಂಗ್ರಹಿಸಿಕೊಳ್ಳುತ್ತದೆ. ಅವರು ಕೊಟ್ಟಾಗ ನಾವು ತೆಗೆದುಕೊಳ್ಳಬೇಕು. ಇನ್ನು ಆದಾಯ ತೆರಿಗೆ ವ್ಯವಸ್ಥೆಯಲ್ಲಿ ನಾವು ಚಕಾರವನ್ನೇ ಎತ್ತುವಂತಿಲ್ಲ. ರಾಜ್ಯಸರ್ಕಾರ ಸಹಕಾರ ನೀಡುವುದಿಲ್ಲ ಎಂದು ದೂರುವ ಕೇಂದ್ರಸರ್ಕಾರ ಸದ್ದಿಲ್ಲದೆ 3.50 ಲಕ್ಷ ಕೋಟಿ ತೆರಿಗೆ ವಸೂಲಿ ಮಾಡಿಕೊಳ್ಳುವಾಗ ಸಹಕಾರದ ಬಗ್ಗೆ ಮಾತನಾಡುವುದಿಲ್ಲ ಎಂದರು.
5
+ ಕೇಂದ್ರ ಸರ್ಕಾರದ ಈ ತಾರತಮ್ಯವನ್ನು ವಿರೋಧಿಸಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ವಿಭಜನೆಯ ಅಭಿಪ್ರಾಯಗಳು ಮಡುಗಟ್ಟಿವೆ. ತಮಿಳುನಾಡಿನಲ್ಲಿ ಹಲವು ಬಾರಿ ಈ ಕುರಿತು ಚರ್ಚೆಯಾಗಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
6
+ ಕೇಂದ್ರದಿಂದ ರಾಜ್ಯಕ್ಕೆ ದೊರೆಯಬೇಕಾದ ಆರ್ಥಿಕ ನೆರವು ಯಾರ ಭಿಕ್ಷೆಯೂ ಅಲ್ಲ. ಯುಪಿಎ ಸರ್ಕಾರದ ಅವಧಿಯಲ್ಲಿ ಕಡಿಮೆ ಅನುದಾನ ಇತ್ತು ಎಂಬುದು ಹಾಸ್ಯಾಸ್ಪದ. ಆಗಿನ ಬಜೆಟ್‌ ಗಾತ್ರ ಮತ್ತು ಈಗಿನ ಬಜೆಟ್‌ ಗಾತ್ರಕ್ಕೂ ಅಜಗಜಾಂತರ ವ್ಯತ್ಯಾಸವಿದೆ ಎಂದು ಹೇಳಿದರು.
7
+ ದಕ್ಷಿಣ ಭಾರತದವನ್ನು ಮತ ಗಳಿಕೆಗಷ್ಟೇ ಕೇಂದ್ರ ಸರ್ಕಾರ ಬಳಸಿಕೊಳ್ಳುತ್ತಿದೆ. ಉಳಿದಂತೆ ಯಾವುದೇ ನೆರವು ನೀಡುತ್ತಿಲ್ಲ. ಕರ್ನಾಟಕದ ಬೆಳವಣಿಗೆಗೆ ಹಿಂಬಾಗಿಲ ಮೂಲಕ ಅಡ್ಡಿಪಡಿಸುವ ಪ್ರಯತ್ನವನ್ನು ನಿರಂತರವಾಗಿ ನಡೆಸಲಾಗುತ್ತಿದೆ.
8
+ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಒತ್ತಡದಲ್ಲಿ ಕೆಲಸ ಮಾಡುವುದು ಸರಿಯಲ್ಲ. ಮೊದಲು ಆರೋಗ್ಯದ ಕಡೆ ಗಮನ ಕೊಡಲಿ. ರಾಜ್ಯ ಮತ್ತು ದೇಶಕ್ಕೆ ಅವರ ಸೇವೆ ಅಗತ್ಯವಿದೆ. ಯಾರಿಗೇ ಆಗಲಿ ಕೆಟ್ಟದಾಗಬೇಕೆಂದು ಬಯಸುವ ವಂಶ ತಮದಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
9
+ ಮುಡಾ ಹಗರಣ ಬಿಜೆಪಿಯ ಕೂಸು. 1400 ನಿವೇಶನಗಳ ಹಂಚಿಕೆ ಪ್ರಕರಣವನ್ನು ನಮ ಸರ್ಕಾರ ತನಿಖೆ ನಡೆಸುತ್ತಿದೆ. ಅದೇ ರೀತಿ ವಾಲೀಕಿ ನಿಗಮದ ಹಗರಣಗಳು ಗಮನಕ್ಕೆ ಬರುತ್ತಿದ್ದಂತೆ ತನಿಖೆಗೆ ಆದೇಶಿಸಲಾಗಿದೆ.
10
+ ಬಿಜೆಪಿ ಮತ್��ು ಜೆಡಿಎಸ್‌‍ ಪಕ್ಷಗಳು ರಾಜ್ಯದಲ್ಲಿ ಕ್ರಿಯಾತಕ ವಿರೋಧಪಕ್ಷವಾಗಿ ಕೆಲಸ ಮಾಡಿದೆ. ಪ್ರಾದೇಶಿಕ ಪಕ್ಷಗಳಿಂದ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ ಎಂದು ಪ್ರತಿಪಾದಿಸಿದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಈಗ ತಮ ಮಾತನ್ನೇ ಬದಲಾಯಿಸಿದ್ದಾರೆ ಎಂದು ಡಿ.ಕೆ.ಸುರೇಶ್‌ ಆಕ್ಷೇಪಿಸಿದರು.
eesanje/url_46_60_3.txt ADDED
@@ -0,0 +1,9 @@
 
 
 
 
 
 
 
 
 
 
1
+ ಹೈಕಮಾಂಡ್‌ ಭೇಟಿಗೆ ನಾಳೆ ದೆಹಲಿಗೆ ಹಾರಲಿದ್ದಾರೆ ಸಿಎಂ, ಡಿಸಿಎಂ
2
+ ಬೆಂಗಳೂರು,ಜು.29-ಇತ್ತೀಚಿನ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಾಳೆ ದೆಹಲಿಗೆ ಭೇಟಿ ನೀಡುತ್ತಿದ್ದಾರೆ.
3
+ ಈ ಬಗ್ಗೆ ಖಚಿತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಪಕ್ಷ ಹಾಗೂ ಸರ್ಕಾರದ ಬಗ್ಗೆ ಚರ್ಚೆ ನಡೆಸಲು ಹೈಕಮಾಂಡ್‌ ನಾಯಕರು ಆಹ್ವಾನ ನೀಡಿದ್ದಾರೆ. ನಾನು, ಉಪಮುಖ್ಯಮಂತ್ರಿಯವರು ದೆಹಲಿಗೆ ಭೇಟಿ ನೀಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.
4
+ ಮುಡಾ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ ಮತ್ತು ಜೆಡಿಎಸ್‌‍ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ನಡೆಸುತ್ತಿದೆ. ಇದರ ಜೊತೆಗೆ ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್‌‍ ನೀಡಲು ಮುಂದಾಗಿದೆ. ಈ ಮೂಲಕ ಕರ್ನಾಟಕದಲ್ಲಿರುವ ಕಾಂಗ್ರೆಸ್‌‍ ಸರ್ಕಾರವನ್ನು ಅಸ್ಥಿರಗೊಳಿಸಲು ನಡೆಯುತ್ತಿರುವ ಹುನ್ನಾರ ಎಂಬ ಟೀಕೆಗಳು ಕೇಳಿಬಂದಿವೆ.
5
+ ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌‍ ಹೈಕಮಾಂಡ್‌ ರಾಜ್ಯ ನಾಯಕರ ಜೊತೆ ಚರ್ಚೆ ನಡೆಸಲು ಮುಂದಾಗಿದೆ. ಒಂದು ವೇಳೆ ಜಾರಿ ನಿರ್ದೇಶನಾಲಯ ನೋಟಿಸ್‌‍ ನೀಡಿದರೆ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ರಣನೀತಿ ರೂಪಿಸುವ ಸಲುವಾಗಿ ಹೈಕಮಾಂಡ್‌ ಸಮಾಲೋಚನೆ ನಡೆಸಲಿದೆ ಎಂದು ತಿಳಿದುಬಂದಿದೆ.
6
+ ಈಗಾಗಲೇ ಜಾರ್ಖಂಡ್‌, ದೆಹಲಿಯ ಮುಖ್ಯಮಂತ್ರಿಗಳನ್ನು ಇ.ಡಿ. ಬಳಸಿಕೊಂಡು ಕೇಂದ್ರ ಸರ್ಕಾರ ಇಕ್ಕಟ್ಟಿಗೆ ಸಿಲುಕಿಸಿದೆ. ಈಗ ಕಾಂಗ್ರೆಸ್‌‍ ಆಡಳಿತವಿರುವ ಕರ್ನಾಟಕದಲ್ಲಿ ಇದೇ ತಂತ್ರವನ್ನು ನಡೆಸಲು ಮುಂದಾಗಿದೆ.
7
+ ಇದಕ್ಕೆ ತಿರುಗೇಟು ನೀಡುವ ನಿಟ್ಟಿನಲ್ಲಿ ಯಾವ ರೀತಿಯ ಕಾರ್ಯತಂತ್ರಗಳನ್ನು ಅನುಸರಿಸಬೇಕು?, ಪಕ್ಷದಲ್ಲಿ ಒಗ್ಗಟ್ಟನ್ನು ಯಾವ ರೀತಿ ಕಾಯ್ದುಕೊಳ್ಳಬೇಕು? ಎಂಬುದರ ಬಗ್ಗೆಯೂ ಹೈಕಮಾಂಡ್‌ ಸೂಚನೆ ನೀಡಲಿದೆ ಎಂದು ತಿಳಿದುಬಂದಿದೆ.
8
+ ಬಿಜೆಪಿ ಮತ್ತು ಜೆಡಿಎಸ್‌‍ನ ಕೆಲ ನಾಯಕರು ಡಿಸೆಂಬರ್‌ ವೇಳೆಗೆ ಕಾಂಗ್ರೆಸ್‌‍ ಸರ್ಕಾರ ಪತನವಾಗಲಿದೆ. ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ವದಂತಿಗಳು ತೆರೆಮರೆಯಲ್ಲಿ ಹರಿದಾಡುತ್ತಿವೆ. ಈ ಕುರಿತು ಕೆಲವು ಕಾರ್ಯಾಚರಣೆಗಳು ಸದ್ದಿಲ್ಲದೆ ನಡೆಯುತ್ತಿರುವ ಮುನ್ಸೂಚನೆಯೂ ದೊರೆತಿದೆ.
9
+ ಈ ಹಿನ್ನೆಲೆಯಲ್ಲಿ ಅನುಸರಿಸಬೇಕಾದ ಎಚ್ಚರಿಕೆ ಕ್ರಮಗಳ ಬಗ್ಗೆ ಹೈಕಮಾಂಡ್‌ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಜೊತೆ ಚರ್ಚೆ ನಡೆಸಲಿದೆ. ಎರಡು ದಿನಗಳ ಭೇಟಿಗಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ನಾಳೆ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳುತ್ತಿದ್ದಾರೆ.
eesanje/url_46_60_4.txt ADDED
@@ -0,0 +1,8 @@
 
 
 
 
 
 
 
 
 
1
+ ಬಿಜೆಪಿ-ಜೆಡಿಎಸ್‌‍ ಪಾದಯಾತ್ರೆಗೆ ಅನುಮತಿ ನೀಡುವುದಿಲ್ಲ : ಗೃಹಸಚಿವ ಪರಮೇಶ್ವರ್‌
2
+ ಬೆಂಗಳೂರು,ಜು.29-ಮುಡಾ, ವಾಲ್ಮೀಕಿ ಸೇರಿದಂತೆ ವಿವಿಧ ಪ್ರಕರಣವನ್ನು ವಿರೋಧಿಸಿ ಬಿಜೆಪಿ-ಜೆಡಿಎಸ್‌‍ ಪಕ್ಷಗಳು ನಡೆಸುವ ಪಾದಯಾತ್ರೆಗೆ ಅನುಮತಿ ನೀಡುವುದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರು ಪಾದಯಾತ್ರೆ ಮಾಡಿಕೊಳ್ಳಲಿ. ಆದರೆ ಅಧಿಕೃತವಾಗಿ ನಾವು ಅನುಮತಿ ನೀಡುವುದಿಲ್ಲ. ಈ ಹಿಂದೆ ನಾವು ಪಾದಯಾತ್ರೆ ಮಾಡುವಾಗಲೂ ಅವರು ಅನುಮತಿ ನೀಡಿರಲಿಲ್ಲ. ಅವರ ಪಾದಯಾತ್ರೆಗೆ ತಡೆ ಮಾಡುವುದಿಲ್ಲ. ಅಗತ್ಯವಾದ ವ್ಯವಸ್ಥೆ ಮಾಡಿಕೊಡುತ್ತೇವೆ ಎಂದು ತಿಳಿಸಿದರು.
3
+ ಜೆಡಿಎಸ್‌‍-ಬಿಜೆಪಿಗೆ ಪ್ರತಿಯಾಗಿ ಕಾಂಗ್ರೆಸ್‌‍ನಿಂದ ಹೋರಾಟ ನಡೆಸುವ ಬಗ್ಗೆ ಕೆಪಿಸಿಸಿ ಅಧ್ಯಕ್ಷರು ರಣನೀತಿ ರೂಪಿಸುತ್ತಾರೆ. ರಾಜಕೀಯವಾಗಿ ನಾವೂ ಕೂಡ ಉತ್ತರ ನೀಡಲೇಬೇಕಿದೆ. ವಿಪಕ್ಷಗಳು ಇದನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿದೆ. ನಾವು ರಾಜಕೀಯವಾಗಿಯೇ ಮಾತನಾಡುತ್ತೇವೆ ಎಂದರು.
4
+ ಮುಡಾ ನಿವೇಶನ ಹಂಚಿಕೆ ಕಾನೂನು ಪ್ರಕಾರವಾಗಿಯೇ ನಡೆದಿದೆ. ಸೈಟುಗಳ ಹಂಚಿಕೆಯಲ್ಲಿ ನಿಯಮ ಪಾಲನೆಯಾಗಿಲ್ಲ ಎಂಬ ಅಭಿಪ್ರಾಯ ಬಂದಿದ್ದರಿಂದಲೇ ತನಿಖೆಗೆ ನ್ಯಾಯಾಂಗ ಆಯೋಗ ರಚಿಸಲಾಗಿದೆ. ವರದಿಯ ಬಳಿಕ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಬಿಜೆಪಿಯವರು ಅಲ್ಲಿಯವರೆಗೂ ಸಮಾಧಾನದಿಂದ ಇರಲಾಗದೇ ರಾಜಕೀಯ ಮಾಡುತ್ತಿದ್ದಾರೆ ಎಂದು ಪರಮೇಶ್ವರ್‌ ವಾಗ್ದಾಳಿ ನಡೆಸಿದರು.
5
+ ಖಾಸಗಿ ಕಂಪನಿಗಳು ರಾಜ್ಯದಿಂದ ಹೊರಹೋಗುತ್ತಿವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಗೃಹಸಚಿವರು, ಖಾಸಗಿ ಕಂಪನಿಗಳು ಅವರದ್ದೇ ಆದ ಕೆಲವು ಆಯ್ಕೆಗಳನ್ನಿಟ್ಟುಕೊಂಡು ಬಂದಿರುತ್ತಾರೆ. ಇಲ್ಲಿಗೆ ಬಂದು ನಂತರ ಅವರಿಗೆ ಬೇಕಾದ ಕಡೆ ಹೋಗುತ್ತಾರೆ ಎಂದು ಸ್ಪಷ್ಟನೆ ನೀಡಿದರು. ಬಿಬಿಎಂಪಿ ಕಸದ ಲಾರಿ ಅಪಘಾತವಾಗಿ ನಿನ್ನೆ ರಾತ್ರಿ ಇಬ್ಬರು ಮೃತಪಟ್ಟಿದ್ದಾರೆ. ಇದು ದುರದೃಷ್ಟಕರ ಘಟನೆ. ಬಿಬಿಎಂಪಿಯ ವತಿಯಿಂದ ಮೃತರ ಕುಟುಂಬಗಳಿಗೆ ಆರ್ಥಿಕ ನೆರವು ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು.
6
+ ರೈಲ್ವೆ ನಿಲ್ದಾಣದಲ್ಲಿ ಪತ್ತೆಯಾದ ಮಾಂಸದ ಮಾದರಿಯನ್ನು ಪಡೆದು ಪ್ರಯೋಗಾಲಯದಲ್ಲಿ ಪರಿಶೀಲನೆ ನಡೆಸಲಾಗಿದೆ. ಅದು ನಾಯಿ ಮಾಂಸ ಅಲ್ಲ ಎಂದು ವರದಿ ಬಂದಿದೆ. ಸುಳ್ಳು ಆರೋಪ ಮಾಡಿದ ಪುನೀತ್‌ ಕೆರಹಳ್ಳಿ ಹಾಗೂ ಸಂಗಡಿಗರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ರಾಜಸ್ಥಾನದಿಂದ ಮಾಂಸ ತರಿಸಿಕೊಂಡಿರುವವರು ತಪ್ಪು ಮಾಡಿದ್ದು ಸಾಬೀತಾದರೆ ಅವರ ವಿರುದ್ಧವೂ ಕ್ರಮ ಕೈಗೊಳ್ಳುತ್ತೇವೆ.
7
+ ಕೇಂದ್ರ ಸರ್ಕಾರ ತನ್ನ ಬಜೆಟ್‌ನಲ್ಲಿ ರಾಜ್ಯಕ್ಕೆ ನೆರವು ನೀಡದೇ ಅನ್ಯಾಯ ಮಾಡಿದೆ. ಆಂಧ್ರ ಪ್ರದೇಶಕ್ಕೆ 15 ಸಾವಿರ ಕೊಟ್ಟಿದೆ. ಇದಕ್ಕೆ ನಮ ವಿರೋಧವಿಲ್ಲ. ಆದರೆ ಅನುದಾನ ಹಂಚಿ��ೆ ಸಮಾನಾಂತರವಾಗಿರಬೇಕು. ನಮ ಪಾಲಿಗಾಗಿ ಸುಪ್ರೀಂಕೋರ್ಟ್‌ ಮೆಟ್ಟಿಲೇರುವ ಪರಿಸ್ಥಿತಿ ಬಂದಿತ್ತು. ಭದ್ರಾ ಮೇಲ್ದಂಡೆ ಸೇರಿದಂತೆ ಯಾವುದಕ್ಕೂ ಅನುದಾನ ನೀಡದೇ ಮಲತಾಯಿ ಧೋರಣೆ ಅನುಸರಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
8
+ ನೀತಿ ಆಯೋಗ ಸಭೆಯನ್ನು ಬಹಿಷ್ಕರಿಸಿದ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನಡುವೆ ಸಂಬಂಧ ಚೆನ್ನಾಗಿರಬೇಕು. ಕೇಂದ್ರ ಸರ್ಕಾರ ಆಡಳಿತವನ್ನು ಸೌಹಾರ್ದಯುತವಾಗಿ ನಡೆಸಿಕೊಡಬೇಕು. ಮಮತಾಬ್ಯಾನರ್ಜಿ ನೀತಿ ಆಯೋಗದ ಸಭೆಗೆ ಹೋಗಿ ಸಭಾತ್ಯಾಗ ಮಾಡಿದ್ದಾರೆ. ನಾವು ಭಾಗವಹಿಸಿದ್ದರೂ ಅದೇ ರೀತಿ ಮಾಡಬೇಕಿತ್ತೇ? ಎಂದು ಪರಮೇಶ್ವರ್‌ ಪ್ರಶ್ನಿಸಿದರು.
eesanje/url_46_60_5.txt ADDED
@@ -0,0 +1,9 @@
 
 
 
 
 
 
 
 
 
 
1
+ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ : ನಿರಂತರ ಮಳೆಗೆ ದುಸ್ತರವಾದ ಜನಜೀವನ
2
+ ಬೆಂಗಳೂರು,ಜು.29- ದಕ್ಷಿಣ ಕನ್ನಡ, ಉತ್ತರಕನ್ನಡ, ಮಲೆನಾಡು, ಉತ್ತರಕರ್ನಾಟಕ ಭಾಗಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಹಾಮಳೆಗೆ ಜನರ ಬದುಕು ದುಸ್ತರವಾಗಿದೆ. ಸೇತುವೆಗಳು ಮುಳುಗಿ, ಸಂಪರ್ಕ ಕಡಿತಗೊಂಡಿದೆ. ನೂರಾರು ಗ್ರಾಮಗಳು ನೀರಿನಿಂದ ಆವೃತವಾಗಿವೆ. ಸಾವಿರಾರು ಜನರನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ.
3
+ ಕೃಷ್ಣ, ಮಲಪ್ರಭಾ, ಘಟಪ್ರಭಾ, ವೇದಗಂಗ, ದೂದ್‌ಗಂಗ ನದಿಗಳ ಭೋರ್ಗರೆತಕ್ಕೆ ನೂರಾರು ಗ್ರಾಮಗಳು ಮುಳುಗಡೆಯಾಗಿ ಜನಜೀವನ ಚಿಂತಾಜನಕವಾಗಿದೆ. ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ನಿರಂತರವಾಗಿ ಧಾರಾಕಾರ ಮಳೆಯಾಗುತ್ತಿದ್ದು, ಕೃಷ್ಣಾನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿ ಸಾವಿರಾರು ಜನ ಸಂತ್ರಸ್ತರಾಗಿದ್ದಾರೆ.
4
+ ಕೃಷ್ಣೆಯ ಅಬ್ಬರಕ್ಕೆ ಉತ್ತರ ಕರ್ನಾಟಕ ತತ್ತರಿಸಿದೆ ಘಟಪ್ರಭಾ ಅಬ್ಬರಕ್ಕೆ ಬೆಳಗಾವಿ, ಗೋಕಾಕ್‌, ಹಲವು ಗ್ರಾಮಗಳು ಮುಳುಗಿ ಹೋಗಿದ್ದು, ಸಾವಿರಾರು ಜನರನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರ ಮಾಡಲಾಗಿದೆ.ಹಿಡ್ಕಲ್‌ ಡ್ಯಾಮ್‌ ಮತ್ತು ನವಿಲುತೀರ್ಥ ಡ್ಯಾಮ್‌ಗಳಿಂದ ನೀರು ಬಿಡುಗಡೆ ಮಾಡಿರುವುದರಿಂದ ನದಿಪಾತ್ರದ ಗ್ರಾಮಗಳು ಮತ್ತು ಹೊಲಗದ್ದೆಗಳು ಜಲಾವೃತಗೊಂಡಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.
5
+ ಕೃಷ್ಣನದಿ ಪ್ರವಾಹ, ಚಿಕ್ಕೋಡಿ, ಅಥಣಿ, ರಾಯಭಾಗ ತಾಲ್ಲೂಕುಗಳನ್ನು ಪೇಚಿಗೆ ಸಿಲುಕಿಸಿದೆ. ಮುಸುಗುಪ್ಪಿ ಮತ್ತು ಅಡಿಭಟ್ಟಿ ಗ್ರಾಮಗಳು ಸಂಪೂರ್ಣ ನೀರಿನಿಂದ ಆವೃತವಾಗಿ ನೂರಾರು ಮನೆಗಳು, ಸಾವಿರಾರು ಎಕರೆ ಜಮೀನು ನೀರಿನಿಂದ ಮುಳುಗಡೆಯಾಗಿದೆ.
6
+ ಗೋಕಾಕ್‌ನಗರ ಕೊನ್ನೂರು ಪಟ್ಟಣ ಮಳೆ ನೀರಿನಿಂದ ತುಂಬಿಹೋಗಿದ್ದು ಜನರನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಮಲಪ್ರಭಾ ನದಿ ಹಾಗೂ ನವಿಲುತೀರ್ಥ ಜಲಾಶಯದಿಂದ ನದಿಗೆ ಭಾರೀ ಪ್ರಮಾಣದ ನೀರನ್ನು ಹರಿಯಬಿಟ್ಟಿದ್ದರಿಂದ ರಾಮದುರ್ಗ ನಗರದ ಬಳಿ ತೇರ್‌ಬಜಾರ್‌ ಸೇತುವೆ ಮುಳುಗಿ ಸಂಪರ್ಕ ಕಡಿತಗೊಂಡು ಹಲವು ಕುಟುಂಬಗಳ ಸ್ಥಳಾಂತರಕ್ಕೂ ಸಮಸ್ಯೆಯಾಗಿದೆ.
7
+ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಖಾನಪುರ ತಾಲ್ಲೂಕಿಗೆ ಭೇಟಿ ನೀಡಿ ನೆರೆ ವೀಕ್ಷಣೆ ಮಾಡಿ ಜನತೆಯ ಸಮಸ್ಯೆ ಆಲಿಸಿದ್ದಾರೆ. ಜಿಲ್ಲಾಧಿಕಾರಿಗಳು ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಿ ಜನರಿಗೆ ಮೂಲಭೂತ ಸೌಲಭ್ಯ ಕಲ್ಪಿಸಿರುವ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.
8
+ ಜನರನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರ ಮಾಡಲಾಗಿದೆ. ಚಿಕ್ಕೋಡಿ ತಾಲ್ಲೂಕಿನ ಯಡಿಯೂರು ವೀರಭದ್ರೇಶ್ವರ ದೇವಸ್ಥಾನ ಸಂಪೂರ್ಣ ಜಲಾವೃತವಾಗಿದೆ.ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದ್ದರೂ ಪಶ್ಚಿಮಘಟ್ಟದಲ್ಲಿರುವ ನದಿಗಳ ಅಬ್ಬರ ಕಡಿಮೆಯಾಗಿಲ್ಲ.
9
+ ಕಾವೇರಿ ಜಲಾನಯನ ಪ್ರದೇಶ��ಲ್ಲಿ ಉತ್ತಮ ಮಳೆಯಾಗಿ ಜಲಾಶಯಗಳು ಭರ್ತಿಯಾಗಿ ಭಾರೀ ಪ್ರಮಾಣದಲ್ಲಿ ನದಿಗೆ ನೀರನ್ನು ಹರಿಬಿಟ್ಟಿರುವುದರಿಂದ ಬೆಳಗೊಳದ ಎಡಮುರಿ, ಬಲಮುರಿ, ಕಾರೇಪುರ ಸಂರಕ್ಷಿತ ಅರಣ್ಯ ಪ್ರದೇಶ ಸೇರಿ ರಂಗನತಿಟ್ಟು ಪಕ್ಷಿಧಾಮ ಜಲಾವೃತವಾಗಿದೆ. ನದಿ ತೀರದ ಕೆಲವು ಗ್ರಾಮಗಳ ವಸತಿ ಪ್ರದೇಶಗಳಿಗೆ ನೀರು ನುಗ್ಗಿ ಸಮಸ್ಯೆಯಾಗಿದೆ.
eesanje/url_46_60_6.txt ADDED
@@ -0,0 +1,8 @@
 
 
 
 
 
 
 
 
 
1
+ ಮೂಗಿನಲ್ಲಿ ರಕ್ತಸ್ರಾವ : ಆಸ್ಪತ್ರೆಯಿಂದ ಕೇಂದ್ರ ಸಚಿವ ಕುಮಾರಸ್ವಾಮಿ ಡಿಸ್ಚಾರ್ಜ್
2
+ ಬೆಂಗಳೂರು:ಮೂಗಿನಲ್ಲಿ ರಕ್ತಸ್ರಾವ ಉಂಟಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಚಿಕಿತ್ಸೆ ಪಡೆದ ನಂತರ ಜೆಪಿ ನಗರದ ತಮ್ಮ ನಿವಾಸಕ್ಕೆ ವಾಪಸ್ಸಾದರು.
3
+ ನಗರ ಖಾಸಗಿ ಹೋಟೆಲ್ ನಲ್ಲಿ ಜೆಡಿಎಸ್ ಮತ್ತು ಜೆಡಿಎಸ್ ಸಮನ್ವಯ ಸಮಿತಿ ಸಭೆಯಲ್ಲಿ ಪಾಲ್ಗೊಂಡ ನಂತರ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೊಂದಿಗೆ ಮಾಧ್ಯಮಗಳ ಜತೆ ಮಾತನಾಡುವ ಸಂದರ್ಭದಲ್ಲಿ ಸಚಿವರಿಗೆ ಮೂಗಿನಲ್ಲಿ ರಕ್ತಸ್ರಾವ ಉಂಟಾಯಿತು.
4
+ ಕೂಡಲೇ ಖಾಸಗಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದ ಸಚಿವರನ್ನು ವೈದ್ಯರು ಕೆಲ ಗಂಟೆಗಳ ಕಾಲ ನಿಗಾದಲ್ಲಿ ಇರಿಸಿ ಅವಲೋಕನ ಮಾಡಿದರು. ಬಳಿಕ ಸೂಕ್ತ ಚಿಕಿತ್ಸೆ ನೀಡಿ ಅವರನ್ನು ಮನೆಗೆ ಕಳಿಸಿಕೊಟ್ಟರು.
5
+ ಯಾರಿಗೂ ಆತಂಕ ಬೇಡಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ತಮ್ಮ ನಿವಾಸಕ್ಕೆ ಹೊರಡುವ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ ಅವರು, ಯಾರು ಆತಂಕಕ್ಕೆ ಒಳಗಾಗುವುದು ಅವಶ್ಯಕತೆ ಇಲ್ಲ. ನಮ್ಮ ಕಾರ್ಯಕರ್ತರು ಅಭಿಮಾನಿಗಳಿಗೆ ಮನವಿ ಮಾಡೋದು ಇಷ್ಟೇ.. ನಿಮ್ಮಗಳ ಶುಭ ಹಾರೈಕೆ ಇರುವರೆಗೆ, ಭಗವಂತನ ಕೃಪೆ, ತಂದೆ ತಾಯಿ ಆಶೀರ್ವಾದ ಇರುವವರೆಗೆ ಯಾವುದೇ ಅಪಾಯವಿಲ್ಲ ಎಂದರು.
6
+ ಮೂರು ಬಾರಿ ನನಗೆ ಹೃದಯ ಕವಾಟನ್ನು ಬದಲಾವಣೆ ಮಾಡಲಾಗಿದೆ. ಬ್ಲಡ್ ತಿನ್ನರ್ ಮಾತ್ರೆ ತೆಗೆದುಕೊಳ್ಳುತ್ತೇನೆ. ರಕ್ತ ಗಟ್ಟಿ ಆಗಬಾರದು ಎನ್ನುವ ಕಾರಣಕ್ಕೆ ಈ ಮಾತ್ರೆ ತೆಗೆದುಕೊಳ್ಳುತ್ತೇನೆ. ಒತ್ತಡ ಜಾಸ್ತಿಯಾದಾಗ, ವಿಶ್ರಾಂತಿ ಇಲ್ಲದೆ ಇದ್ದಾಗ ನನಗೆ ಮೂಗಿನಿಂದ ರಕ್ತಸ್ರಾವ ಆಗುವುದು ಸಹಜ. ಕೆಲಸದ ಒತ್ತಡ ಕಡಿಮೆ ಮಾಡಿಕೊಳ್ಳಿ ಎಂದು ವೈದ್ಯರು ಸಲಹೆ ನೀಡಿದ್ದಾರೆ. ನನಗೆ ಸಿಕ್ಕಿರುವ ಸಮಯ ಒಂದೊಂದು ಕ್ಷಣವು ಮುಖ್ಯ. ಜನರಿಗೆ ಎನಾದರೂ ಒಂದು ಸಹಾಯ ಮಾಡಬೇಕು. ಕೇಂದ್ರದಿಂದ ರಾಜ್ಯಕ್ಕೆ ಕೊಡುಗೆ ಕೊಡಬೇಕು ಎಂದರು ಅವರು.
7
+ ಜನರು ನಂಬಿಕೆ ಇಟ್ಟು ದೆಹಲಿಗೆ ಕಳಿಸಿದ್ದಾರೆ. ಜನತೆ ವಿಶ್ವಾಸಕ್ಕೆ ಧಕ್ಕೆ ತರುವುದಿಲ್ಲ. ಇದೊಂದು ತಾತ್ಕಾಲಿಕ ಸಮಸ್ಯೆ ಅಷ್ಟೇ. ಯಾರು ಆತಂಕಪಡುವುದು ಬೇಡ. ವಿಶ್ರಾಂತಿ ತೆಗೆದುಕೊಳ್ಳಬೇಕು ಎಂದು ಅವರು ಸಲಹೆ ಮಾಡಿದ್ದಾರೆ. 92 ವರ್ಷಗಳ ದೇವೇಗೌಡರು ನಾಳೆಯ ದಿನ ಸಂಸತ್ತಿನಲ್ಲಿ ಕಾವೇರಿ ವಿಚಾರ ಪ್ರಸ್ತಾಪ ಮಾಡಲಿದ್ದಾರೆ. ಡಿಎಂಕೆ ಮತ್ತು ಇತರೆ ಸದಸ್ಯರು ಅಡ್ಡಿಪಡಿಸುವ ಕೆಲಸ ಮಾಡುತ್ತಾರೆ. ಆ ಸಂದರ್ಭದಲ್ಲಿ ನಾನು ಅವರ ಜೊತೆಗೆ‌ ಇರಬೇಕು ಎಂದು ಕೇಂದ್ರ ಸಚಿವರು ಹೇಳಿದರು.
8
+ ರಾತ್ರಿ ನನ್ನ ದೇಹದಲ್ಲಿನ ಏರುಪೇರು ನೋಡಿಕೊಂಡು ದೆಹಲಿ ಪ್ರವಾಸ ನಿರ್ಧಾರ ಮಾಡುತ್ತೇನೆ. ವೈದ್ಯರಿಗೂ ಈ ಬಗ್ಗೆ ಮಾಹಿತಿ ನೀಡುತ್ತೇನೆ ಎಂದ ಅವರು; ಪಾದಯಾತ್ರೆ ಮಾಡದೇ ಇರುವುದಕ್ಕೆ ನನ್ನ ಆರೋಗ್ಯ ���ಂಪೂರ್ಣ ಕೆಟ್ಟಿಲ್ಲ. ಅದಕ್ಕೆ ಇನ್ನೂ ಒಂದು ವಾರ ಸಮಯ ಇದೆ. ನಾನು ಇಲ್ಲದಿದ್ದರೆ ನಿಖಿಲ್ ಕುಮಾರಸ್ವಾಮಿ ನಮ್ಮ ಶಾಸಕರ ಜೊತೆ ಪಾದಯಾತ್ರೆ ಮಾಡುತ್ತಾರೆ. ಈ ಬಗ್ಗೆ ಕಾರ್ಯಕರ್ತರಿಗೆ ಆತಂಕ ಬೇಡ ಎಂದು ಕುಮಾರಸ್ವಾಮಿ ಅವರು ಹೇಳಿದರು. ಈ ಸಂದರ್ಭದಲ್ಲಿ ನಿಖಿಲ್ ಕುಮಾರಸ್ವಾಮಿ, ಪಕ್ಷದ ಶಾಸಕರು, ಮಾಜಿ ಶಾಸಕರು ಇದ್ದರು
eesanje/url_46_60_7.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿಲ್ಲ, ಕಾಂಗ್ರೆಸ್ ತಪ್ಪು ಪ್ರಚಾರ ಮಾಡುತ್ತಿದೆ : ನಿರ್ಮಲಾ
2
+ ಬೆಂಗಳೂರು,ಜು.28-ಪ್ರಸಕ್ತ ಸಾಲಿನ ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಯಾವುದೇ ರೀತಿಯ ಅನ್ಯಾಯ ಮಾಡಿಲ್ಲ ಎಂದು ಪುನರುಚ್ಚರಿಸಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ರಾಜ್ಯಸರ್ಕಾರ ಆಧಾರ ರಹಿತ ಅಂಕಿಅಂಶಗಳನ್ನು ನೀಡಿ ತಪ್ಪು ಪ್ರಚಾರ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
3
+ ತಮ ಪತ್ರಿಕಾಗೋಷ್ಠಿಯುದ್ದಕ್ಕೂ ಹಿಂದಿನ ಯುಪಿಎ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ರಾಜ್ಯಕ್ಕೆ ನೀಡಿರುವ ಅಂಕಿ ಅಂಶಗಳನ್ನು ದಾಖಲೆಗಳ ಸಮೇತ ವಿವರ ನೀಡಿದ ನಿರ್ಮಲಾ ಸೀತಾರಾಮನ್‌, ರಾಜ್ಯಸರ್ಕಾರ ಅರೆಬೆಂದ ದಾಖಲೆಗಳನ್ನು ಮುಂದಿಟ್ಟುಕೊಂಡು ಜನರಿಗೆ ತಪ್ಪು ಮಾಹಿತಿ ನೀಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.
4
+ ಕೇಂದ್ರದ ಬಜೆಟ್‌ನಲ್ಲಿ ಕರ್ನಾಟಕ ಮಾತ್ರವಲ್ಲದೆ ಯಾವುದೇ ರಾಜ್ಯಕ್ಕೂ ನಾವು ಅನ್ಯಾಯ ಮಾಡಿಲ್ಲ. ಆಯಾ ರಾಜ್ಯಗಳಿಗೆ ನ್ಯಾಯಬದ್ಧವಾಗಿ ಸಿಗಬೇಕಾದ ಅನುದಾನವನ್ನು ನೀಡಿದ್ದೇವೆ. ಯಾವುದೇ ರೀತಿಯ ತಾರತಮ್ಯವೆಸಗಿಲ್ಲ ಎಂದು ಸ್ಪಷ್ಟಪಡಿಸಿದರು.
5
+ ಹಿಂದಿನ ಯುಪಿಎ ಸರ್ಕಾರ ಕರ್ನಾಟಕಕ್ಕೆ ಎರಡು ಅವಧಿಯಲ್ಲಿ 81,790 ಸಾವಿರ ಕೋಟಿ ಅನುದಾನವನ್ನು ರಾಜ್ಯಕ್ಕೆ ನೀಡಿತ್ತು. ಎನ್‌ಡಿಎ ಸರ್ಕಾರ ಎರಡು ಅವಧಿಯಲ್ಲಿ ರಾಜ್ಯಕ್ಕೆ 2,95,817 ಕೋಟಿ ಅನುದಾನವನ್ನು ಹಂಚಿಕೆ ಮಾಡಿದೆ. ಯುಪಿಎ, ಎನ್‌ಡಿಎ ಗೆ ಹೋಲಿಕೆ ಮಾಡಿದರೆ ನಾವು ನೀಡಿರುವುದು ಮೂರು ಪಟ್ಟು ಹೆಚ್ಚಳವಾಗುತ್ತದೆ ಎಂದು ಸಮರ್ಥನೆ ಮಾಡಿಕೊಂಡರು.
6
+ ಯುಪಿಎ ಅವಧಿಯಲ್ಲಿ ವಿವಿಧ ಇಲಾಖೆಗಳಲ್ಲಿ 66 ಸಾವಿರ ಕೋಟಿ ಅನುದಾನವನ್ನು ಹಂಚಿಕೆ ಮಾಡಲಾಗಿತ್ತು. 2024ರ ಒಂದೇ ವರ್ಷದಲ್ಲಿ ಎನ್‌ಡಿಎ ಸರ್ಕಾರ 45,485 ಕೋಟಿ ತೆರಿಗೆ ಹಂಚಿಕೆ ಮಾಡಿದೆ. ಇದೇ ವೇಳೆ ಯುಪಿಎ 60,799 ಕೋಟಿ ನೀಡಿದರೆ, ಎನ್‌ಡಿಎ ಸರ್ಕಾರ ಕರ್ನಾಟಕಕ್ಕೆ ಒಟ್ಟು 2,36,955 ಕೋಟಿ ತೆರಿಗೆ ಹಂಚಿಕೆ ಮಾಡಿದೆ. ಇದು ದಾಖಲೆಗಳಲ್ಲಿರುವ ಅಂಕಿ ಅಂಶಗಳು. ಹಾಗಾದರೆ ಕರ್ನಾಟಕಕ್ಕೆ ಅನ್ಯಾಯವಾಗುವ ಮಾತು ಎಲ್ಲಿಂದ ಬರುತ್ತದೆ ಎಂದು ಪ್ರಶ್ನಿಸಿದರು.
7
+ ರೈಲ್ವೆ ಯೋಜನೆಯಡಿ ಕರ್ನಾಟಕಕ್ಕೆ ಯುಪಿಎ ಕೊಟ್ಟಿದ್ದು ಕೇವಲ 834 ಕೋಟಿ ರೂ. ಅನುದಾನ. ಈ ಅವಧಿಯಲ್ಲೇ ನಾವು ರಾಜ್ಯಕ್ಕೆ ವಿವಿಧ ರೈಲ್ವೆ ಯೋಜನೆಗಳಿಗೆ ಒಟ್ಟು 7,559 ಕೋಟಿ ಅನುದಾನವನ್ನು ಮೀಸಲಿಟ್ಟಿದ್ದೇವೆ. 640 ರೈಲ್ವೆ ಮೇಲ್ಸೇತುವೆಗಳ ನಿರ್ಮಾಣ, 2 ವಂದೇ ಭಾರತ್‌ ರೈಲುಗಳ ಚಾಲನೆ, ತುಮಕೂರಿನಲ್ಲಿ ಮೊದಲ ಕಾರಿಡಾರ್‌ಗೆ ಪ್ರಧಾನಿ ಚಾಲನೆ, ರಾಜ್ಯದ 7 ನಗರಗಳನ್ನು ಸಾರ್ಟ್‌ ಸಿಟಿ ಯೋಜನೆಯಡಿ ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.
8
+ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ 1 ಲಕ್ಷ ಕೋಟಿಗೂ ಹೆಚ್ಚು ಹಣ ಕರ್ನಾಟಕಕ್ಕೆ ಬಂದಿದೆ. ಉಡಾನ್‌ ಯೋಜನೆಯಡಿ 7 ವಿಮಾನನಿಲ್ದಾಣಗಳು ರಾಜ್ಯದಲ್ಲಿ ಅನುಷ್ಠಾನಕ್ಕ�� ಬಂದಿವೆ. ಅನುಸಂಧಾನ್‌ ರಾಷ್ಟ್ರೀಯ ಸಂಶೋಧನೆ ಯೋಜನೆಯಡಿ ಬೆಂಗಳೂರಿಗೆ ಅನುಕೂಲವಾಗಲಿದೆ. ಇದೇ ರೀತಿ ಕೃಷಿ ವಲಯದ ವಿಸ್ತರಣೆಗೆ ಬೆಂಗಳೂರಿನ ಕೊಡುಗೆ ಅಪಾರ. ಬಾಹ್ಯಾಕಾಶ ವಲಯದಲ್ಲಿ ಅನುದಾನ ಕೊಟ್ಟಿದ್ದು, ಇದರಿಂದ ಈ ಸಂಸ್ಥೆಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
9
+ ಬೆಂಗಳೂರು ಸೇರಿ 14 ನಗರಗಳಿಗೆ ಅಭಿವೃದ್ಧಿ ವಿಶೇಷ ಯೋಜನೆ, ಉದ್ದೇಶಿತ ನಗರ ಯೋಜನೆಯಿಂದ ಬೆಂಗಳೂರಿಗೆ ಲಾಭವಾಗಲಿದೆ. ಇದರಡಿ 100 ಕೋಟಿ ಮಹಿಳಾ ಉದ್ಯೋಗಿಗಳಿಗೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ನೆರವು ಸಿಗಲಿದೆ.ಬೆಂಗಳೂರು ಕೃಷಿ ವಿ.ವಿ., ರಾಯಚೂರು ಕೃಷಿ ವಿ.ವಿ.ಗಳಲ್ಲಿ ಹವಾಮಾನ ಸಂಶೋಧನಾ ಘಟಕ, ಬೆಂಗಳೂರು ಸಾರ್ಟ್‌ ಸ್ಟಾರ್ಟ್‌ಅಪ್‌ಗಳಿಗೆ ಬಜೆಟ್‌ನಲ್ಲಿ ಉತ್ತೇಜನ ನೀಡಲಾಗಿದೆ ಎಂದು ಸಮರ್ಥಿಸಿಕೊಂಡರು.
10
+ ವಿಶೇಷವಾಗಿ ಯುವಕರಿಗೆ 3 ಹೊಸ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಇದರಲ್ಲಿ ಮುಖ್ಯವಾಗಿ ತರಬೇತಿ, ಇಂಟರ್ನ್‌ಶಿಪ್‌ ಯೋಜನೆ, ಕೌಶಲ್ಯಾಭಿವೃದ್ಧಿ ತರಬೇತಿ ಯೋಜನೆ, ಎನ್‌ಎಚ್‌ಎನ್‌ಇ ಅಭಿವೃದ್ಧಿಗೂ ಅನುದಾನ ಕೊಡಲಾಗಿದೆ.ಬೆಂಗಳೂರಿನ ಪೀಣ್ಯದಲ್ಲಿ ರಫ್ತು ಮಾಡುವ ಸಣ್ಣ ಕೈಗಾರಿಕೆಗಳು ಇರುವುದರಿಂದ ಎನ್‌ಎಚ್‌ಎನ್‌ಇ ಗಳಿಗೆ ಸ್ವಲ್ಪಮಟ್ಟಿನ ತೊಂದರೆಯಾಗುತ್ತಿತ್ತು. ಬಜೆಟ್‌ನಲ್ಲಿ ಅದಕ್ಕೂ ಉತ್ತರ ನೀಡಿದ್ದೇವೆ ಎಂದರು.
11
+ ಪ್ರಧಾನಮಂತ್ರಿ ವಿಪ್ರ ಕೈಗಾರಿಕಾ ಪಾರ್ಕ್‌ ಕಲಬುರಗಿಯಲ್ಲಿ ಸ್ಥಾಪನೆಯಾಗಲಿದೆ. ಹೀಗೆ ಎಲ್ಲಾ ವಲಯಕ್ಕೂ ಕೇಂದ್ರ ಸರ್ಕಾರ ಅನುದಾನ ಕೊಟ್ಟಿದೆ ಎಂದು ಅವರು ಸಮರ್ಥನೆ ಮಾಡಿದರು.ಇತ್ತೀಚೆಗೆ 1 ಲಕ್ಷ ಕೋಟಿ ರೂ. ಅನುದಾನವನ್ನು ರಾಜ್ಯದ ರಾಷ್ಟ್ರೀಯ ಹೆದ್ದಾರಿ ಸಂಬಂಧಿತ ಕಾಮಗಾರಿಗಳಲ್ಲಿ ವೆಚ್ಚ ಮಾಡಲಾಗಿದೆ. ರಾಷ್ಟ್ರಮಟ್ಟದಲ್ಲಿ ಸರಾಸರಿ ಹಂಚಿಕೆಯಡಿ ಕರ್ನಾಟಕಕ್ಕೆ ಹೆಚ್ಚಿನ ಪಾಲು ಸಿಕ್ಕಿದೆ. ಸರಾಸರಿ ರಾಷ್ಟ್ರೀಯ ಅನುದಾನ ಹಂಚಿಕೆ ಪ್ರಮಾಣ 5.4 ಇದೆ. ಅದರಲ್ಲಿ ಕರ್ನಾಟಕಕ್ಕೆ 6.58 ಪಾಲು ಸಿಗಲಿದೆ ಎಂದರು.ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತಿತರರು ಉಪಸ್ಥಿತರಿದ್ದರು.
eesanje/url_46_60_8.txt ADDED
@@ -0,0 +1,8 @@
 
 
 
 
 
 
 
 
 
1
+ ವಿಶೇಷ ಚೇತರನ ನಿಖರ ಮಾಹಿತಿಯ ಅಗತ್ಯವಿದೆ : ಸಿಜೆಐ ಚಂದ್ರಚೂಡ್‌
2
+ ಬೆಂಗಳೂರು, ಜು.28– ಅಂಗವೈಕಲ್ಯವನ್ನು ನೋಡುವ ರೀತಿಯಲ್ಲಿ ಗಮನಾರ್ಹ ಬದಲಾವಣೆಯಾಗಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಹೇಳಿದ್ದಾರೆ.
3
+ ಬೆಂಗಳೂರಿನಲ್ಲಿ ನಡೆದ ಭಾರತ ಪ್ರವೇಶ ಶೃಂಗಸಭೆ ಮತ್ತು ರಾಜ್ಯ ಅಂಗವಿಕಲ ಆಯುಕ್ತರ ಸಮಾವೇಶದ ಉದ್ಘಾಟನಾ ಅಧಿವೇಶನದಲ್ಲಿ ಮಾತನಾಡಿದ ಅವರು, ತರಬೇತಿ, ಸಾರ್ವಜನಿಕ ಸಭೆಗಳು ಮತ್ತು ನೀತಿ ನಿರೂಪಣೆಗಳು ಬದಲಾವಣೆಯನ್ನು ತಂದಿವೆ. ನಾವು ಅಂಗವೈಕಲ್ಯವನ್ನು ಸಮೀಪಿಸುವ ವಿಧಾನದಲ್ಲಿ ಗಮನಾರ್ಹ ಬದಲಾವಣೆಯಾಗಿದೆ.
4
+ ಆಡಳಿತಾತ್ಮಕ ಅಧಿಕಾರಿಗಳಿಗೆ ತರಬೇತಿ ಅಕಾಡೆಮಿಗಳು ಸಂವೇದನಾಶೀಲ ಮಾದರಿಗಳನ್ನು ಹೊಂದಿವೆ. ಕೆಲವು ರಾಜ್ಯಗಳಲ್ಲಿ ಸೇವೆ ಸುಧಾರಿಸಲು, ಜನರ ಜೀವನ ಅನುಭವಗಳೊಂದಿಗೆ ನೀತಿ-ನಿರ್ಮಾಣವನ್ನು ತಿಳಿಸಲು ಸಾರ್ವಜನಿಕ ಸಭೆಗಳನ್ನು ಆಯೋಜಿಸಲಾಗುತ್ತಿದೆ ಎಂದು ಸಿಜೆಐ ಹೇಳಿದರು.
5
+ ಹೈದರಾಬಾದ್‌ನ ನಲ್ಸಾರ್‌ನಲ್ಲಿರುವ ಅಂಗವಿಕಲ ಅಧ್ಯಯನ ಕೇಂದ್ರದಂತಹ ವಿಶ್ವವಿದ್ಯಾಲಯಗಳಲ್ಲಿ ಮೀಸಲಾದ ಕ್ಲಿನಿಕ್‌ಗಳು, ಸಿಎಲ್‌ಪಿಆರ್‌ನಂತಹ ನೀತಿ ನಿರೂಪಣಾ ವೇದಿಕೆಗಳು, ಕಾನೂನು ನೀತಿಗಳ ವಿಧಿ ಕೇಂದ್ರಗಳು, ಎನ್‌ಜಿಒಗಳು ಮತ್ತು ಇತರ ಅನೇಕ ಸ್ವತಂತ್ರ ಮತ್ತು ಪ್ರಾಯೋಜಿತ ಸಂಸ್ಥೆಗಳು ವಾಸ್ತವತೆಯ ತಿಳುವಳಿಕೆಯನ್ನು ಹೆಚ್ಚಿಸಿವೆ ಎಂದರು.
6
+ ಖಾಸಗಿ ಕಾರ್ಪೊರೇಟ್‌ ಸಂಸ್ಥೆಗಳು ಸಂಶೋಧನಾ ಅನುದಾನಗಳು, ಸಿಎಸ್‌‍ಆರ್‌ ಕೊಡುಗೆಗಳು ಮತ್ತು ಅಂತರ್ಗತ ನೇಮಕಾತಿ ಅಭ್ಯಾಸಗಳಿಂದ ಹಿಡಿದು ಪ್ರಯತ್ನಗಳನ್ನು ಉತ್ತೇಜಿಸುವಲ್ಲಿ ಉತ್ತಮ ಉಪಕ್ರಮವನ್ನು ತೋರಿಸಿವೆ ಎಂದು ನ್ಯಾಯಮೂರ್ತಿ ಚಂದ್ರಚೂಡ್‌ ಹೇಳಿದರು.
7
+ ಅಂಗವೈಕಲ್ಯ ಹೊಂದಿರುವ ವ್ಯಕ್ತಿಗಳಿಗೆ ಪ್ರವೇಶ, ಸ್ವಾಯತ್ತತೆ, ಸಮಾನ ಭಾಗವಹಿಸುವಿಕೆಗೆ ಪೂರಕ ವಾತಾವರಣ ಅಗತ್ಯವಿದೆ. ವಿಶೇಷ ಚೇತನ ವ್ಯಕ್ತಿಗಳ ನಿಖರವಾದ ಅಂಕಿಅಂಶಗಳಿಗೆ ಅಗತ್ಯ ಕ್ರಮ ಕೈಗೊಳ್ಳಬೇಕಿದೆ. ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳು ವಿಕಲಚೇತನರನ್ನು ಹೆಚ್ಚಾಗಿ ನೇಮಿಸಿಕೊಳ್ಳುತ್ತಿವೆ. ಪರಿಸ್ಥಿತಿಗಳು ನಿಧಾನವಾಗಿ ಬದಲಾಗುತ್ತಿವೆ ಎಂದು ತಿಳಿಸಿದರು.
8
+ ಸುಮಾರು 20 ಕೋಟಿ ಜನರು ಮನೋ ಸಾಮಾಜಿಕ ಅಸಾಮರ್ಥ್ಯಗಳೊಂದಿಗೆ ವಾಸಿಸುತ್ತಿದ್ದಾರೆ. ಅವರ ಅಗತ್ಯಗಳನ್ನು ಸರಿಯಾಗಿ ಪತ್ತೆಹಚ್ಚಲು ಮತ್ತು ಸರಿಹೊಂದಿಸಲು ನಾವು ಸಿದ್ಧರಿಲ್ಲ. ಈ ವಿಷಯವಾಗಿ ಪ್ರಾಮಾಣಿಕ ಮತ್ತು ಉದ್ದೇಶಪೂರ್ವಕ ಸಂವಹನ ನಡೆಯಬೇಕಿದೆ ಎಂದು ಹೇಳಿದರು.
eesanje/url_46_60_9.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ಕೇಂದ್ರದ ಅಧೀನದಲ್ಲಿರುವ ಸಾರ್ವಜನಿಕ ಉದ್ದಿಮೆಗಳ ಪುನಶ್ಚೇತನಕ್ಕೆ ಕಾರ್ಯಯೋಜನೆ : ಹೆಚ್ಡಿಕೆ
2
+ ಬೆಂಗಳೂರು,ಜು.28-ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸಾರ್ವಜನಿಕ ಉದ್ದಿಮೆಗಳನ್ನು ಪುನಶ್ಚೇತನಗೊಳಿಸಲು ಕಾರ್ಯಯೋಜನೆ ರೂಪಿಸಲಾಗುತ್ತಿದ್ದು, ಬಂಡವಾಳ ಹಿಂತೆಗೆತ ಎಂಬ ನಿರ್ಧಾರವನ್ನು ಹಿಂಪಡೆದು ಮರು ಹೂಡಿಕೆ ಎಂಬ ಪರಿಸ್ಥಿತಿ ನಿರ್ಮಾಣವಾಗಬೇಕಿದೆ. ಇದಕ್ಕಾಗಿ ಸತತ ಪ್ರಯತ್ನ ನಡೆಸಲಾಗುತ್ತಿದೆ ಎಂದು ಕೇಂದ್ರ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
3
+ ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಕೇಂದ್ರ ಸರ್ಕಾರ ಬಂಡವಾಳ ಹಿಂತೆಗೆತ ಎಂಬ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಹಳಷ್ಟು ಕಂಪನಿಗಳು ಮುಚ್ಚಿ ಹೋಗಿವೆ. ಎಚ್‌ಎಂಟಿ ಒಂದು ಕಾಲದಲ್ಲಿ ಕೈಗಡಿಯಾರದ ಮಾರುಕಟ್ಟೆಯ ಶೇ.90 ರಷ್ಟು ಪಾಲು ಹೊಂದಿತ್ತು. 1975 ರಲ್ಲಿ 279 ಕೋಟಿ ರೂ. ಲಾಭ ಗಳಿಸಿತ್ತು. ಇಂದು ಅದರ ಮಾರುಕಟ್ಟೆ ಮೌಲ್ಯ 27 ಸಾವಿರ ಕೋಟಿಯಷ್ಟಾಗಬಹುದು. ಅಷ್ಟು ವೈಭವವಾಗಿ ನಡೆಯುತ್ತಿದ್ದ ಕಾರ್ಖಾನೆಯನ್ನು ಇಂದು ಅಧೋಗತಿಗೆ ತಂದಿಟ್ಟವರ್ಯಾರು ಎಂದು ಪ್ರಶ್ನಿಸಿದರು.
4
+ 1983-84 ರಲ್ಲಿ ಎಚ್‌ಎಂಟಿಯಲ್ಲಿದ್ದ 350 ತಜ್ಞ ಎಂಜಿನಿಯರ್‌ಗಳನ್ನು ಟೈಟಾನ್‌ ಮತ್ತು ಟಾಟಾ ಕಂಪನಿಯವರು ಒಂದೇ ರಾತ್ರಿ ಕರೆದುಕೊಂಡು ಹೋದರು. ಕಾರ್ಖಾನೆ ಇಂದು ಮುಚ್ಚುವ ಸ್ಥಿತಿಗೆ ಬಂದಿದೆ. ನಾನು ಒಂದು ಘಟಕಕ್ಕೆ ಭೇಟಿ ನೀಡಿದ ತಕ್ಷಣ 47 ರೂ. ಇದ್ದ ಷೇರು ಮೌಲ್ಯ 92 ರೂ.ಗೆ ಹೆಚ್ಚಾಗಿದೆ. ಸಾರ್ವಜನಿಕ ಉದ್ದಿಮೆಗಳನ್ನು ಮತ್ತೆ ಪುನಶ್ಚೇತನಗೊಳಿಸಬೇಕಿದೆ.
5
+ ಪ್ರಧಾನಮಂತ್ರಿ ನರೇಂದ್ರ ಮೋದಿ ಕೇಂದ್ರ ವಾಣಿಜ್ಯ, ಹಣಕಾಸು ಹಾಗೂ ಇತರ ಇಲಾಖೆಗಳ ಮನವೊಲಿಕೆ ಮಾಡಿ ಬಂಡವಾಳ ಹಿಂತೆಗೆತ ಎಂಬ ನಿರ್ಧಾರವನ್ನು ಬದಲಾವಣೆ ಮಾಡಿ ಬಂಡವಾಳ ಮರು ಹೂಡಿಕೆ ಎಂಬ ತೀರ್ಮಾನ ಮಾಡಬೇಕಿದೆ. ನನಗೆ ಆರು ತಿಂಗಳ ಕಾಲ ಸಮಯಾವಕಾಶ ಕೊಡಿ. ನಷ್ಟದಲ್ಲಿರುವ ಒಂದು ಉದ್ದಿಮೆಯನ್ನು ಲಾಭದಾಯಕವನ್ನಾಗಿ ಮಾಡಿ ಕೇಂದ್ರದ ಪ್ರಮುಖರ ಮನವೊಲಿಸಿ ಮರಳಿ ಮರುಹೂಡಿಕೆಯ ನಿರ್ಧಾರ ಮಾಡುತ್ತೇನೆ ಎಂದು ಹೇಳಿದರು.
6
+ ರಾಜ್ಯದ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯಲ್ಲಿ 15 ಸಾವಿರ ಜನ ಕೆಲಸ ಮಾಡುತ್ತಿದ್ದರು. ಅದು ತುಕ್ಕು ಹಿಡಿದಿದೆ. ಅದೇ ರೀತಿ ಹಲವು ಉದ್ದಿಮೆಗಳು ಮುಚ್ಚಿ ಹೋಗಿವೆ. ಇವುಗಳ ಪುನಶ್ಚೇತನಕ್ಕೆ ದಿನಕ್ಕೆ 15 ಸಭೆ ನಡೆಸುತ್ತಿದ್ದೇನೆ ಎಂದು ಹೇಳಿದರು.
7
+ ಕಾವೇರಿ ನೀರನ್ನು ರಾಜ್ಯಕ್ಕೆ ಉಳಿಸಲು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದಾಗ ಕೈ ಜೋಡಿಸಿ ಮನವಿ ಮಾಡಿದ್ದಾರೆ. ಕೇಂದ್ರ ಜಲಶಕ್ತಿ ಸಚಿವರನ್ನೂ ಭೇಟಿ ಮಾಡಿ ಮನವಿ ಮಾಡಿದ್ದು, ಶೀಘ್ರವೇ ಕಾವೇರಿ ವಿಚಾರವಾಗಿ ಸಭೆ ಕರೆಯುವುದಾಗಿ ಭರವಸೆ ದೊರೆತಿದೆ.
8
+ ಸೋಮವಾರ ರಾಜ್ಯಸಭೆಯಲ್ಲಿ ದೇವೇಗೌ���ರು ಯೋಜನೆಯ ಬಗ್ಗೆ ಪ್ರಸ್ತಾಪ ಮಾಡಲಿದ್ದಾರೆ. ನಾನು ಅಲ್ಲಿ ಇರಬೇಕು. ಇಲ್ಲವಾದರೆ ತಮಿಳುನಾಡಿನ 10 ಮಂದಿ ಸಂಸದರು ಎದ್ದುನಿಂತು ಗಲಾಟೆ ಮಾಡುತ್ತಾರೆ ಎಂದು ಹೇಳಿದರು.
9
+ ರಾಜ್ಯದವರೇ ಆದ ಮಲ್ಲಿಕಾರ್ಜುನ ಖರ್ಗೆ ಎಂದಾದರೂ ಕಾವೇರಿಯ ಬಗ್ಗೆ ಪ್ರಸ್ತಾಪ ಮಾಡಿದ್ದಾರೆಯೇ?, ಹಿರಿಯರಾದರೂ ದೇವೇಗೌಡರು ಮೇಜು ಹಿಡಿದುಕೊಂಡು ಎದ್ದುನಿಂತು ಮಾತನಾಡುತ್ತಾರೆ. ಕಾಂಗ್ರೆಸ್‌‍ ನಾಯಕರು ಏಕೆ ಬಾಯಿ ಬಿಡುತ್ತಿಲ್ಲ? ಎಂದರು.
10
+ ಕಾವೇರಿ ನೀರು ನಿರ್ವಹಣೆ ಪ್ರಾಧಿಕಾರ ಆದೇಶ ಮಾಡಿದ್ದಕ್ಕಿಂತಲೂ ಹೆಚ್ಚಿನ ನೀರನ್ನು ತಮಿಳುನಾಡಿಗೆ ಈಗಾಗಲೇ ಹರಿಯಬಿಡಲಾಗಿದೆ. ನೀರು ಬಿಡುವ ನಿರ್ಧಾರ ತೆಗೆದುಕೊಂಡು ಬಳಿಕ ಸರ್ವಪಕ್ಷ ಸಭೆ ಕರೆದಿದ್ದರು. ಇಂಡಿಯಾ ರಾಜಕೀಯ ಮಿತ್ರಕೂಟದ ಪಾಲುದಾರ ಪಕ್ಷವಾಗಿರುವ ಡಿಎಂಕೆಯ ಎಂ.ಕೆ.ಸ್ಟಾಲಿನ್‌ ಅವರನ್ನು ರಾಜ್ಯದ ಮುಖ್ಯಮಂತ್ರಿಗಳು ಎಂದಾದರೂ ಭೇಟಿ ಮಾಡಿ ಪ್ರಾಮಾಣಿಕವಾದ ಚರ್ಚೆ ನಡೆಸಿದ್ದಾರೆಯೇ ಎಂದು ಪ್ರಶ್ನಿಸಿದರು.
11
+ ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕುಮಾರಸ್ವಾಮಿ, ದೇಸಾಯಿ ಅವರ ಏಕಸದಸ್ಯ ನ್ಯಾಯಾಂಗ ಆಯೋಗ ಮಾಡಿರುವುದೇ ಹಗರಣದಿಂದ ಬಚಾವಾಗಲು. ವಿಧಾನಸಭೆಯಲ್ಲಿ 21 ಹಗರಣವನ್ನು ಪ್ರಸ್ತಾಪಿಸಿ 1,500 ಕೋಟಿ ರೂ. ಹಗರಣವಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯಮಂತ್ರಿಯಾಗಿ ಒಂದೂವರೆ ವರ್ಷವಾಗಿದೆ. ಈವರೆಗೂ ಹಗರಣಗಳ ವಿಚಾರದಲ್ಲಿ ಏನು ಕ್ರಮ ಕೈಗೊಂಡಿದ್ದಾರೆ ಎಂದು ಪ್ರಶ್ನಿಸಿದರು.
12
+ ಮುಡಾದಿಂದ ನೀಡಲಾದ ನಿವೇಶನಕ್ಕಾಗಿ ನಾನು 1984ರಲ್ಲೇ 37 ಸಾವಿರ ರೂ. ಪಾವತಿ ಮಾಡಿದ್ದೆ. ಆದರೆ ಈವರೆಗೂ ನನಗೆ ನಿವೇಶನ ಸಿಕ್ಕಿಲ್ಲ. ಬದಲಿ ನಿವೇಶನ ನೀಡುವಂತೆ ಹಲವು ಬಾರಿ ಪತ್ರ ಬರೆದಿದ್ದೇನೆ. ಯಾವುದೇ ಪ್ರಯೋಜನವಾಗಿಲ್ಲ. ನಿವೇಶನ ಪಡೆಯದೇ ಇದ್ದರೂ ನನ್ನ ವಿರುದ್ಧ ಆರೋಪ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
13
+ ಸಿದ್ದರಾಮಯ್ಯ ಅವರಿಗೆ ಪರಿಶಿಷ್ಟ ಜಾತಿಯ ಜನರ ಜಾಗವೇ ಬೇಕಿತ್ತೇ?, ಬೇರೆ ಎಲ್ಲೂ ಸ್ಥಳ ಸಿಗಲಿಲ್ಲವೇ?, ಅಧಿಕಾರಿಗಳು ಕಣ್ಣು ಮುಚ್ಚಿಕೊಂಡು ಜಾಗವನ್ನು ಪರಿವರ್ತನೆ ಮಾಡಿಕೊಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಉಪಮುಖ್ಯಮಂತ್ರಿ ಹಾಗೂ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ ಸಿದ್ದರಾಮಯ್ಯ ಅವರು ಭಾವಮೈದುನನಿಂದ ದಾನಪತ್ರ ಪಡೆದುಕೊಳ್ಳಬೇಕಿತ್ತೇ ಎಂದು ಪ್ರಶ್ನಿಸಿದ ಕುಮಾರಸ್ವಾಮಿ, 62 ಕೋಟಿ ರೂ. ಪರಿಹಾರ ನೀಡಬೇಕು ಎಂದು ಕೇಳುತ್ತಿದ್ದಾರೆ. ಯಾರಪ್ಪನ ದುಡ್ಡು ಎಂದು ಕೊಡಬೇಕು? ಎಂದು ಕಿಡಿಕಾರಿದರು.
eesanje/url_46_61_1.txt ADDED
@@ -0,0 +1,6 @@
 
 
 
 
 
 
 
1
+ ಶಿರೂರು ಗುಡ್ಡ ಕುಸಿತ ದುರಂತ : ಸತತ 12 ದಿನಗಳಿಂದ ನಡೆಯುತ್ತಿದ್ದ ರಕ್ಷಣಾ ಕಾರ್ಯಾಚರಣೆಗೆ ಬ್ರೇಕ್
2
+ ಕಾರವಾರ ಜು.26:ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುಡ್ಡ ಕುಸಿದು ಸತತ 12 ದಿನ ಕಾರ್ಯಾಚರಣೆ ನಡೆಸಿದ ರಕ್ಷಣಾ ತಂಡಗಳು ವಾಪಸಾಗಿದೆ. ಘಟನೆಯಲ್ಲಿ ಆಟವಾಡುತಿದ್ದ ಪುಟ್ಟ ಕಂದಮ್ಮಗಳು, ಟೀ ಅಂಗಡಿಯಲ್ಲಿ ಚಹ ಸವಿಯುತಿದ್ದ ಟ್ರಕ್‌ ಚಾಲಕರು, ಗುಡ್ಡದ ಬದಿಯಲ್ಲಿ ವಿಶ್ರಾಂತಿ ಪಡೆಯುತಿದ್ದ ಚಾಲಕ, ಮನೆಯಲ್ಲಿ ಅಡುಗೆ ಮಾಡುತಿದ್ದ ಮಹಿಳೆ ಸೇರಿ 11 ಜನ ಭೂ ಕುಸಿತ ದುರಂತದಲ್ಲಿ ಕಾಣೆಯಾಗಿದ್ದರು.
3
+ ಸತತ ಕಾರ್ಯಾಚರಣೆ ನಂತರ ಗಂಗಾವಳಿ ನದಿ ತೀರದ ಭಾಗದಲ್ಲಿ ಎಂಟು ಶವಗಳು ದೊರೆತಿತ್ತು ಆದರೆ, ಕೇರಳ ಮೂಲದ ಅರ್ಜುನ್‌, ಶಿರೂರಿನ ಲೋಕೇಶ್‌ ನಾಯ್ಕ, ಜಗನ್ನಾಥ ನಾಯ್ಕ ರವರಿಗಾಗಿ ಶೋಧ ಕಾರ್ಯ ನಡೆಯುತ್ತಿತ್ತು.ಟೀ ಅಂಗಡಿ ಬಳಿ ಮಣ್ಣು ತೆರವು ಮಾಡಿದರೂ ಯಾವ ಗುರುತು ಪತ್ತೆಯಾಗಲೇ ಇಲ್ಲ. ಹೀಗಾಗಿ ಸೇನಾಪಡೆ , ಖಾಸಗಿ ಏಜೆನ್ಸಿ ಸಹಾಯ ಪಡೆದ ಜಿಲ್ಲಾಡಳಿತ. ತಂತ್ರಜ್ಞಾನ ಸಹಾಯದಿಂದ ಘಟನಾ ಸ್ಥಳದ ಸುತ್ತಮುತ್ತ ಶೋಧ ಕಾರ್ಯ ನಡೆಸಿದೆ.
4
+ ಇನ್ನು ದ್ರೋಣ್‌ ಹಾಗೂ ಥರ್ಮಲ್‌ ಸ್ಕ್ಯಾನ್‌ ಕಾರ್ಯಾಚರಣೆ ನಡೆಸಿದ ಖಾಸಗಿ ಕಂಪನಿಯ ನಿವೃತ್ತ ಮೇಜರ್‌ ಜನರಲ್‌ ಇಂದ್ರಬಾಲನ್‌ ಹೇಳುವಂತೆ ನದಿಯಲ್ಲಿ ರೆಲಿಂಗ್‌‍, ಟವರ್, ಲಾರಿ, ಟ್ಯಾಂಕರ್‌ ಕ್ಯಾಬಿನ್‌ ಸಿಗಬೇಕಿತ್ತು. ಮೂರು ಸ್ಪಾಟ್‌ಗಳು ಸಿಕ್ಕಿದ್ದು, ಅದರ ಪೈಕಿ ಅರ್ಜುನ್‌ ಲಾರಿ ಯಾವುದು ಎಂದು ಸಿಗಬೇಕಿದೆ . 60 ಮೀ. ಉದ್ದ ಹಾಗೂ 20 ಮೀ. ಆಳದಲ್ಲಿ ಒಂದು ಮೆಟಲ್‌ ಡಿಟೆಕ್ಟ್‌ ಆಗಿದ್ದು, 400 ಲಾಗ್ಸ್ ಟ್ರಕ್‌ನಲ್ಲಿದ್ದರಿಂದ ಹೆಚ್ಚು ಆಳದಲ್ಲಿ ಇರುವ ಸಾಧ್ಯತೆಗಳಿತ್ತು. 500 ಮೀ. ದೂರದಲ್ಲಿ ಮರದ ದಿಮ್ಮಿಗಳು ಸಿಕ್ಕಿದ್ದು, ಲಾರಿಯಿಂದ ಕೆಲವು ದಿಮ್ಮಿಗಳು ದೂರಾಗಿವೆ.
5
+ ಎರಡು ಸ್ಪಾಟ್‌ಗಳ ಪೈಕಿ ಲಾರಿ ಯಾವುದು ಎಂದು ನೋಡಲಾಗುತ್ತಿದೆ. ತುಂಬಾ ಆಳದಲ್ಲಿರುವ ಸ್ಪಾಟ್‌ ಲಾರಿಯಾಗಿರಬಹುದು ಎಂದು ಊಹೆ ಮಾಡಲಾಗಿದೆ. ಟ್ರಕ್‌ನ ಉಳಿದ ಭಾಗಗಳ ಜತೆಯೇ ಕ್ಯಾಬಿನ್‌ ಕೂಡ ಇದೆ. ಅದರೊಳಗೆ ಅರ್ಜುನ್‌ ಇರುವ ಸಾಧ್ಯತೆಯಿದೆ. ನದಿಯ ನೀರಿನ ಹರಿವಿನ ವೇಗ 8 ನಾಟ್ಸ್ ಇದೆ.
6
+ ಡೀಪ್‌ ಡೈವರ್ಸ್‌ಗಳಿಗೆ ಅಲ್ಲಿ ಹೋಗಿ ಪತ್ತೆ ಮಾಡುವುದು ಭಾರಿ ಕಷ್ಟ ಆಗುತ್ತದೆ. ಹಾಗಾಗಿ ನದಿಯ ನೀರಿನ ಹರಿವು ಕಡಿಮೆ ಆಗುವವರೆಗೂ ಡೀಪ್‌ ಡೈವರ್ಸ್‌ ಕಾರ್ಯಾಚರಣೆ ಮಾಡುವುದು ಕಷ್ಟವಾಗಿದೆ. ಇನ್ನು ಮಳೆಯೂ ಕೂಡ ಹೆಚ್ಚುಇರುವುದರಿಂದ ರಾತ್ರಿಯಿಡೀ ಕಾರ್ಯಾಚರಣೆ ನಡೆಸಿ ಆದಷ್ಟು ಬೇಗ ರೆಸ್ಕ್ಯೂ ಕಾರ್ಯಾಚರಣೆ ನಡೆಸಲಾಗುವುದು ಎಂದು ತಜ್ಞರು ತಿಳಿಸಿದ್ದಾರೆ.ಇಂದು ಸೇನೆ ಕಾರ್ಯಾಚರನೆ ಮುಗಿಸಿದ್ದು,ಸ್ಥಳಕ್ಕೆ ಕೇರಳಾದಿಂದ ಕೆಲ ಶಾಸಕರು ಬೇಟಿ ನೀಡಿದ್ದಾರೆ.
eesanje/url_46_61_10.txt ADDED
@@ -0,0 +1,7 @@
 
 
 
 
 
 
 
 
1
+ ಮತ್ತೆ ರಾಮನಗರ ಮರುನಾಮಕರಣ ಮಾಡುವುದು ಕುಮಾರಸ್ವಾಮಿಯವರ ಹಣೆಯಲ್ಲಿ ಬರೆದಿಲ್ಲ : ಡಿಕೆಶಿ
2
+ ಬೆಂಗಳೂರು,ಜು.27– ರಾಮನಗರ ನಮ ಜಿಲ್ಲೆ. ಅಲ್ಲಿನ ಜನರ ಬದುಕು ಹಾಗೂ ಅಭಿವೃದ್ಧಿಯ ಬಗ್ಗೆ ಚಿಂತನೆ ಮಾಡಿ ನಾವು ಮರುನಾಮಕರಣದ ಮೂಲಕ ಅಗತ್ಯ ಕ್ರಮ ಕೈಗೊಂಡಿದ್ದೇವೆ ಎಂದು ಸ್ಪಷ್ಟಪಡಿಸಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮತ್ತೆ ಅಧಿಕಾರಕ್ಕೆ ಬಂದು ಹೆಸರು ಬದಲಾವಣೆ ಮಾಡುವುದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರ ಹಣೆಯಲ್ಲಿ ಬರೆದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
3
+ ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿಯವರು ಯಾವಾಗಲೂ ನನ್ನನ್ನು ಸರ್ವನಾಶ ಮಾಡಲು ಪ್ರಯತ್ನಿಸುತ್ತಿದ್ದಾರೆ. ಮಲಗಿ ಎದ್ದ ತಕ್ಷಣ ಅವರಿಗೆ ನಮ ವಿಚಾರ ನೆನಪಿಗೆ ಬರುತ್ತದೆ. ಅವರ ಆಚಾರ, ವಿಚಾರ, ಹೆಜ್ಜೆ, ಚಿಂತನೆ ಎಲ್ಲವೂ ನಮಗೆ ಗೊತ್ತಿದೆ ಎಂದರು.
4
+ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮರುನಾಮಕರಣ ಮಾಡಲಾಗಿದೆ. ರಾಮನಗರ ಜಿಲ್ಲಾ ಕೇಂದ್ರವಾಗಿಯೇ ಮುಂದುವರೆಯಲಿದೆ. ನಾವು ರಾಮನಗರವನ್ನು ಯಥಾಸ್ಥಿತಿಯಲ್ಲಿ ಉಳಿಸಿದ್ದೇವೆ ಎಂದು ಹೇಳಿದರು.
5
+ ಹೊರಗಿನಿಂದ ಬಂದು ಅಕ್ರಮ ಮಾಡಲು ರಾಜಕೀಯದಲ್ಲಿ ಅವಕಾಶವಿದೆ. ಆದರೆ ರಾಮನಗರ ನಮದು. ಈ ಹಿಂದೆ ಕೆಂಗಲ್‌ ಹನುಮಂತಯ್ಯ ಬೆಂಗಳೂರಿನಲ್ಲಿ ವಿಧಾನಸೌಧ ಕಟ್ಟಿದರು. ರಾಮಕೃಷ್ಣ ಹೆಗಡೆ, ಎಚ್‌.ಡಿ.ದೇವೇಗೌಡ, ಎಚ್‌.ಡಿ.ಕುಮಾರಸ್ವಾಮಿ ಕೂಡ ಬೆಂಗಳೂರು ಜಿಲ್ಲೆಯಿಂದಲೇ ಆಯ್ಕೆಯಾಗಿ ಅಧಿಕಾರ ಅನುಭವಿಸಿದರು.
6
+ ರಾಮನಗರ, ಮಾಗಡಿ, ಕನಕಪುರ, ಚನ್ನಪಟ್ಟಣ ಎಲ್ಲಾ ತಾಲ್ಲೂಕುಗಳ ಜನರು ನಮವರು. ಅವರ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಅಭಿವೃದ್ಧಿಗೆ ಪೂರಕವಾಗಿ ನಿರ್ಧಾರ ತೆಗೆದುಕೊಂಡಿದ್ದೇವೆ. ಬೆಂಗಳೂರಿಗೆ ವಿಶ್ವಮಟ್ಟದ ಖ್ಯಾತಿಯಿದೆ. ಆ ಹೆಸರನ್ನು ನಾವು ಏಕೆ ಬಿಟ್ಟುಕೊಡಬೇಕು ಎಂದು ಪ್ರಶ್ನಿಸಿದರು.
7
+ 2028 ಕ್ಕೆ ಮರಳಿ ಅಧಿಕಾರಕ್ಕೆ ಬಂದು ರಾಮನಗರ ಹೆಸರನ್ನು ಮರುನಾಮಕರಣ ಮಾಡುವುದಾಗಿ ಕುಮಾರಸ್ವಾಮಿ ಹೇಳಿರುವ ನೀಡಿಕೆಗೆ ಪ್ರತಿಕ್ರಯಿಸಿದ ಡಿ.ಕೆ.ಶಿವಕುಮಾರ್‌, ಅದು ಅವರ ಹಣೆಬರಹದಲ್ಲಿ ಬರೆದಿಲ್ಲ. 2028ಕ್ಕೂ ಕಾಂಗ್ರೆಸ್‌‍ ಪಕ್ಷವೇ ಮರಳಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.
eesanje/url_46_61_11.txt ADDED
@@ -0,0 +1,9 @@
 
 
 
 
 
 
 
 
 
 
1
+ ದೋಷಾರೋಪಣಾ ಪಟ್ಟಿ ಸಲ್ಲಿಕೆ ಬಳಿಕ ಜಾಮೀನಿಗೆ ಅರ್ಜಿ : ದರ್ಶನ್‌ ಪರ ವಕೀಲ
2
+ ಬೆಂಗಳೂರು,ಜು.27-ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ ಬಳಿಕ ನಟ ದರ್ಶನ್‌ ಹಾಗೂ ಇತರರಿಗೆ ಜಾಮೀನು ಅರ್ಜಿ ಸಲ್ಲಿಸುವುದಾಗಿ ವಕೀಲ ರಂಗನಾಥರೆಡ್ಡಿ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಪೊಲೀಸರ ತನಿಖೆಯ ಬಗ್ಗೆ ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ.
3
+ ಜಾಮೀನು ಅರ್ಜಿ ಸಲ್ಲಿಕೆ ವಿಳಂಬವಾಗಬೇಕು ಎಂಬ ಕಾರಣಕ್ಕಾಗಿಯೇ ಅಭಿಯೋಜನೆ ಅಧಿಕಾರಿಗಳು ತನಿಖೆಯಲ್ಲಿ ಗೊಂದಲ ಮೂಡಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.ಅಭಿಯೋಜನೆಯಲ್ಲಿ ಉದ್ದೇಶಪೂರ್ವಕವಾಗಿಯೇ ತನಿಖಾ ವರದಿ ಸಲ್ಲಿಕೆಯನ್ನು ವಿಳಂಬ ಮಾಡಲಾಗುತ್ತಿದೆ. ಇದು ಮುಂದಿನ ದಿನಗಳಲ್ಲಿ ನ್ಯಾಯಾಲಯದ ವಿಚಾರಣೆ ವೇಳೆ ತನಿಖೆಗೆ ಹಿನ್ನಡೆಯುಂಟು ಮಾಡುತ್ತದೆ ಎಂದಿದ್ದಾರೆ.
4
+ ರಿಮ್ಯಾಂಡ್‌ ಅರ್ಜಿಯಲ್ಲಿ ತನಿಖೆಯ ಸೂಕ್ತ ವಿವರಗಳನ್ನು ದಾಖಲಿಸದೆ ಜಾಮೀನು ಅರ್ಜಿ ಸಲ್ಲಿಕೆಗೆ ವಿಳಂಬವಾಗುವಂತೆ ಮಾಡಲಾಗುತ್ತಿದೆ. ಪೊಲೀಸ್‌‍ ಮ್ಯಾನ್ಯುಯೆಲ್‌ನಲ್ಲಿ 90 ದಿನಗಳಲ್ಲಿ ಅಂತಿಮ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಲೇಬೇಕು. ಅನಂತರ ನಾವು ದರ್ಶನ್‌ ಹಾಗೂ ಇತರರ ಪರವಾಗಿ ಜಾಮೀನು ಅರ್ಜಿಯನ್ನು ಸಲ್ಲಿಸುತ್ತೇವೆ ಎಂದರು.
5
+ ಪೊಲೀಸರು ರಿಮ್ಯಾಂಡ್‌ ಅರ್ಜಿಯಲ್ಲಿ ಸಮರ್ಪಕ ಮಾಹಿತಿಯನ್ನು ನೀಡುತ್ತಿಲ್ಲ. ಯಾವ ಆರೋಪಿಯಿಂದ ಯಾವ ರೀತಿ ಹೇಳಿಕೆ ಪಡೆಯಲಾಗಿದೆ. ಯಾವ ವ್ಯಕ್ತಿ ಯಾವ ರೀತಿಯ ಸಾಕ್ಷಿಯಾಗಿದ್ದಾನೆ. ಪಂಚರ ಸಾಕ್ಷಿಯೇ, ಮಹಜರು ಸಾಕ್ಷಿಯೇ, ಪ್ರತ್ಯಕ್ಷ ಸಾಕ್ಷಿಯೇ, ಸಾಂದರ್ಭಿಕ ಸಾಕ್ಷಿಯೇ ಎಂಬ ವಿವರಣೆಗಳನ್ನು ನೀಡುತ್ತಿಲ್ಲ. ಇದರಿಂದ ಜಾಮೀನು ಅರ್ಜಿ ಸಲ್ಲಿಸಲು ತಡೆ ನೀಡುವ ಪ್ರಯತ್ನ ಆಗಿರಬಹುದು ಎಂದು ದೂರಿದರು.
6
+ ಯಾವುದೇ ಪ್ರಕರಣದಲ್ಲಾದರೂ ರಿಮ್ಯಾಂಡ್‌ ಅರ್ಜಿಯಲ್ಲಿ ಸಂಪೂರ್ಣ ವಿವರವನ್ನು ದಾಖಲಿಸುವುದು ಪೊಲೀಸರ ಕರ್ತವ್ಯ. ಆದರೆ ಈ ಪ್ರಕರಣದಲ್ಲಿ ಸಮರ್ಪಕ ಮಾಹಿತಿ ನೀಡುತ್ತಿಲ್ಲ. ಹೀಗಾಗಿ ಜಾಮೀನು ಅರ್ಜಿ ಸಲ್ಲಿಕೆಯಲ್ಲಿ ವಿಳಂಬವಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.
7
+ ಈ ಪ್ರಕರಣ ಸಾಂದರ್ಭಿಕ ಸಾಕ್ಷ್ಯಗಳ ಮೇಲೆ ಅವಲಂಬಿತವಾಗಿದೆ. ಅಪಹರಣ, ಹಲ್ಲೆ ಮತ್ತು ನರಹತ್ಯೆ, ಮೂರನೆಯದಾಗಿ ಸಾಕ್ಷ್ಯ ನಾಶ ಆರೋಪಗಳಿವೆ. ಮೃತದೇಹವನ್ನು ವಿಲೇವಾರಿ ಮಾಡಿದ ಕೆಲ ಆರೋಪಿಗಳು ಠಾಣೆಗೆ ಹೋಗಿ ಶರಣಾಗಲು ಯತ್ನಿಸಿದ್ದರು ಎಂಬುದು ಪೊಲೀಸರ ಆರೋಪವಾಗಿದೆ.ತನಿಖೆಯಲ್ಲಿ ಎಲ್ಲಾ ಖಚಿತ ಮಾಹಿತಿಗಳನ್ನು ದಾಖಲಿಸಬೇಕಿತ್ತು. ಸೆಲಬ್ರೆಟಿ ಇದ್ದಾರೆ ಎಂಬ ಕಾರಣಕ್ಕಾಗಿ ಪಾರದರ್ಶಕ ದಾರಿಯನ್ನು ತಪ್ಪಿಸಲಾಗುತ್ತಿದೆ ಎಂದು ದೂರಿದರು.
8
+ ಪ್ರಕರಣದಲ್ಲಿ ಪ್ರತ್ಯಕ್ಷದರ್ಶಿ ಸಾಕ್ಷಿ ಇದೆ ಎಂದು ಒಂದು ಬಾರಿ ಹೇಳಿದ್ದಾರೆ. ಮತ್ತೊಂದು ಬಾರಿ ವಿಡಿಯೋ ಸಾಕ್ಷ್ಯ ಇದೆ ಎಂದಿದ್ದಾರೆ. ನಾಲ್ಕನೇ ಬಾರಿ ��ಿಮ್ಯಾಂಡ್‌ ಅರ್ಜಿಯಲ್ಲಿ ವಿಡಿಯೋ ಇರುವ ಬಗ್ಗೆ ಮಾಹಿತಿಯನ್ನೇ ನೀಡಿಲ್ಲ. ಈ ರೀತಿ ನಾನಾ ರೀತಿಯ ಗೊಂದಲಗಳು ಕಂಡುಬರುತ್ತಿದೆ ಎಂದು ಹೇಳಿದ್ದಾರೆ.
9
+ ಸೆಲೆಬ್ರೆಟಿಗಳು ಇದ್ದಾರೆ ಎಂಬ ಕಾರಣಕ್ಕಾಗಿ ಪ್ರಕರಣವನ್ನು ಬಲಪಡಿಸುವ ತಪ್ಪು ಪ್ರಯತ್ನವನ್ನು ಅಭಿಯೋಜನೆ ನಡೆಸುತ್ತಿದೆ. ಇದು ಸರಿಯಲ್ಲ. ಇದಕ್ಕಿಂತಲೂ ಗಂಭೀರವಾದ ಪ್ರಕರಣಗಳಲ್ಲಿ ಜಾಮೀನು ದೊರೆತ ಸಾಕಷ್ಟು ಉದಾಹರಣೆಗಳಿವೆ ಎಂದು ಹೇಳಿದರು.
eesanje/url_46_61_12.txt ADDED
@@ -0,0 +1,7 @@
 
 
 
 
 
 
 
 
1
+ ಕೇಂದ್ರ ಬಜೆಟ್‌ನಲ್ಲಿ /STಗೆ ಕೇವಲ 65 ಸಾವಿರ ಕೋಟಿ ರೂ. ಮೀಸಲು : ಸಿದ್ದರಾಮಯ್ಯ ಅಸಮಾಧಾನ
2
+ ಬೆಂಗಳೂರು,ಜು.27-ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್‌ನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಕೇವಲ 65 ಸಾವಿರ ಕೋಟಿ ರೂ.ಗಳನ್ನು ಮಾತ್ರ ಮೀಸಲಿಡಲಾಗಿದೆ. ಈ ಬಗ್ಗೆ ಯಾವ ಸಂಘಟನೆಗಳೂ ಪ್ರಶ್ನೆ ಮಾಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
3
+ ಮೈಸೂರು ಪ್ರವಾಸದಲ್ಲಿರುವ ಸಿಎಂ ಅವರ ನಿವಾಸದ ಬಳಿ ನೂರಾರು ಜನ ಆಗಮಿಸಿ ಅಹವಾಲು ಸಲ್ಲಿಸಿದರು. ಈ ಸಂದರ್ಭದಲ್ಲಿ ದಲಿತ ಸಂಘಟನೆಗಳ ಮುಖಂಡರು ಮನವಿ ಸಲ್ಲಿಸಿ, ವಿವಿಧ ಯೋಜನೆಗಳ ಕುರಿತು ಗಮನ ಸೆಳೆದರು.
4
+ ಈ ಸಂದರ್ಭದಲ್ಲಿ ಸಿದ್ದರಾಮಯ್ಯನವರು ಕೇಂದ್ರಸರ್ಕಾರ 48 ಲಕ್ಷ ಕೋಟಿ ರೂ. ಗಾತ್ರದ ಬಜೆಟ್‌ ಮಂಡಿಸಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ನೀಡಿರುವುದು ಕೇವಲ 65 ಸಾವಿರ ಕೋಟಿ ರೂ. ಮಾತ್ರ. ಅದೇ ಕರ್ನಾಟಕದಲ್ಲಿ 3.70 ಲಕ್ಷ ಕೋಟಿ ರೂ. ಬಜೆಟ್‌ ಗಾತ್ರದಲ್ಲಿ ನಮ ಸರ್ಕಾರ ಈ ಸಮುದಾಯದ ಅಭಿವೃದ್ಧಿಗೆ 39 ಸಾವಿರ ಕೋಟಿ ರೂ.ಗಳನ್ನು ಒದಗಿಸಿದೆ ಎಂದು ಹೇಳಿದರು.
5
+ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನಸಂಖ್ಯೆಗನುಗುಣವಾಗಿ ಬಜೆಟ್‌ನಲ್ಲಿ ಅನುದಾನ ಮೀಸಲಿಡಲು ಪೂರಕವಾಗಿ ಮಸೂದೆ ರಚಿಸಲಾಗಿದೆ. ಅದಕ್ಕೂ ಮೊದಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ 10 ಸಾವಿರ ಕೋಟಿ ರೂ.ಕ್ಕಿಂತಲೂ ಕಡಿಮೆ ಹಣ ದೊರೆಯುತ್ತಿತ್ತು. ಕಾಯಿದೆ ರಚನೆ ಬಳಿಕ 39 ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ಅನುದಾನ ದೊರೆಯುತ್ತಿದೆ ಎಂದು ವಿವರಿಸಿದರು.
6
+ ಪ್ರತಿಯೊಂದು ರಾಜ್ಯದಲ್ಲೂ ರಾಜ್ಯಸರ್ಕಾರವನ್ನು ಪ್ರಶ್ನೆ ಮಾಡಲಾಗುತ್ತದೆ. ಕೇಂದ್ರಸರ್ಕಾರವನ್ನು ಏಕೆ ಕೇಳುತ್ತಿಲ್ಲ? 48 ಲಕ್ಷ ಕೋಟಿ ರೂ.ಗಳ ಗಾತ್ರದ ಬಜೆಟ್‌ಗೆ ಪೂರಕವಾಗಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಅನುದಾನ ಮೀಸಲಿಡಲಾಗಿಲ್ಲ. ಈ ಕುರಿತು ಯಾರಾದರೂ ಗಮನ ಹರಿಸಿದ್ದಾರೆಯೇ ಎಂದು ಪ್ರಶ್ನಿಸಿದರು.
7
+ ಇದೇ ಸಂದರ್ಭದಲ್ಲಿ ನೂರಾರು ಮಂದಿ ಮುಖ್ಯಮಂತ್ರಿಯವರ ನಿವಾಸದ ಬಳಿ ಬಂದು ಅಹವಾಲು ಸಲ್ಲಿಸಿದರು. ಅದರಲ್ಲಿ ಬಹಳಷ್ಟು ಮಂದಿ ನಿವೇಶನ, ಆರೋಗ್ಯ ಸಮಸ್ಯೆ ಸೇರಿದಂತೆ ವಿವಿಧ ತೊಂದರೆಗಳ ಬಗ್ಗೆ ಮುಖ್ಯಮಂತ್ರಿಯವರಿಗೆ ಮನವಿ ಮಾಡಿಕೊಂಡರು.ಎಲ್ಲರ ಬಳಿಯೂ ಸಾವಧಾನದಿಂದ ಅರ್ಜಿಗಳನ್ನು ಸ್ವೀಕರಿಸಿದ ಮುಖ್ಯಮಂತ್ರಿ ಅದಕ್ಕೆ ಪರಿಹಾರ ದೊರಕಿಸುವ ಭರವಸೆ ನೀಡಿದರು.